Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:20 - ಕನ್ನಡ ಸತ್ಯವೇದವು C.L. Bible (BSI)

20 ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ನಾನು ಅವನ ಮುಂದೆ ಒಡ್ಡಿದ ಆಟಂಕವನ್ನು ಎಡವಿದರೆ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆ ಬಾರವು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡತಡೆಯನ್ನು ಇಡುವೆನು, ಅವನು ಸಾಯುವನು. ನೀನು ಅವನನ್ನು ಎಚ್ಚರಿಸದೆ ಇದ್ದುದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು. ಅವನು ಮಾಡಿರುವ ಸುಕೃತ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಸಾವಿಗೆ ನೀನೇ ಹೊಣೆಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:20
41 ತಿಳಿವುಗಳ ಹೋಲಿಕೆ  

ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ನಾನು ದುಷ್ಟನಿಗೆ, “ನೀನು ಖಂಡಿತವಾಗಿ ಸಾಯುವೆ,” ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆ ಹಾಗು ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆ ಇದ್ದರೆ, ಆ ದುಷ್ಟನು ತನ್ನ ಅಪರಾಧಕ್ಕಾಗಿ ಸಾಯಬೇಕಾಗುವುದು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.


ಸಜ್ಜನರಾದ ನನ್ನ ಭಕ್ತರು ವಿಶ್ವಾಸದಿಂದಲೇ ಬಾಳುವರು ಅವರು ಹಿಂಜರಿದರಾದರೆ ಮೆಚ್ಚೆನು ನಾನವರನು,” ಎನ್ನುತ್ತದೆ ಪವಿತ್ರಗ್ರಂಥ.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿಂದಲೇ ಸಾಯಬೇಕಾಯಿತು.


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ, ಆ ಅಧರ್ಮದಿಂದಲೇ ಸಾಯುವನು.


ಆದಕಾರಣ ಈ ಜನರಿಗೆ ಅಡ್ಡಿಆತಂಕಗಳನ್ನು ಒಡ್ಡುವೆನು. ಹೆತ್ತವರೂ ಮಕ್ಕಳೂ ಎಡವಿಬೀಳುವರು, ನೆಂಟರಿಷ್ಟರೂ ನಾಶವಾಗಿ ಹೋಗುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


ಆದರೆ ಕಾವಲುಗಾರನೇ ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ, ಸಜ್ಜನರನ್ನು ಎಚ್ಚರಿಸದೆ ಹೋದರೆ ಖಡ್ಗ ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ, ಕಾವಲುಗಾರನೇ ಹೊಣೆ. ಅವನಿಗೆ ನಾನು ಮುಯ್ಯಿ ತೀರಿಸುವೆನು.


“ನರಪುತ್ರನೇ, ಈ ಜನರು ವಿಗ್ರಹಗಳನ್ನು, ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೆ. ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಅಲ್ಲ.


ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.


ನಾನು ನಿನಗೆ ಪವಿತ್ರಾಲಯ ಆಗಿರುವೆನು. ಆದರೆ ಇಸ್ರಯೇಲಿನ ಎರಡು ಕುಲಗಳಿಗೆ ಎಡವುವ ಕಲ್ಲಾಗುವೆನು, ಮುಗ್ಗರಿಸುವ ಬಂಡೆಯಾಗುವೆನು. ಜೆರುಸಲೇಮಿನ ನಿವಾಸಿಗಳನ್ನು ಹಿಡಿಯುವ ಬಲೆಯೂ ಬೋನೂ ಆಗುವೆನು.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.


“ಅವರ ಭೋಜನವೇ ಅವರಿಗೆ ಬಲೆಯೂ ಜಾಲವೂ ಆಗಲಿ ಯಾತನೆಯೂ ಪತನವೂ ಆಗಿ ಪರಿಣಮಿಸಲಿ.


ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ.


ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರ ಅಶುದ್ಧ ಪದಾರ್ಥದಂತಿರುವುದು; ಸರ್ವೇಶ್ವರ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರ ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕೆಂದರೆ ಅವರ ಆಸ್ತಿ ಅವರಿಗೆ ಪಾಪಕ್ಕೆ ಕಾರಣವಾಗಿತ್ತು.


ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.


ಅತಿ ನೆಮ್ಮದಿಯುಂಟು ನಿನ್ನ ಶಾಸ್ತ್ರಪ್ರಿಯರಿಗೆ I ವಿಘ್ನಕರವಾದುದೇನೂ ಇರದು ಅಂಥವರಿಗೆ II


ಅವನ ಕೀಳು ಬಾಯಿಯ ತುಂಬ ಕೇಡು ಕಪಟ I ಸನ್ಮತಿ ಸತ್ಕಾರ್ಯಗಳನ್ನು ಬಿಟ್ಟೇಬಿಟ್ಟ II


ಆಗ ಸರ್ವೇಶ್ವರ ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಹೇಳಿಸಿದರು.


ಯಾಜಕ ಯೆಹೋಯಾದನ ಜೀವಮಾನದಲ್ಲೆಲ್ಲಾ ಅವನು ಸರ್ವೇಶ್ವರನ ಚಿತ್ತಾನುಸಾರ ನಡೆದುಕೊಳ್ಳುತ್ತಿದ್ದನು.


ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪೂರ್ಣ ಹೃದಯದಿಂದ, ಪೂರ್ಣ ಮನಸ್ಸಿನಿಂದ ಪ್ರೀತಿಸುತ್ತೀರೊ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.


“ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು.


ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


“ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು.


ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ಜೀತದಾರರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು