Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:19 - ಕನ್ನಡ ಸತ್ಯವೇದವು C.L. Bible (BSI)

19 ಹೀಗೆ ನಾನು ಈಜಿಪ್ಟರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಈಜಿಪ್ಟನ್ನು ಶಿಕ್ಷಿಸುವಾಗ ನಾನೇ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೀಗೆ ನಾನು ಈಜಿಪ್ಟನ್ನು ದಂಡಿಸುವೆನು. ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:19
12 ತಿಳಿವುಗಳ ಹೋಲಿಕೆ  

ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ನಾನು ದಕ್ಷಿಣ ಈಜಿಪ್ಟನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಕ್ಕಿ, ತೆಬೆಸಿನ ರಾಜಧಾನಿಯನ್ನು ದಂಡಿಸಿ,


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸದೆ ಬಿಡೆನು. ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


“ನಾನು ಕೋಪದಿಂದ, ರೋಷದಿಂದ ಹಾಗು ತೀವ್ರ ಖಂಡನೆಯಿಂದ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ ಪರಿಹಾಸ್ಯಗಳಿಗೂ ಬೆರಗು ಬುದ್ಧಿವಾದಗಳಿಗೂ ಆಸ್ಪದವಾಗುವುವು; ಇದು ಸರ್ವೇಶ್ವರನಾದ ನನ್ನ ನುಡಿ.


ಆದುದರಿಂದ ಜೆರುಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಸರ್ವೇಶ್ವರನಾದ ನನ್ನ ನುಡಿ.


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಆ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಈಜಿಪ್ಟರ ದೇವತೆಗಳನ್ನು ದಂಡಿಸಿ ಈಜಿಪ್ಟರ ಚೊಚ್ಚಲು ಮಕ್ಕಳನ್ನು ಸಂಹರಿಸಿದ್ದರು. ಆ ಮಕ್ಕಳ ಶವಗಳನ್ನು ಸಮಾಧಿ ಮಾಡಲಾಗುತ್ತಿತ್ತು.


“ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸುವೆನು. ಆಗ ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡೆಸಿದವನು ನಾನೇ ಎಂದು ಆ ಜನಾಂಗಗಳಿಗೆಲ್ಲಾ ಗೋಚರವಾಗುವುದು,


ಈ ಪರಿ ಮುಯ್ಯಿತೀರಿಸಲಿ ಜನಾಂಗಗಳಿಗೆ I ವಿಧಿಸಲಿ ದಂಡನೆಯನು ಅನ್ಯರಾಷ್ಟ್ರಗಳಿಗೆ II


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು ; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು.


ಈಜಿಪ್ಟಿನಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ಕರಗಿಸಿ ಆ ದೇಶವನ್ನು ಹಾಳುಪಾಳುಮಾಡಿ ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು