Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:19 - ಕನ್ನಡ ಸತ್ಯವೇದವು C.L. Bible (BSI)

19 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುವೆನು; ಅವನು ಅದರ ಜನರನ್ನೂ ಆಸ್ತಿಪಾಸ್ತಿಯನ್ನೂ ಒಯ್ದು, ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಿಕ್ಕುವ ಸಂಬಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುವೆನು; ಅವನು ಅದರ ಜನ ಯಾವತ್ತನ್ನು ಒಯ್ದು ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಂಬಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ರಾಜನಾದ ನೆಬೂಕದ್ನೆಚ್ಚರನಿಗೆ ನಾನು ಈಜಿಪ್ಟ್ ದೇಶವನ್ನು ಕೊಡುವೆನು. ನೆಬೂಕದ್ನೆಚ್ಚರನು ಈಜಿಪ್ಟಿನವರನ್ನು ಸೆರೆಹಿಡಿದು ಕೊಂಡೊಯ್ವನು. ಈಜಿಪ್ಟಿನ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚುವನು. ಇದು ಅವನ ಸೈನಿಕರ ಸಂಬಳವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಅದರ ಕೊಳ್ಳೆಯನ್ನೂ ಅದರ ಸುಲಿಗೆಯನ್ನೂ ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:19
12 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಬಾಬಿಲೋನಿನ ಅರಸನ ಖಡ್ಗ ನಿನ್ನ ಮೇಲೆ ಬೀಳುವುದು.


ಖಡ್ಗವು ಈಜಿಪ್ಟಿನ ಮೇಲೆ ಬೀಳುವುದು; ಅಲ್ಲಿ ಪ್ರಜೆಗಳು ಹತರಾಗಲು ಸುಡಾನಿನಲ್ಲಿಯೂ ಸಂಕಟವಾಗುವುದು; ಈಜಿಪ್ಟಿನಲ್ಲಿ ಹಲವರು ಸತ್ತುಬೀಳುವರು, ಅದರ ಅಸ್ತಿಭಾರ ಹಾಳಾಗುವುದು.


“ಇದಲ್ಲದೆ ಈಜಿಪ್ಟಿನವರನ್ನು ಕ್ರೂರ ಅರಸನ ವಶಕ್ಕೆ ಒಪ್ಪಿಸುವೆನು. ರಾಜನು ದಬ್ಬಾಳಿಕೆಯಿಂದ ಅವರನ್ನು ಆಳುವನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.”


ಅದು ಸಮುದ್ರದ ನಡುವೆ ಬಲೆಗಳಿಗೆ ಹಾಸುಬಂಡೆಯಾಗುವುದು; ನಾನೇ ಇದನ್ನು ನುಡಿದಿದ್ದೇನೆ, ಎಂದು ಸರ್ವೇಶ್ವರನಾದ ದೇವರು ಎನ್ನುತ್ತಾರೆ; ಅದು ಜನಾಂಗಗಳಿಗೆ ಸೂರೆಯಾಗುವುದು;


ನಾನು ದಕ್ಷಿಣ ಈಜಿಪ್ಟನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಕ್ಕಿ, ತೆಬೆಸಿನ ರಾಜಧಾನಿಯನ್ನು ದಂಡಿಸಿ,


“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನಿಗೂ ಅವನ ಅಸಂಖ್ಯಾತ ಪ್ರಜೆಗೂ ಹೀಗೆ ನುಡಿ:


ಈಜಿಪ್ಟಿನಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ಕರಗಿಸಿ ಆ ದೇಶವನ್ನು ಹಾಳುಪಾಳುಮಾಡಿ ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.


‘ಕೊಳ್ಳೆಹೊಡೆಯಬೇಕು, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕು ಹಾಗು ಜನಾಂಗಗಳಿಂದ ಒಟ್ಟುಗೂಡಿ, ದನ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು ಲೋಕದ ನಟ್ಟನಡುವೆ ವಾಸಿಸುವವರನ್ನು ಹತಿಸಬೇಕು’ ಎಂದು ಕುತಂತ್ರ ಕಲ್ಪಿಸುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು