Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:9 - ಕನ್ನಡ ಸತ್ಯವೇದವು C.L. Bible (BSI)

9 ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಕಠಿಣವಾದ ವಜ್ರದಷ್ಟು ಕಠಿಣಪಡಿಸಿದ್ದೇನೆ; ಅವರು ದ್ರೋಹಿ ವಂಶದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಬೆಚ್ಚದಿರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಗಟ್ಟಿಯಾದ ವಜ್ರದಂತೆ ಮಾಡಿದ್ದೇನೆ; ಅವರು ತಿರುಗಿ ಬೀಳುವ ಮನೆತನದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಹೆದರದಿರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನ ಹಣೆಯನ್ನು ಕಗ್ಗಲ್ಲಿಗಿಂತ ಕಠಿನವಾದ ವಜ್ರದಷ್ಟು ಕಠಿನಪಡಿಸಿದ್ದೇನೆ; ಅವರು ದ್ರೋಹಿವಂಶದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಬೆಚ್ಚದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ವಜ್ರವು ಬಂಡೆಕಲ್ಲಿಗಿಂತ ಗಟ್ಟಿಯಾದ ವಸ್ತು. ಅದೇ ಪ್ರಕಾರ ನಿನ್ನ ತಲೆ ಅವರ ತಲೆಗಿಂತ ಗಟ್ಟಿಯಾಗಿರುವುದು. ಆ ಜನರಿಗೆ ಭಯಪಡಬೇಡ. ಅವರು ದಂಗೆಕೋರರಾಗಿದ್ದರೂ ಅವರ ಸಮ್ಮುಖದಲ್ಲಿ ಭಯಪಡಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನಿನ್ನ ಹಣೆಯನ್ನು ಅತ್ಯಂತ ಕಠಿಣವಾದ ಕಲ್ಲಿನಂತೆಯೂ ವಜ್ರದಂತೆಯೂ ಮಾಡುವೆನು. ಅವರು ತಿರುಗಿಬೀಳುವ ಜನರಾದರೂ ನೀನು ಅವರಿಗೆ ಭಯಪಡಬೇಡ ಅಥವಾ ಗಾಬರಿಯಾಗಬೇಡ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:9
15 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿ ವಂಶದವರು; ಅವರ ಬಿರುನುಡಿಗೆ ದಿಗಿಲು ಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.


ನೆರವಾಗಿಹನು ನನಗೆ ಸ್ವಾಮಿ ಸರ್ವೇಶ್ವರ ಎಂದೇ ತಲೆತಗ್ಗಿಸಲಿಲ್ಲ ನಾನು ನಾಚಿಕೆಯಿಂದ ಗಟ್ಟಿಮಾಡಿಕೊಂಡೆ ಮುಖವನು ಕಗ್ಗಲ್ಲಿನ ಹಾಗೆ ಆಶಾಭಂಗಪಡಲಾರೆನೆಂದು ಗೊತ್ತು ನನಗೆ.


ಧರ್ಮಶಾಸ್ತ್ರವನ್ನಾಗಲೀ ಪೂರ್ವಕಾಲದ ಪ್ರವಾದಿಗಳ ಮುಖಾಂತರ, ಸೇನಾಧಿಶ್ವರ ಸರ್ವೇಶ್ವರ ಆದ ನಾನು ತಿಳಿಸಿದ ನನ್ನಾತ್ಮಪ್ರೇರಿತ ಮಾತುಗಳನ್ನಾಗಲೀ ಕೇಳದೆಹೋದರು. ಹೀಗೆ ನನ್ನ ಕಡುಕೋಪಕ್ಕೆ ಗುರಿಯಾದರು.


ಅವರಿಗೆ ಅಂಜಬೇಡ; ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗೆ ಇರುತ್ತೇನೆ; ಇದು ಸರ್ವೇಶ್ವರನಾದ ನನ್ನ ಮಾತು,” ಎಂದು ಹೇಳಿದರು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಹೀಗೆ ಮಾಡುವುದು ಒಳ್ಳೆಯದು, ನಮ್ಮ ಉದ್ಧಾರಕರಾದ ದೇವರಿಗೆ ಮೆಚ್ಚುಗೆಯಾದುದು.


ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.


ನನಗಲ್ಲ, ನನ್ನ ಹಿಂಸಕರಿಗೆ ಅವಮಾನವಾಗಲಿ. ಭಯಭ್ರಾಂತಿ ನನ್ನನ್ನಲ್ಲ, ಅವರನ್ನು ಅಪಹರಿಸಲಿ. ಅವರಿಗೆ ಕೇಡುಗಾಲವನ್ನು ಬರಮಾಡಿ ಬೇರುಸಹಿತ ಅವರನ್ನು ನಾಶಪಡಿಸಿರಿ !


ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ವ್ಯವಸಾಯದ ಹುಟ್ಟುವಳಿಯಲ್ಲಿ ಮೊತ್ತಮೊದಲನೆಯ ಪಾಲು ಕಷ್ಟಪಟ್ಟ ರೈತನಿಗಲ್ಲವೇ?


ನಾನು ನಿನ್ನನ್ನು ಆ ಜನರಿಗೆ ದುರ್ಗಮವಾದ ಕಂಚಿನ ಪೌಳಿಗೋಡೆಯನ್ನಾಗಿಸುವೆನು. ನಿನಗೆ ವಿರುದ್ಧ ಅವರು ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗದು. ನಿನ್ನ ನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು.


ಇಗೋ, ಅವರ ಕಠಿಣ ಹೃದಯಕ್ಕೆ ವಿರುದ್ಧ ನಿನ್ನ ಹೃದಯವನ್ನು ಕಠಿಣಪಡಿಸಿದ್ದೇನೆ; ಅವರ ಹಟಮಾರಿತನಕ್ಕೆ ಪ್ರತಿಯಾಗಿ ನಿನ್ನನ್ನು ಹಟವಾದಿಯನ್ನಾಗಿ ಮಾಡಿದ್ದೇನೆ.


ಇದಲ್ಲದೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ನಿನಗೆ ನುಡಿಯುವ, ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಮನಸ್ಸಿನಲ್ಲಿಟ್ಟುಕೋ.


“ಇದಲ್ಲದೆ, ನೀನು ಆ ದ್ರೋಹಿಗಳಿಗೆ ಅಂದರೆ, ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು