Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:25 - ಕನ್ನಡ ಸತ್ಯವೇದವು C.L. Bible (BSI)

25 ನರಪುತ್ರನೇ, ಇಗೋ, ನಿನ್ನ ಸ್ವಜನರೇ ನಿನ್ನನ್ನು ಕಟ್ಟಿ ಬಂಧಿಸುವರು. ನೀನು ಅವರ ಮಧ್ಯೆ ಅತ್ತಿತ್ತ ಸಂಚರಿಸದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನರಪುತ್ರನೇ, ಇಗೋ, ನಿನ್ನ ಸ್ವಜನರು ನಿನ್ನನ್ನು ಬಂಧಿಸಿ ಕಟ್ಟುವರು, ನೀನು ಹೊರಗೆ ಸಂಚರಿಸಲು ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನರಪುತ್ರನೇ, ಇಗೋ, [ನಿನ್ನ ಸ್ವಜನರು] ನಿನ್ನನ್ನು ಬಂಧಿಸಿ ಕಟ್ಟುವರು, ನೀನು ಅವರಲ್ಲಿ ಆಚೀಚೆ ಸಂಚರಿಸದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನರಪುತ್ರನೇ, ನಿನ್ನ ಸ್ವಜನರು ಹಗ್ಗ ಹಿಡಿದುಕೊಂಡು ಬಂದು ನಿನ್ನನ್ನು ಕಟ್ಟುವರು. ನಿನ್ನನ್ನು ಜನರ ಮಧ್ಯದಿಂದ ಹೊರಹೋಗದಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮನುಷ್ಯಪುತ್ರನೇ, ಇಗೋ, ಅವರು ನಿನ್ನನ್ನು ಹಗ್ಗಗಳಿಂದ ಕಟ್ಟುವರು. ನೀನು ಅವರಿಂದ ಹೊರಗೆ ಹೋಗಲು ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:25
7 ತಿಳಿವುಗಳ ಹೋಲಿಕೆ  

ಇಗೋ, ನಿನ್ನ ಮುತ್ತಿಗೆಯ ದಿನಗಳು ಮುಗಿಯುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.


ಸೆರೆಮನೆ ಹಾಗೂ ಸಂಕಷ್ಟಗಳು ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ಪ್ರತಿಯೊಂದು ಪಟ್ಟಣದಲ್ಲೂ ಕೊಟ್ಟ ಎಚ್ಚರಿಕೆ ಮಾತ್ರ ಸ್ಪಷ್ಟವಾಗಿದೆ. ನನಗಾದರೋ, ನನ್ನ ಪ್ರಾಣವು ತೃಣಕ್ಕೆ ಸಮಾನ.


ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು.


ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈಚಾಚುವೆ. ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು,” ಎಂದು ನುಡಿದರು.


:ಈತನಿಗೆ ಹುಚ್ಚು ಹಿಡಿದಿದೆ,” ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.


ವಿನೋದಗಾರರ ಕೂಟದಲ್ಲಿ ಭಾಗವಹಿಸಿ ನಾನು ಉಲ್ಲಾಸಪಟ್ಟವನಲ್ಲ. ನಿಮ್ಮ ಕೈ ನನ್ನ ಮೇಲೆ ಇದ್ದುದರಿಂದ ನಾನು ಒಬ್ಬಂಟಿಗನಾದೆ. ಕೋಪಾವೇಶದಿಂದ ತುಂಬಿದವನಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು