ಯೆಹೆಜ್ಕೇಲನು 29:3 - ಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ ಎಂದು ಅವರಿಗೆ ತಿಳಿಸು, “‘ಈಜಿಪ್ಟಿನ ರಾಜನಾದ ಫರೋಹನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನೀನು ನೈಲ್ ನದಿಯ ದಡದಲ್ಲಿ ಮಲಗಿರುವ ಪೇರ್ಮೊಸಳೆ, “ಇದು ನಾನು ನಿರ್ಮಿಸಿದ ಹೊಳೆ” ಎಂದು ನೀನು ಹೇಳಿಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ. ಅಧ್ಯಾಯವನ್ನು ನೋಡಿ |