Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:6 - ಕನ್ನಡ ಸತ್ಯವೇದವು C.L. Bible (BSI)

6 “ಆಗ ಈಜಿಪ್ಟಿನ ಸಕಲ ನಿವಾಸಿಗಳು, ‘ಇಸ್ರಯೇಲ್ ವಂಶದವರಿಗೆ ನಾವು ಬರೀ ದಂಟಿನ ಊರುಗೋಲಾದೆವು’ ಎಂದು ನಾಚಿಕೆಪಟ್ಟು ನಾನೇ ಸರ್ವೇಶ್ವರ ಎಂಬುದಾಗಿ ದೃಢಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಐಗುಪ್ತದ ಸಕಲ ನಿವಾಸಿಗಳು ನಾನೇ ಯೆಹೋವನು ಎಂದು ತಿಳಿಯವರು. ಅವರು ಇಸ್ರಾಯೇಲ್ ವಂಶದವರಿಗೆ ದಂಟಿನ ಊರುಗೋಲಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಐಗುಪ್ತದ ಸಕಲ ನಿವಾಸಿಗಳು ಇಸ್ರಾಯೇಲ್ ವಂಶದವರಿಗೆ ತಾವು ಬರೀ ದಂಟಿನ ಊರುಗೋಲಾದೆವು ಎಂದು ನಾಚಿಕೆಪಟ್ಟು ನಾನೇ ಯೆಹೋವನು ಎಂಬದಾಗಿ ದೃಢಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಈಜಿಪ್ಟಿನಲ್ಲಿ ವಾಸಮಾಡುವವರೆಲ್ಲರೂ ನಾನು ಒಡೆಯನಾದ ಯೆಹೋವನು ಎಂದು ತಿಳಿದುಕೊಳ್ಳುವರು. “‘ನಾನು ಯಾಕೆ ಹೀಗೆ ಮಾಡುತ್ತಿದ್ದೇನೆ? ಯಾಕೆಂದರೆ ಇಸ್ರೇಲಿನ ಜನರು ಈಜಿಪ್ಟಿನ ಸಹಾಯದ ಮೇಲೆ ಆತುಕೊಂಡರು. ಆದರೆ ಈಜಿಪ್ಟ್ ಪೊಳ್ಳು ಬೆತ್ತದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಎಲ್ಲಾ ಈಜಿಪ್ಟಿನ ನಿವಾಸಿಗಳು ನಾನೇ ಯೆಹೋವನೆಂದು ತಿಳಿಯುವರು. “ ‘ಅವರು ಇಸ್ರಾಯೇಲರ ಮನೆತನದವರಿಗೆ ದಂಟಿನ ಊರುಗೋಲಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:6
15 ತಿಳಿವುಗಳ ಹೋಲಿಕೆ  

ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟ್ ಎಂಬ ಊರುಗೋಲಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಆದರೆ ಅದು ಊರಿಕೊಳ್ಳುವವನ ಕೈಯನ್ನು ಚುಚ್ಚಿ ತಿವಿಯುವ ಕೋಲು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.


ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಅಂಥ ಜೊಂಡನ್ನು ಊರಿಕೊಳ್ಳುವವನ ಕೈಯನ್ನೇ ಚುಚ್ಚಿ ತಿವಿಯುವ ಕೋಲು ಅದು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.’


ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”


ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ.


ನಿಮ್ಮ ಮಾರ್ಗವನ್ನು ಕೈಬಿಟ್ಟು ಎಷ್ಟು ಸುಲಭವಾಗಿ ಅತ್ತಿತ್ತ ಓಡಾಡುತ್ತೀರಿ! ಅಸ್ಸೀರಿಯದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿರೋ ಹಾಗೆಯೇ ಈಜಿಪ್ಟಿನ ವಿಷಯವಾಗಿಯೂ ಆಶಾಭಂಗಪಡುವಿರಿ.


ರಾಹುತರನ್ನು ಸೋಲಿಸಿ ಪ್ರಖ್ಯಾತಿ ಹೊಂದಿದ ನಂತರ ನಾನೇ ಸರ್ವೇಶ್ವರ ಎಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು ಮೋಶೆಗೆ.


ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಫರೋಹನೂ ಅವನ ಮಹಾಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹುಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಬುರುಜುಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗದು.


ಈಜಿಪ್ಟ್ ಇನ್ನು ಇಸ್ರಯೇಲ್ ವಂಶದವರ ಭರವಸೆಯಾಗದು; ಅದರ ಕಡೆಗೆ ಕಣ್ಣೆತ್ತುವಾಗ ದೇವದ್ರೋಹದ ನೆನಪು ಇಸ್ರಯೇಲರಲ್ಲಿ ಹುಟ್ಟುವುದು; ನಾನೇ ಸರ್ವೇಶ್ವರ ಎಂದು ಅವರಿಗೆ ಮನದಟ್ಟಾಗುವುದು.”


ನಾನು ಈಜಿಪ್ಟಿಗೆ ಬೆಂಕಿಹಚ್ಚಿ, ಅದರ ಸಹಾಯಕರನ್ನೆಲ್ಲ ನಾಶಮಾಡಿದ ಮೇಲೆ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ ತಾನೆ ಸಾಧ್ಯ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು