Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:17 - ಕನ್ನಡ ಸತ್ಯವೇದವು C.L. Bible (BSI)

17 “ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನರಪುತ್ರನೇ, ನಾನು ನಿನ್ನನ್ನು ಇಸ್ರೇಲರಿಗೆ ಕಾವಲುಗಾರನನ್ನಾಗಿ ಮಾಡಿದ್ದೇನೆ. ನಾನು ಅವರಿಗೆ ಸಂಭವಿಸುವ ಕೆಟ್ಟ ವಿಷಯಗಳನ್ನು ನಿನಗೆ ಹೇಳುತ್ತಿದ್ದೇನೆ. ಮತ್ತು ನೀನು ನನ್ನ ಪರವಾಗಿ ಅವರನ್ನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:17
29 ತಿಳಿವುಗಳ ಹೋಲಿಕೆ  

ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು.


ಆಲಿಸಿ ಕೇಳು ನಿನ್ನ ಕಾವಲುಗಾರರ ಕೂಗನು : ಸರ್ವೇಶ್ವರ ಸಿಯೋನಿಗೆ ಮರಳಿಬರುತ್ತಿರುವುದನು ಕಣ್ಣಾರೆ ಕಂಡು ಕೂಡಿಹಾಡುತ್ತಿಹರು ಗೀತವನು.


ಜುದೇಯದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರಲ್ಲಿ ಜೀವಹತ್ಯ ಸಂಬಂಧದಲ್ಲಿಯಾಗಲಿ ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಸರ್ವೇಶ್ವರನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ಹಾಗೂ ನೀವು ಅವರೊಂದಿಗೆ ದೇವಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗುವಿರಿ.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಸರ್ವೇಶ್ವರ ಸ್ವಾಮಿ ಕಾವಲುಗಾರರನ್ನು ನೇಮಿಸಿ, “ಕಹಳೆಯ ಕೂಗನ್ನು ಕೇಳಿ” ಎಂದರು. ಅವರು “ಇಲ್ಲ, ಕೇಳುವುದಿಲ್ಲ” ಎಂದು ಉತ್ತರಿಸಿದರು.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.


ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಬರೆಯಲಿಲ್ಲ. ನಮ್ಮ ನೆಚ್ಚಿನ ಮಕ್ಕಳಾದ ನಿಮ್ಮನ್ನು ಎಚ್ಚರಿಸಲೆಂದು ಬರೆದೆನು.


“ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲುಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಸರ್ವೇಶ್ವರ ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರುನೋಡುವೆನು.”


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ಈ ಕಾವಲುಗಾರರು ಕುರುಡರು, ಇವರಿಗೆ ತಿಳುವಳಿಕೆಯಿಲ್ಲ. ಇವರೆಲ್ಲರೂ ಬೊಗಳಲಾರದ ಮೂಕನಾಯಿಗಳು, ಮಲಗಿಕೊಂಡು ಕನವರಿಸುವ ನಿದ್ದೆಕೋರ ನಾಯಿಗಳು.


ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.


ಅದಕ್ಕೆ ನಾನು, “ಅಯ್ಯೋ ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ . ಅವರು ಕೇಳಿಸಿಕೊಳ್ಳುವುದಿಲ್ಲ . ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.


ಆಗ (ಸರ್ವೇಶ್ವರ ಸ್ವಾಮಿ) ನನಗೆ ಹೀಗೆಂದರು : “ಹೋಗು, ಪಹರೆಯೊಬ್ಬನನ್ನು ಇಡು. ಅವನು ಕಂಡದ್ದನ್ನು ವರದಿಮಾಡಲಿ.


ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”


ಬಳಿಕ ಪಹರೆಯವನು ಸಿಂಹಧ್ವನಿಯಿಂದ : “ಸ್ವಾಮಿ, ಹಗಲೆಲ್ಲಾ ಕಾವಲು ಗೋಪುರದಲ್ಲಿ ನಿಂತಿದ್ದೇನೆ. ರಾತ್ರಿಯಲ್ಲೂ ಕಾವಲುಗೈದಿದ್ದೇನೆ.


ಸುತ್ತುತ್ತಿದ್ದರು ಬೀದಿಗಳಲಿ ಪಹರೆಯವರು ನನ್ನನ್ನು ಕಂಡುಹಿಡಿದರು, ಹೊಡೆದು ಗಾಯಗೊಳಿಸಿದರು. ಕಿತ್ತುಕೊಂಡರು ಮೇಲುಹೊದಿಕೆಯನು ಆ ಪೌಳಿಗೋಡೆಯ ಕಾವಲುಗಾರರು.


ಊರಲ್ಲಿ ತಿರುಗುವ ಪಹರೆಯವರ ಕೈಗೆ ಸಿಕ್ಕಿಬಿದ್ದೆ “ನನ್ನ ಪ್ರಾಣಕಾಂತನನ್ನು ಕಂಡಿರಾ?’ ಎಂದು ವಿಚಾರಿಸಿದೆ.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ.


ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಶಾಪಹಾಕು, ತಪ್ಪದೆ ಹಾಕು,” ಎಂದು ಆಜ್ಞಾಪಿಸಿದರು.


ಸರ್ವೇಶ್ವರ ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆ.


ಇದನ್ನು ನೋಡಿ ಸ್ವಾಮಿಯ ದೂತನಾದ ಹಗ್ಗಾಯನು ಜನರಿಗೆ, “ನಾನು ನಿಮ್ಮೊಡನೆ ಇದ್ದೇನೆ ಎಂದು ಸರ್ವೇಶ್ವರ ನುಡಿದಿದ್ದಾರೆ. ಇದು ಸರ್ವೇಶ್ವರಸ್ವಾಮಿಯ ಸಂದೇಶ,” ಎಂದನು.


ಆಗ ಸರ್ವೇಶ್ವರ ನನಗೆ, “ನಾನೊಬ್ಬ ತರುಣ ಎನ್ನಬೇಡ; ಯಾರ ಬಳಿಗೆ ನಿನ್ನನ್ನು ಕಳಿಸುತ್ತೇನೋ, ಅವರೆಲ್ಲರ ಬಳಿಗೆ ನೀನು ಹೋಗಲೇಬೇಕು; ನಾನು ಆಜ್ಞಾಪಿಸುವುದನ್ನೆಲ್ಲ ನುಡಿಯಲೇ ಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು