Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:19 - ಕನ್ನಡ ಸತ್ಯವೇದವು C.L. Bible (BSI)

19 ನೀನು ಆ ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧಕ್ಕಾಗಿ ಸಾಯುವನು; ನೀನಾದರೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀನು ದುಷ್ಟನನ್ನು ಎಚ್ಚರಿಸಿದರೂ, ಅವನು ತನ್ನ ದುಷ್ಟತನವನ್ನೂ, ಕೆಟ್ಟಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಒಂದುವೇಳೆ ನೀನು ಒಬ್ಬ ದುಷ್ಟಮನುಷ್ಯನನ್ನು ಎಚ್ಚರಿಸಿ ಅವನು ಪಾಪ ಮಾಡದಂತೆ ಮತ್ತು ಅವನ ಜೀವಿತವನ್ನು ಬದಲಾವಣೆ ಮಾಡಲು ಹೇಳಿದ್ದಲ್ಲಿ ಆ ಮನುಷ್ಯನು ನಿನ್ನ ಮಾತುಗಳನ್ನು ಕೇಳಲು ನಿರಾಕರಿಸಿದರೆ, ಅವನು ಪಾಪ ಮಾಡುವುದರಿಂದ ಸಾಯುವನು. ಆದರೆ ನೀನು ನಿನ್ನ ಜೀವವನ್ನು ರಕ್ಷಿಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ, ದುರ್ಮಾರ್ಗವನ್ನೂ ಬಿಟ್ಟು ತಿರುಗಿಕೊಳ್ಳದೆ ಹೋದರೆ, ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:19
24 ತಿಳಿವುಗಳ ಹೋಲಿಕೆ  

ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಇವನು ಅದನ್ನು ಬಿಡದೆಹೋದರೆ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.


ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.


ನೋಹ, ದಾನಿಯೇಲ, ಯೋಬ, ಎಂಬವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲಿ ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”


ನೋಹ, ದಾನಿಯೇಲ, ಯೋಬ, ಎಂಬೀ ಮೂವರು ವ್ಯಕ್ತಿಗಳು ಆ ನಾಡಿನಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಸರ್ವೇಶ್ವರನಾದ ದೇವರ ನುಡಿ.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಇಂತಿರಲು ನಾನು ನಿಮಗೆ ಸಾರಿ ಹೇಳುವುದೇನೆಂದರೆ - “ನಿಮ್ಮಲ್ಲಿ ಯಾರಾದರು ನಾಶವಾದರೆ, ಅದಕ್ಕೆ ನಾನು ಹೊಣೆಯಲ್ಲ.


ಏಕೆಂದರೆ ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದ.


ನೀನು ಆ ಸಜ್ಜನನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”


ನಾನು ದುಷ್ಟನಿಗೆ, “ನೀನು ಖಂಡಿತವಾಗಿ ಸಾಯುವೆ,” ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆ ಹಾಗು ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆ ಇದ್ದರೆ, ಆ ದುಷ್ಟನು ತನ್ನ ಅಪರಾಧಕ್ಕಾಗಿ ಸಾಯಬೇಕಾಗುವುದು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ ಕೊಂಬನ್ನೂದಿ ಸಜ್ಜನರನ್ನು ಎಚ್ಚರಿಸಲಿ; ಕೊಂಬಿನ ಕೂಗನ್ನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು