Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:21 - ಕನ್ನಡ ಸತ್ಯವೇದವು C.L. Bible (BSI)

21 “ನರಪುತ್ರನೇ, ನಾನು ಈಜಿಪ್ಟಿನ ಅರಸ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ, ಅದನ್ನು ಬಿಗಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆಸುತ್ತಿ ಅದನ್ನು ಬಿಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನರಪುತ್ರನೇ, ನಾನು ಈಜಿಪ್ಟಿನ ರಾಜನಾದ ಫರೋಹನ ಕೈಯ ಬಲವನ್ನು ಮುರಿದಿದ್ದೇನೆ. ಯಾರೂ ಅವನನ್ನು ಶೂಶ್ರೂಷೆ ಮಾಡಲಾರರು. ಅದು ಗುಣವಾಗದು. ಅವನ ಕೈಗೆ ಖಡ್ಗ ಹಿಡಿದುಕೊಳ್ಳುವಷ್ಟೂ ಬಲವಿರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಮನುಷ್ಯಪುತ್ರನೇ, ನಾನು ಈಜಿಪ್ಟಿನ ಅರಸನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ. ಇಗೋ, ಆ ದೇಶವನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:21
15 ತಿಳಿವುಗಳ ಹೋಲಿಕೆ  

ಈಜಿಪ್ಟಿನ ಕನ್ಯೆಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಕೊಂಡು ಬಾ ನಿನ್ನ ಬಗೆಬಗೆಯ ಮದ್ದುಗಳಿಂದ ಪ್ರಯೋಜನವಿಲ್ಲ ಅವುಗಳಿಂದ ನಿನಗೆ ಗುಣವಾಗುವಂತಿಲ್ಲ !


ನಿನ್ನ ಪರ ವಾದಿಸುವವರಿಲ್ಲ, ನಿನ್ನ ವ್ರಣಕ್ಕೆ ಔಷಧವಿಲ್ಲ ನಿನ್ನನ್ನು ಆರೈಕೆ ಮಾಡುವವರಿಲ್ಲ.


ಮೋವಾಬಿನ ಕೊಂಬು ಕಡಿದು ಬಿದ್ದಿದೆ. ಅದರ ತೋಳು ಮುರಿದುಹೋಗಿದೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಬತ್ತಿಹೋಗುವುದು ದುರ್ಜನರ ಭುಜಬಲ I ಸತ್ಯವಂತರಿಗೆ ಪ್ರಭುವೇ ಉನ್ನತಬಲ II


ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸಿ, ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು, ಫರೋಹನ ಕೈಗಳನ್ನು ಮುರಿಸುವಾಗ ಗಾಯದಿಂದ ಪ್ರಾಣಸಂಕಟ ಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.


ಧೂರ್ತನ, ದುರುಳನ ಭುಜಬಲವನು ನೀ ಮುರಿದುಬಿಡು I ಆತನ ನೀಚತನವನು ಪರೀಕ್ಷಿಸಿ ಶೂನ್ಯಮಾಡು II


ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು : “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.”


ನಿನ್ನ ವರ್ತಕರು ಆಕಾಶದ ನಕ್ಷತ್ರಗಳಿಗಿಂತ ಅಧಿಕವಾಗಲಿ! ಆದರೆ ಈಗ ಮಿಡತೆ ತನ್ನ ಪರೆಯನ್ನು ಬಿಟ್ಟು ಹಾರಿಹೋಗುವಂತೆ ಎಲ್ಲರು ಪಲಾಯನವಾಗಲಿ!


ಅಂಗಾಲಿನಿಂದ ನಡುನೆತ್ತಿಯವರೆಗೆ ಪೆಟ್ಟು ಬಾಸುಂಡೆ, ಮಾಗದ ಗಾಯಗಳೇ ಹೊರತು ಮತ್ತೇನೂ ಅಲ್ಲ. ಅವನ್ನು ತೊಳೆದು ಕಟ್ಟಿಲ್ಲ. ಎಣ್ಣೆ ಸವರಿ ಮೃದುವಾಗಿಸಿಲ್ಲ.


ಆ ಗುರುತು ಯಾವುದೆಂದರೆ: ಇಗೋ ಜುದೇಯದ ಅರಸ ಚಿದ್ಕೀಯನನ್ನು ಅವನ ಪ್ರಾಣ ಶತ್ರುವಾದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈ಼ಗೆ ಒಪ್ಪಿಸಿದಂತೆ ಈಜಿಪ್ಟಿನ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಒಪ್ಪಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ’.”


ನಿನ್ನ ಎಡಗೈಯಿಂದ ಬಿಲ್ಲನ್ನು ಕಿತ್ತುಹಾಕಿ, ನಿನ್ನ ಬಲಗೈಯಿಂದ ಬಾಣಗಳನ್ನು ಉದುರಿಸಿಬಿಡುವೆನು.


ಮಂದೆಕಾಯದ ಕುರುಬನಿಗೆ ಧಿಕ್ಕಾರ! ತಾಕುವುದು ಅವನ ತೋಳಿಗೂ ಬಲಗಣ್ಣಿಗೂ ಖಡ್ಗ ತೀರಾ ಬತ್ತಿಹೋಗಲಿ ಅವನ ತೋಳು ಪೂರಾ ಮಬ್ಬಾಗಲಿ ಅವನ ಬಲಗಣ್ಣು.


ಬಾಬಿಲೋನಿನ ಅರಸನು ಈಜಿಪ್ಟಿನ ಪ್ರವಾಹಕ್ಕೂ ಯೂಫ್ರಟಿಸ್ ನದಿಗೂ ಮಧ್ಯದಲ್ಲಿದ್ದ ಈಜಿಪ್ಟ್ ರಾಜನ ಎಲ್ಲಾ ದೇಶವನ್ನು ಸ್ವಾಧೀನ ಮಾಡಿಕೊಂಡನು. ಅಂದಿನಿಂದ ಈಜಿಪ್ಟಿನ ಅರಸನು ತನ್ನ ದೇಶದಿಂದ ಈಚೆಗೆ ಬರಲೇ ಇಲ್ಲ.


ಮೊಂಡಾಗಿಸಿರುವೆ ಅವನ ಕತ್ತಿಯ ಮೊನೆಯನು I ಕಾಳಗಕೆ ನಿಲ್ಲದಂತಾಗಿಸಿರುವೆ ಅವನನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು