Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:20 - ಕನ್ನಡ ಸತ್ಯವೇದವು C.L. Bible (BSI)

20 ಅವನು ಸೈನ್ಯಸಮೇತ ನನ್ನ ಪರವಾಗಿ ಸೇವೆಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಈಜಿಪ್ಟ್ ದೇಶವನ್ನು ಅವನಿಗೆ ಕೊಟ್ಟಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಸೈನ್ಯ ಸಮೇತನಾಗಿ ನನಗೋಸ್ಕರ ಸೇವೆ ಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಐಗುಪ್ತ ದೇಶವನ್ನು ಅವನಿಗೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಸೈನ್ಯಸಮೇತನಾಗಿ ನನಗೋಸ್ಕರ ಸೇವೆಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಐಗುಪ್ತ ದೇಶವನ್ನು ಅವನಿಗೆ ಕೊಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೆಬೂಕದ್ನೆಚ್ಚರನು ಪ್ರಯಾಸದ ಕೆಲಸ ಮಾಡಿದ್ದರಿಂದ ನಾನು ಅವನಿಗೆ ಪ್ರತಿಫಲವಾಗಿ ಈಜಿಪ್ಟ್ ದೇಶವನ್ನು ಕೊಟ್ಟೆನು. ಯಾಕೆಂದರೆ ಅವರು ನನಗೋಸ್ಕರ ಪ್ರಯಾಸಪಟ್ಟರು.” ಇದು ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಈಜಿಪ್ಟ್ ದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಸೇವೆಮಾಡಿದ್ದಾರೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:20
5 ತಿಳಿವುಗಳ ಹೋಲಿಕೆ  

“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಸರ್ವೇಶ್ವರ ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡೆಸಿ ನನ್ನ ಮೆಚ್ಚಿಕೆಯನ್ನು ಪಡೆದೆ; ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದೆ. ಆದುದರಿಂದ ನಿನ್ನ ಸಂತಾನದವರು ನಾಲ್ಕೆನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದು ಹೇಳಿದರು.


ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು