Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:21 - ಕನ್ನಡ ಸತ್ಯವೇದವು C.L. Bible (BSI)

21 ನೀನು ಆ ಸಜ್ಜನನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀನು ಶಿಷ್ಟನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆಹೋದರೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನೀನು ಆ ಒಳ್ಳೆಯವನಿಗೆ ಪಾಪ ಮಾಡದಂತೆ ಎಚ್ಚರಿಸಿದರೆ ಮತ್ತು ಅವನು ಪಾಪ ಮಾಡುವದನ್ನು ನಿಲ್ಲಿಸಿದರೆ, ಆ ಮನುಷ್ಯನು ಸಾಯುವದಿಲ್ಲ; ಯಾಕೆಂದರೆ ಅವನು ನಿನ್ನ ಎಚ್ಚರಿಕೆಗೆ ಕಿವಿಗೊಟ್ಟನು ಮತ್ತು ನೀನು ನಿನ್ನ ಸ್ವಂತ ಪ್ರಾಣವನ್ನು ರಕ್ಷಿಸಿಕೊಂಡಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೂ ನೀತಿವಂತನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ, ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:21
23 ತಿಳಿವುಗಳ ಹೋಲಿಕೆ  

ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.


ಇದನ್ನು ನೆನಪಿಗೆ ತಂದುಕೊಳ್ಳಿರಿ: ಪಾಪಿಯನ್ನು ದುರ್ಮಾರ್ಗದಿಂದ ಮರಳಿ ಸನ್ಮಾರ್ಗಕ್ಕೆ ತಂದವನು ತನ್ನ ಆತ್ಮವನ್ನು ನಿತ್ಯ ಮರಣದಿಂದ ತಪ್ಪಿಸಿ ತನ್ನ ಲೆಕ್ಕವಿಲ್ಲದ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾನೆ.


ಈ ವಿಷಯಗಳನ್ನು ಅಧಿಕಾರವಾಣಿಯಿಂದ ಬೋಧಿಸು; ಎಚ್ಚರಿಸು. ಅವುಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸು; ಯಾರೂ ನಿನ್ನನ್ನು ತಿರಸ್ಕರಿಸದಂತೆ ಎಚ್ಚರವಹಿಸು.


ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಬರೆಯಲಿಲ್ಲ. ನಮ್ಮ ನೆಚ್ಚಿನ ಮಕ್ಕಳಾದ ನಿಮ್ಮನ್ನು ಎಚ್ಚರಿಸಲೆಂದು ಬರೆದೆನು.


ಜ್ಞಾನಿಗೆ ಉಪದೇಶಿಸಿದರೆ ಅವನು ಹೆಚ್ಚು ಜ್ಞಾನಿಯಾಗುತ್ತಾನೆ; ಸತ್ಪುರುಷನಿಗೆ ಬೋಧಿಸಿದರೆ ಅವನು ಹೆಚ್ಚು ತಿಳುವಳಿಕೆ ಪಡೆಯುತ್ತಾನೆ.


ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.


ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ I ಸಂಭಾವಿತನಾಗುವನು ಅವುಗಳ ಪಾಲನೆಯಿಂದ II


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಮಂದಮತಿಗೆ ನೂರು ಗುದ್ದು; ಬುದ್ಧಿವಂತನಿಗೆ ಒಂದು ಮಾತು.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಆದಕಾರಣ ಸ್ಥಿರವಾಗಿ ನಿಂತಿರುವೆನೆಂದು ಕೊಚ್ಚಿಕೊಳ್ಳುವವನೇ, ಕುಸಿದುಬೀಳದಂತೆ ಎಚ್ಚರಿಕೆಯಿಂದಿರು.


ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಇವನು ಅದನ್ನು ಬಿಡದೆಹೋದರೆ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು