Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:4 - ಕನ್ನಡ ಸತ್ಯವೇದವು C.L. Bible (BSI)

4 ಖಡ್ಗವು ಈಜಿಪ್ಟಿನ ಮೇಲೆ ಬೀಳುವುದು; ಅಲ್ಲಿ ಪ್ರಜೆಗಳು ಹತರಾಗಲು ಸುಡಾನಿನಲ್ಲಿಯೂ ಸಂಕಟವಾಗುವುದು; ಈಜಿಪ್ಟಿನಲ್ಲಿ ಹಲವರು ಸತ್ತುಬೀಳುವರು, ಅದರ ಅಸ್ತಿಭಾರ ಹಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಖಡ್ಗವು ಐಗುಪ್ತದ ಮೇಲೆ ಬೀಳುವುದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವುದು; ಐಗುಪ್ತದ ಜನಸಮೂಹವು ಒಯ್ಯಲ್ಪಡುವುದು, ಅದರ ಅಸ್ತಿವಾರವು ಮುರಿದು ಹಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಖಡ್ಗವು ಐಗುಪ್ತದ ಮೇಲೆ ಬೀಳುವದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವದು ; ಐಗುಪ್ತದ ಲಕ್ಷೋಪಲಕ್ಷ ಪ್ರಜೆಯು ಒಯ್ಯಲ್ಪಡುವದು; ಅದರ ಅಸ್ತಿವಾರವು ಹಾಳಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈಜಿಪ್ಟಿಗೆ ವಿರುದ್ಧವಾಗಿ ಒಂದು ಖಡ್ಗವು ಬರುವದು! ಈಜಿಪ್ಟ್ ಬೀಳುವಾಗ ಇಥಿಯೋಪ್ಯವು ಭಯದಿಂದ ನಡುಗುವದು. ಬಾಬಿಲೋನಿನ ಸೈನ್ಯವು ಈಜಿಪ್ಟಿನವರನ್ನು ಸೆರೆ ಹಿಡಿದುಕೊಂಡು ಹೋಗುವದು. ಈಜಿಪ್ಟಿನ ಅಡಿಪಾಯಗಳು ಒಡೆದುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಖಡ್ಗವು ಈಜಿಪ್ಟಿಗೆ ವಿರುದ್ಧವಾಗಿ ಬರುವುದು. ಕೂಷ್ ಪಟ್ಟಣವು ಸಂಕಟಪಡುವುದು. ಈಜಿಪ್ಟಿನಲ್ಲಿ ಕೊಲ್ಲಲಾದವರು ಬಿದ್ದಾಗ, ಅವಳ ಸಂಪತ್ತು ಸೂರೆಯಾಗುವುದು. ಅವಳ ಅಡಿಪಾಯಗಳು ಕಿತ್ತುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:4
19 ತಿಳಿವುಗಳ ಹೋಲಿಕೆ  

ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುವೆನು; ಅವನು ಅದರ ಜನರನ್ನೂ ಆಸ್ತಿಪಾಸ್ತಿಯನ್ನೂ ಒಯ್ದು, ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಿಕ್ಕುವ ಸಂಬಳ.


ಹೀಗಿರಲು, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ ಜನರನ್ನೂ ಜಾನುವಾರುಗಳನ್ನೂ ನಿನ್ನಿಂದ ನಿರ್ಮೂಲಮಾಡುವೆನು.


ಹಾಳುಬಿದ್ದಿರುವ ದೇಶಗಳೊಳಗೆ ಈಜಿಪ್ಟ್ ದೇಶವನ್ನೂ ಹಾಳು ಬೀಳಿಸುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲವತ್ತು ವರ್ಷ ಹಾಗೆಯೇ ಇರುವುವು; ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸ, ದೇಶವಿದೇಶಗಳಿಗೆ ತೂರಿಬಿಡುವೆನು.


ಆದರ ಸುತ್ತಲು ರಣಘೋಷಮಾಡಿರಿ. ಇಗೋ, ಅದು ಶರಣಾಗತವಾಯಿತು! ಅದರ ಕೋಟೆಕೊತ್ತಲಗಳು ಬಿದ್ದವು. ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಸರ್ವೇಶ್ವರನಾದ ನಾನು ಅದಕ್ಕೆ ಮುಯ್ಯಿತೀರಿಸಿದ್ದೇನೆ. ನೀವೂ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ.


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಈಜಿಪ್ಟಿನವರಲ್ಲಿ ಒಳಜಗಳವನ್ನು ಎಬ್ಬಿಸುವೆನು. ಅಣ್ಣತಮ್ಮಂದಿರು, ನೆರೆಹೊರೆಯವರು, ನಗರನಗರಗಳು, ರಾಜರಾಜರುಗಳು ಪರಸ್ಪರ ಕಾದಾಡುವರು.


ಇದಕಾರಣ ಮೋವಾಬ್ಯರೇ ಗೋಳಾಡಲಿ, ಪ್ರಲಾಪಿಸಲಿ ಪ್ರತಿಯೊಬ್ಬನು ಮೋವಾಬಿಗಾಗಿ, ಕೀರ್ ಹರೆಷೆಥಿನ ದೀಪದ್ರಾಕ್ಷಿಯ ಕಡುಬಿಗಾಗಿ, ನೆನೆದು ನರಳಿ ಹಲುಬಲಿ ಅದಕ್ಕಾಗಿ.


ಎಥಿಯೋಪಿಯದ ನದಿಗಳಾಚೆ ಇರುವ ಸೀಮೆಗೆ ಧಿಕ್ಕಾರ ! ರೆಕ್ಕೆಗಳನ್ನು ಪಟಪಟನೆ ಬಡಿಯುವ ಮಿಡತೆಗಳಿಂದ ಕೂಡಿರುವ ನಾಡಿಗೆ ಧಿಕ್ಕಾರ !


ಮತ್ತು ಎಲ್ಲ ಖೇಡ್ಯಶಿರಸ್ತ್ರಾಣಧಾರಿಗಳಾದ ಪರ್ಷಿಯರು, ಕೂಸ್ಯರು, ಪೂಟ್ಯರು ಇವರನ್ನು ಹಾಗು


ಬೆಳ್ಳಿಬಂಗಾರಗಳ ನಿಧಿನಿಕ್ಷೇಪಗಳನ್ನು ಹಾಗು ಈಜಿಪ್ಟಿನ ಒಳ್ಳೊಳ್ಳೆಯ ವಸ್ತುಗಳೆಲ್ಲವನ್ನು ವಶಮಾಡಿಕೊಳ್ಳುವನು. ಲಿಬ್ಯ ಮತ್ತು ಸುಡಾನಿನವರು ಅವನನ್ನು ಹಿಂಬಾಲಿಸುವರು.


ಸುಡಾನಿನ ಜನರೇ, ನೀವೂ ಸಹ ಕತ್ತಿಗೆ ತುತ್ತಾಗುವಿರಿ.


ಆಗ ಸರ್ವೇಶ್ವರ : “ನನ್ನ ದಾಸ ಯೆಶಾಯನು ಈಜಿಪ್ಟಿನ ಮತ್ತು ಸುಡಾನಿನ ವಿನಾಶಕ್ಕೆ ಸೋಜಿಗದ ಗುರುತಾಗಿ ಮೂರು ವರ್ಷ ಬಟ್ಟೆಯಿಲ್ಲದೆ ಬರಿಗಾಲಿನಲ್ಲಿ ತಿರುಗಾಡಿದನು.


ಅಶ್ವಗಳೇ, ಕುಣಿದಾಡಿ; ರಥಗಳೇ, ರಭಸವಾಗಿ ಓಡಿ! ಹೊರಡಲಿ ಶೂರರು, ಖೇಡ್ಯ ಸನ್ನದ್ಧರಾದ ಸುಡಾನರು, ಲಿಬಿಯಾದವರು ಮುನ್ನುಗ್ಗಲಿ ಧನುರ್ಧಾರಿಗಳಾದ ಲಿಡಿಯದವರು.


ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು; ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ತಿಳಿದುಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು