Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತಿರುಗಿ ಯೆಹೋವನ ಸಂದೇಶ ನನಗೆ ಬಂತು, ಆತನು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:1
9 ತಿಳಿವುಗಳ ಹೋಲಿಕೆ  

ಇಪ್ಪತ್ತೇಳನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


“ಆ ದಿನದಲ್ಲಿ ನಾನು ಇಸ್ರಯೇಲ್ ವಂಶಕ್ಕೆ ಕೋಡುಮೂಡಿಸಿ ಆ ವಂಶದವರ ಮಧ್ಯೆ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಖಚಿತವಾಗುವುದು.


“ನರಪುತ್ರನೇ, ನೀನು ಈ ದೈವೋಕ್ತಿಯನ್ನು ಪ್ರಕಟಿಸು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅರಚಿಕೊಳ್ಳಿರಿ, ಅಯ್ಯೋ ದುರ್ದಿನವೇ! ಆ ದಿನ ಹತ್ತಿರವಾಯಿತು:


ಆ ದಿನದಂದು ಈಜಿಪ್ಟಿನ ನಡುವೆ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವಿರುವುದು ಮತ್ತು ನಾಡಿನ ಗಡಿಯಲ್ಲಿ ಸ್ವಾಮಿಯ ಸ್ಥಂಭ ಇರುವುದು.


ಯೆರೆಮೀಯನು ತಹಪನೇಸಿನಲ್ಲಿರುವಾಗ ಸರ್ವೇಶ್ವರನ ಈ ವಾಣಿ ಕೇಳಿ ಬಂದಿತು:


ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.


ರಾಷ್ಟ್ರಗಳ ವಿಷಯವಾಗಿ ಸರ್ವೇಶ್ವರ ಸ್ವಾಮಿ ಪ್ರವಾದಿ ಯೆರೆಮೀಯನಿಗೆ ಅನುಗ್ರಹಿಸಿದ ವಾಣಿ ಇದು: ಈಜಿಪ್ಟನ್ನು ಕುರಿತ ವಾಣಿ:


“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನ ಕಡೆಗೆ ಮುಖಮಾಡಿ ಅವನನ್ನು ಹಾಗು ಈಜಿಪ್ಟಿನವರೆಲ್ಲರನ್ನು ಕುರಿತು ಹೀಗೆ ನುಡಿ -


“ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ ಖಡ್ಗಹತರ ನಡುವೆ ಸೇರಿಹೋಗುವರು,” ಎಂಬುದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು