Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:18 - ಕನ್ನಡ ಸತ್ಯವೇದವು C.L. Bible (BSI)

18 ಈಜಿಪ್ಟ್ ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವುದು. ಕಾರ್ಮುಗಿಲು ಅದನ್ನು ಆವರಿಸುವುದು. ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವದು, ಕಾರ್ಮುಗಿಲು ಅದನ್ನು ಆವರಿಸುವದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ಈಜಿಪ್ಟಿನ ನೊಗವನ್ನು ಮುರಿದಾಗ ತಹಪನೇಸ್‌ನಲ್ಲಿ ಕತ್ತಲೆಯ ದಿನವಾಗಿರುವುದು. ಈಜಿಪ್ಟಿನ ಅಧಿಕಾರಕ್ಕೆ ಅಂತ್ಯ ಬರುವುದು. ಈಜಿಪ್ಟಿನ ಮೇಲೆ ಮೋಡವು ಕವಿಯುವುದು. ಅದರ ಪಟ್ಟಣಗಳ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. ಅದರ ಶಕ್ತಿಯ ಮದವು ಅಡಗಿಹೋಗುವುದು. ಅದನ್ನು ಮೇಘವು ಮುಚ್ಚುವುದು. ಅದರ ಪುತ್ರಿಯರು ಸೆರೆಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:18
30 ತಿಳಿವುಗಳ ಹೋಲಿಕೆ  

ಹೌದು, ಸಮೀಪಿಸಿತು ಸರ್ವೇಶ್ವರನ ದಿನ, ಕಾರ್ಮುಗಿಲ ದಿನ ಅದು ರಾಷ್ಟ್ರಗಳಿಗೆ ನ್ಯಾಯತೀರಿಸತಕ್ಕ ಕಾಲ.


ಆ ರಾಜ್ಯ ಸಮಸ್ತ ರಾಜ್ಯಗಳಲ್ಲಿ ಕನಿಷ್ಟವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಆ ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣಗತಿಗೆ ತರುವೆನು.


ಹೌದು, ಮೆಮ್‍ಫಿಸ್ ಮತ್ತು ತಹಪನೇಸ್ ನಿವಾಸಿಗಳು ನಿನ್ನ ನಾಡನೆತ್ತಿಯನ್ನು ನುಣ್ಣಗೆ ಮೇದುಬಿಟ್ಟಿದ್ದಾರೆ.


ಆ ದಿನ ಬಂದಾಗ ಅವರು ನಿಮ್ಮ ಮೇಲೆ ಹೊರಿಸಿರುವ ಗುಲಾಮಗಿರಿಯನ್ನು ಕಳಚಿಹಾಕಲಾಗುವುದು. ನಿಮ್ಮ ಕೊರಳಿಗೆ ಕಟ್ಟಿದ ದಾಸ್ಯದ ನೊಗವನ್ನು ಮುರಿದುಹಾಕಲಾಗುವುದು.”


“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ಸೂರ್ಯಚಂದ್ರಗಳು ಮಂಕಾಗುತ್ತವೆ. ನಕ್ಷತ್ರಗಳು ಕಾಂತಿಗುಂದುತ್ತವೆ.


ಇಂಥಾ ವೈಭವದಿಂದ ಹಾಗೂ ಮಹಿಮೆಯಿಂದ ಕೂಡಿದ ನೀನು, ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ದೂಡಿದವನಾಗಿ ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವೆ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.”


“ಪ್ರಕಟಿಸಿರಿ ಈಜಿಪ್ಟಿನಲ್ಲಿ, ಪ್ರಚುರಪಡಿಸಿರಿ ಮಿಗ್ದೋಲ್, ತಹಪನೇಸ್, ಹಾಗು ಸೋಫ್ ಎಂಬೀ ನಗರಗಳಲ್ಲಿ. ಸಾರಿರಿ ಇಂತೆಂದು: ‘ಈಜಿಪ್ಟೇ, ಸ್ಥಿರವಾಗಿ ನಿಲ್ಲು, ಯುದ್ಧ ಸನ್ನದ್ಧವಾಗು, ಖಡ್ಗ ಆವರಿಸುತ್ತಿದೆ ನಿನ್ನ ಸುತ್ತಮುತ್ತಲು’


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು.


ಇಳಿದಿದೆ ನಿನ್ನ ವೈಭವ, ವೀಣಾನಾದ ಪಾತಾಳಕೆ ನಿನಗೀಗ ಹುಳುಗಳೇ ಹಾಸಿಗೆ, ಕ್ರಿಮಿಗಳೇ ಹೊದಿಕೆ.


ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು.


ಸೇನಾಧೀಶ್ವರಸ್ವಾಮಿಯ ಕೋಪಾಗ್ನಿಯಿಂದ ನಾಡು ಸುಟ್ಟುಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಅಣ್ಣನಿಗೆ ತಮ್ಮನ ಮೇಲೆ ದಯೆ ಇಲ್ಲದಾಗಿದೆ.


ಮುರಿದುಹಾಕಿದೆ ಭಾರವಾದ ಅವರ ನೊಗವನು ಅವರ ಬೆನ್ನನ್ನು ಬಡಿದ ಬೆತ್ತವನು ದಬ್ಬಾಳಿಕೆ ನಡೆಸಿದವರ ದೊಣ್ಣೆಯನು; ಮಿದ್ಯಾನನ್ನು ಗೆದ್ದ ದಿನದಂದು ಹಾಗೆಯೆ ಮಾಡಿದೆಯಲ್ಲವೆ ನೀನು?


ಗುರುಗುಟ್ಟುತಿಹರು ಯೆಹೂದ್ಯರ ಮೇಲೆ ಭೋರ್ಗರೆಯುವ ಸಮುದ್ರದಂತೆ; ನಾಡಿನೆಲ್ಲೆಡೆ ಕವಿದಿಹುದು ಗಾಡಾಂಧಕಾರ; ತಾಂಡವವಾಡುತಿಹುದು ನೋಡಿದೆಡೆ ದುಃಖದುಗುಡ; ಮೋಡ ಕವಿದು ಇರುಳಾಗಿಹುದು ಹಗಲೊಳು ಕೂಡ !


ನೀವು ಈಜಿಪ್ಟಿನವರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದಿಂದ ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರನು ನಾನೇ. ನಿಮ್ಮ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನಲ್ಲವೆ?


ನೆಲವೆಲ್ಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಂಡವು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಪಚ್ಚೆ ಪೈರುಗಳನ್ನೂ ಗಿಡಮರ ಕಾಯಿಗಳನ್ನೂ ತಿಂದುಬಿಟ್ಟವು. ಈಜಿಪ್ಟ್ ದೇಶದಲ್ಲೆಲ್ಲಾ ಹಸುರಾದ ಗಿಡಮರಗಳೊಂದೂ ಉಳಿಯಲಿಲ್ಲ.


“ಇದು ಸರ್ವೇಶ್ವರನ ನುಡಿ - ನೊಗವನ್ನೂ ಕಣ್ಣಿಗಳನ್ನೂ ಮಾಡಿ ನಿನ್ನ ಹೆಗಲಿಗೆ ಹಾಕಿಕೊ.


ಆಗ ಪ್ರವಾದಿ ಹನನ್ಯನು ಪ್ರವಾದಿ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿದನು.


“ ನೀನು ಹೋಗಿ ಹನನ್ಯನಿಗೆ: ‘ಸರ್ವೇಶ್ವರ ಇಂತೆನ್ನುತ್ತಾರೆ - ನೀನು ಮರದ ನೊಗಗಳನ್ನು ಮುರಿದುಬಿಟ್ಟಿರುವೆ. ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಮಾಡು.


(ಸೇನಾಧೀಶ್ವರರಾದ ಸರ್ವೇಶ್ವರ ಹೇಳುವುದನ್ನು ಕೇಳು: “ಅವರ ಮೇಲೆ ಹೇರಲಾಗಿರುವ ನೊಗವನ್ನು ನಾನು ಆ ದಿನದಂದು ಮುರಿದುಬಿಡುವೆನು. ಕಣ್ಣಿಗಳನ್ನು ಕಿತ್ತುಹಾಕುವೆನು. ಅನ್ಯಕುಲದವರು ಇನ್ನು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.


ಈಜಿಪ್ಟ್ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ನಗರಗಳಲ್ಲೂ ಮತ್ತು ಪತ್ರೋಸ್ ಪ್ರಾಂತ್ಯದಲ್ಲೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಿಳಿಯಪಡಿಸಿದ ವಾಣಿ ಇದು:


ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !


ಈಜಿಪ್ಟರನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು.


ನಿನ್ನ ಬೆಳಕನು ನಾ ನಂದಿಸಿ ಕತ್ತಲಾಗಿಸುವಾಗ, ಮುಚ್ಚುವೆನು ಸೂರ್ಯಚಂದ್ರ ನಕ್ಷತ್ರಗಳನು ಮೋಡಮುಸುಕಿನಿಂದ.


ತೋಟದ ಮರಗಳು ಹಣ್ಣುಬಿಡುವುವು; ಹೊಲಗಳು ಒಳ್ಳೆಯ ಬೆಳೆಕೊಡುವುವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗಗಳನ್ನು ನಾನು ಮುರಿದುಹಾಕಿ, ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ, ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.


ನೀನೂ ನಿನ್ನ ಎಲ್ಲ ಪಡೆಗಳೂ ನಿನ್ನೊಂದಿಗಿರುವ ಬಹು ಜನಾಂಗಗಳೂ ಬಿರುಗಾಳಿಯಂತೆ ಹೊರಟುಬರುವಿರಿ; ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿರಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು