Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:15 - ಕನ್ನಡ ಸತ್ಯವೇದವು C.L. Bible (BSI)

15 ಈಜಿಪ್ಟಿಗೆ ರಕ್ಷಣಾ ಕೋಟೆಯಾದ ಪೆಲೂಸಿಯಮ್‍ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ತೆಬೆಸಿನ ನಿವಾಸಿಗಳನ್ನೆಲ್ಲಾ ಕತ್ತರಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನೋಪುರದ ನಿವಾಸಿಗಳನ್ನೆಲ್ಲಾ ಕತ್ತರಿಸಿ ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ನಿವಾಸಿಗಳನ್ನೆಲ್ಲಾ ಕತ್ತರಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈಜಿಪ್ಟಿನ ಕೋಟೆಯಾಗಿರುವ ಸೀನ್ ಪ್ರಾಂತ್ಯದ ಮೇಲೆ ನನ್ನ ಕೋಪವನ್ನು ಸುರಿಸುವೆನು. ತೆಬೆಸದ ಜನರನ್ನು ನಾನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈಜಿಪ್ಟಿಗೆ ರಕ್ಷಣೆಯ ಕೋಟೆಯಾದ ಪೆಲೂಸಿಯಮ್ ಪಟ್ಟಣದ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ತೆಬೆಸಿನ ನಿವಾಸಿಗಳನ್ನೆಲ್ಲಾ ಕಡಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:15
6 ತಿಳಿವುಗಳ ಹೋಲಿಕೆ  

ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಇಸ್ರಯೇಲರ ಸಮಾಜ ಏಲೀಮಿನಿಂದ ಹೊರಟ ಮೇಲೆ, ಏಲೀಮಿಗೂ ಸಿನಾಯಿ ಬೆಟ್ಟಕ್ಕೂ ನಡುವೆಯಿರುವ ‘ಸೀನ್’ ಎಂಬ ಮರುಭೂಮಿಗೆ ಬಂದರು. ಈಜಿಪ್ಟನ್ನು ಬಿಟ್ಟು ಬಂದ ಎರಡನೆಯ ತಿಂಗಳಿನ ಹದಿನೈದನೆಯ ದಿನ ಅದು.


ನಾನು ದಕ್ಷಿಣ ಈಜಿಪ್ಟನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಕ್ಕಿ, ತೆಬೆಸಿನ ರಾಜಧಾನಿಯನ್ನು ದಂಡಿಸಿ,


ನಾನು ಈಜಿಪ್ಟಿಗೆ ಕಿಚ್ಚನ್ನು ಹತ್ತಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು; ತೆಬೆಸ್ ಭಂಗಕ್ಕೆ ಈಡಾಗುವುದು; ಮೆಂಫೀಸ್ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು