Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:3 - ಕನ್ನಡ ಸತ್ಯವೇದವು C.L. Bible (BSI)

3 ಹೌದು, ಸಮೀಪಿಸಿತು ಸರ್ವೇಶ್ವರನ ದಿನ, ಕಾರ್ಮುಗಿಲ ದಿನ ಅದು ರಾಷ್ಟ್ರಗಳಿಗೆ ನ್ಯಾಯತೀರಿಸತಕ್ಕ ಕಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದಿನವು ಹತ್ತಿರವಾಯಿತು; ಹೌದು, ಯೆಹೋವನ ದಿನ, ಕಾರ್ಮುಗಿಲಿನ ದಿನ ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯ ತೀರಿಸತಕ್ಕ ಕಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ದಿನವು ಹತ್ತಿರ ಬಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಬಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಆ ದಿನವು ಸಮೀಪವಾಯಿತು, ಯೆಹೋವ ದೇವರ ದಿನವು, ಆ ಕಾರ್ಮುಗಿಲಿನ ದಿನವು ಸಮೀಪವಾಯಿತು. ಅದೇ ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:3
35 ತಿಳಿವುಗಳ ಹೋಲಿಕೆ  

“ಸಮಸ್ತ ರಾಷ್ಟ್ರಗಳಿಗೂ ಸರ್ವೇಶ್ವರನ ದಿನ ಸಮೀಪಿಸಿದೆ. ನೀನು ಮಾಡಿದ್ದನ್ನೆ ನಿನಗೂ ಮಾಡಲಾಗುವುದು. ನಿನ್ನ ದುಷ್ಕೃತ್ಯವು ನಿನ್ನ ತಲೆಗೇ ಬರುವುದು.


ಮಂದೆಯ ಕುರುಬನು ಸುತ್ತಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು;


ಈಜಿಪ್ಟ್ ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವುದು. ಕಾರ್ಮುಗಿಲು ಅದನ್ನು ಆವರಿಸುವುದು. ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.


“ಸಮಯ ಬಂದಿದೆ, ದಿನ ಹತ್ತಿರವಾಗಿದೆ; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿ ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ದೇಶನಿವಾಸಿಯೇ, ನಿನ್ನ ಗತಿ ಮುಗಿಯಿತು, ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿ ಉತ್ಸಾಹಧ್ವನಿಯಲ್ಲ , ಅದು ಬರೀ ಗೋಳೇ!


ಸರ್ವೇಶ್ವರಸ್ವಾಮಿಯ ಮಹಾದಿನ ಹತ್ತಿರವಾಯಿತು; ಸಮೀಪಿಸಿತು. ಅದು ಬಹು ತ್ವರೆಯಾಗಿ ಬರುತ್ತಿದೆ; ಅದು ಕಠೋರವಾದ ದಿನ, ಆ ದಿನದ ಸುದ್ದಿ ಕಹಿಯಾದುದು, ಎಂಥಾ ಶೂರರನ್ನೂ ಕೂಡ ಘೋರವಾಗಿ ಗೋಳಾಡಿಸುವಂಥದ್ದು.


“ಸ್ವಾಮಿ ಸರ್ವೇಶ್ವರ ನ್ಯಾಯತೀರ್ಪು ನೀಡುವ ದಿನ ಸಮೀಪಿಸಿದೆ; ಆದುದರಿಂದ ಅವರ ಸನ್ನಿಧಿಯಲ್ಲಿ ಮೌನ ತಾಳಿರಿ. ಸರ್ವೇಶ್ವರ, ಯಜ್ಞದ ಔತಣವನ್ನು ಸಿದ್ಧಗೊಳಿಸಿದ್ದಾರೆ. ಅತಿಥಿಗಳನ್ನು ಪವಿತ್ರೀಕರಿಸಿದ್ದಾರೆ.


ಸರ್ವೇಶ್ವರಸ್ವಾಮಿಯ ದಿನ ಸಮೀಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು!


ನಿನ್ನ ಬೆಳಕನು ನಾ ನಂದಿಸಿ ಕತ್ತಲಾಗಿಸುವಾಗ, ಮುಚ್ಚುವೆನು ಸೂರ್ಯಚಂದ್ರ ನಕ್ಷತ್ರಗಳನು ಮೋಡಮುಸುಕಿನಿಂದ.


ಏಕೆಂದರೆ, ಅವರ ಕೋಪಾಗ್ನಿಯ ಘೋರ ದಿನವು ಬಂದಿದೆ. ಅದರ ಮುಂದೆ ನಿಲ್ಲುವುದಕ್ಕೆ ಯಾರು ತಾನೇ ಶಕ್ತರು?” ಎಂದು ಹಲುಬಿದರು.


ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.


ನಿಮ್ಮ ಸಹನೆ, ಸಹಾನುಭೂತಿ ಸರ್ವರಿಗೂ ತಿಳಿದಿರಲಿ. ಪ್ರಭುವಿನ ಪುನರಾಗಮನ ಸಮೀಪಿಸಿದೆ.


ಅಂತೆಯೇ ಇದೆಲ್ಲವನ್ನು ನೋಡುವಾಗ ನರಪುತ್ರನು ಸಮೀಪಿಸಿಬಿಟ್ಟಿದ್ದಾನೆ, ಹೊಸ್ತಿಲಲ್ಲೇ ಇದ್ದಾನೆಂದು ತಿಳಿದುಕೊಳ್ಳಿ.


ಹಾಳುಬಿದ್ದಿರುವ ದೇಶಗಳೊಳಗೆ ಈಜಿಪ್ಟ್ ದೇಶವನ್ನೂ ಹಾಳು ಬೀಳಿಸುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲವತ್ತು ವರ್ಷ ಹಾಗೆಯೇ ಇರುವುವು; ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸ, ದೇಶವಿದೇಶಗಳಿಗೆ ತೂರಿಬಿಡುವೆನು.


ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರ ಅಶುದ್ಧ ಪದಾರ್ಥದಂತಿರುವುದು; ಸರ್ವೇಶ್ವರ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರ ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕೆಂದರೆ ಅವರ ಆಸ್ತಿ ಅವರಿಗೆ ಪಾಪಕ್ಕೆ ಕಾರಣವಾಗಿತ್ತು.


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ನ್ಯಾಯತೀರಿಸುವನು ಪ್ರಭು ಸಕಲ ಜನಾಂಗಗಳಲಿ I ಛೇಧಿಸುವನು ಶತ್ರುಗಳ ಶಿರಸನು ರಣರಂಗದಲಿ I ತುಂಬಿಸುವನು ಹೆಣಗಳನು ಎಲ್ಲೆಡೆಗಳಲಿ II


ಅಂಥವನ ಕಂಡು ಪ್ರಭು ನಸುನಗುತಿಹನು I ಅವನಿಗೊದಗಲಿಹ ಗತಿಯನು ಕಾಣುತಿಹನು II


ಬೆಳಗಿನ ಜಾವದಲ್ಲಿ ಸರ್ವೇಶ್ವರ ಆ ಅಗ್ನಿಸ್ತಂಭದಿಂದ ಈಜಿಪ್ಟಿನವರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದರು.


ಆ ಮೇಘಸ್ತಂಭವು ಈಜಿಪ್ಟಿನವರ ಪಡೆಗೂ ಇಸ್ರಯೇಲರ ಪಡೆಗೂ ನಡುವೆ ಬಂದು ಈಜಿಪ್ಟಿನವರಿಗೆ ಕತ್ತಲೆಯನ್ನುಂಟುಮಾಡಿತು; ಇಸ್ರಯೇಲರಿಗೆ ರಾತ್ರಿಯನ್ನು ಬೆಳಕಾಗಿಸಿತು. ಈ ಕಾರಣ ಆ ರಾತ್ರಿಯೆಲ್ಲಾ ಒಂದು ಪಡೆಯವರು ಇನ್ನೊಂದು ಪಡೆಯವರ ಬಳಿಗೆ ಬರಲಾಗಲಿಲ್ಲ.


ಪ್ರಲಾಪಿಸಿರಿ, ಸಮೀಪಿಸಿದೆ ಸರ್ವೇಶ್ವರನ ದಿನ; ಸನ್ನಿಹಿತವಾಗಿದೆ, ಸರ್ವನಾಶ ಮಾಡುವ ಸೇನಾಧೀಶ್ವರನ ದಿನ !


ಸರ್ವೇಶ್ವರನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ. ಇಸ್ರಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.


ಇಗೋ, ಸರ್ವೇಶ್ವರನ ದಿನ ಬರುತ್ತಿದೆ ! ಭೂಮಿಯನ್ನು ಹಾಳುಮಾಡಲು, ಪಾಪಿಗಳನ್ನು ನಿರ್ಮೂಲಮಾಡಲು; ಕೋಪೋದ್ರೇಕದಿಂದ, ರೋಷಾವೇಶದಿಂದ, ಕ್ರೂರವಾಗಿ ಬರುತ್ತಿದೆ !


ಆತನ ಶಬ್ದ ವ್ಯಾಪಿಸುವುದು ಭೂಮಿಯ ಕಟ್ಟಕಡೆಗೆ ಸರ್ವೇಶ್ವರನೆ ಆಪಾದನೆ ಹೊರಿಸುವನು ಜನಾಂಗಗಳ ಮೇಲೆ ನರಮಾನವರನ್ನೆಲ್ಲ ಗುರಿಮಾಡುವನು ತೀರ್ಪಿಗೆ ದುರುಳರನ್ನು ತುತ್ತಾಗಿಸುವನು ಕತ್ತಿಗೆ - ಇದು ಸರ್ವೇಶ್ವರನ ನುಡಿ’.”


“ಇಗೋ, ದಂಡನೆಯ ದಿನ ಬಂದೆಬಿಟ್ಟಿತು; ನಿನಗೆ ದುರ್ಗತಿ ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆ ಚಿಗುರಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು