Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:10 - ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ನಿನಗೆ ನುಡಿಯುವ, ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಮನಸ್ಸಿನಲ್ಲಿಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನಾನು ನಿನಗೆ ನುಡಿಯುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರು ನನಗೆ ಮತ್ತೇ ಹೇಳಿದ್ದೇನೆಂದರೆ, “ನರಪುತ್ರನೇ, ನಾನು ಹೇಳುವ ಪ್ರತಿಯೊಂದು ಮಾತನ್ನು ನೀನು ಕಿವಿಗೊಟ್ಟು ಕೇಳಬೇಕು. ಆ ಮಾತುಗಳನ್ನು ನೀನು ಜ್ಞಾಪಕದಲ್ಲಿಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಅವರು ನನಗೆ, “ಮನುಷ್ಯಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲ್ಲಾ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:10
13 ತಿಳಿವುಗಳ ಹೋಲಿಕೆ  

ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ಆತನ ಬಾಯಿಂದ ಬುದ್ಧಿ ಕಲಿತುಕೊ ಆತನ ಮಾತನು ಹೃದಯದಲ್ಲಿಟ್ಟುಕೊ.


ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


“ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು: ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿತೆರೆದು ತಿಂದುಬಿಡು,” ಎಂದರು.


ಬುದ್ಧಿವಾದವನ್ನು ಕೇಳು, ತಿದ್ದುಪಾಟನ್ನು ಅಂಗೀಕರಿಸು; ಹಾಗೆ ಮಾಡಿದರೆ ಮುಂದಕ್ಕೆ ಜ್ಞಾನಿಯಾಗಿ ಬಾಳುವೆ.


ಅಂಗೀಕರಿಸಿರಿ ಬೆಳ್ಳಿಗಿಂತ ಶ್ರೇಷ್ಠವಾದ ಬೋಧನೆಯನ್ನು ಅಪರಂಜಿಗಿಂತ ಅಪೂರ್ವವಾದ ಉಪದೇಶವನ್ನು.


ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ.


ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಕಠಿಣವಾದ ವಜ್ರದಷ್ಟು ಕಠಿಣಪಡಿಸಿದ್ದೇನೆ; ಅವರು ದ್ರೋಹಿ ವಂಶದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಬೆಚ್ಚದಿರು.”


ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆಹೋಗಿ ಅವರು ಕೇಳಲಿ ಅಥವಾ ಕೇಳದೆಹೋಗಲಿ ಅವರನ್ನು ಪ್ರಭೋಧಿಸು; ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ,’ ಎಂದು ಅವರಿಗೆ ಸಾರಿಹೇಳು.”


ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು