Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:9 - ಕನ್ನಡ ಸತ್ಯವೇದವು C.L. Bible (BSI)

9 “ಆ ದಿನಗಳಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು, ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಸುಡಾನರನ್ನು ಹೆದರಿಸುವರು; ಈಜಿಪ್ಟಿನ ವಿನಾಶ ದಿನದಲ್ಲಿ ಸುಡಾನರಿಗೂ ಸಂಕಟವಾಗುವುದು; ಇಗೋ, ಆ ದಿನ ಬಂದಿತು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಯರಿಗೂ ಸಂಕಟವು ಉಂಟಾಗುವುದು; ಇಗೋ, ಆ ದಿನ ಬಂತು!’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶನದಿನದಲ್ಲಿ ಕೂಷ್ಯರಿಗೂ ಸಂಕಟವಾಗುವದು; ಇಗೋ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “‘ಆ ಸಮಯದಲ್ಲಿ, ನಾನು ಸಂದೇಶವಾಹಕರನ್ನು ಕಳುಹಿಸುವೆನು. ಅವರು ಇಥಿಯೋಪ್ಯಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿ ಕೆಟ್ಟ ಸುದ್ದಿಯನ್ನು ಒಯ್ಯುವರು. ಇಥಿಯೋಪ್ಯ ಈಗ ಸುರಕ್ಷಿತವಾಗಿರುವುದು. ಆದರೆ ಈಜಿಪ್ಟ್ ಶಿಕ್ಷಿಸಲ್ಪಟ್ಟಾಗ ಇಥಿಯೋಪ್ಯದ ಜನರು ಭಯದಿಂದ ನಡುಗುವರು. ಆ ಸಮಯವು ಬರುವದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು. ಈಜಿಪ್ಟಿನ ದಿನದಲ್ಲಿ ಆದ ಹಾಗೆ ಅವರ ಮೇಲೆ ದೊಡ್ಡ ದುಃಖ ಉಂಟಾಗುವುದು, ಏಕೆಂದರೆ ಇಗೋ, ಆ ದಿನ ಬರುವುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:9
24 ತಿಳಿವುಗಳ ಹೋಲಿಕೆ  

ಟೈರಿನ ದುರ್ಗತಿಯ ಸುದ್ದಿಯನ್ನು ಕೇಳಿದ ಈಜಿಪ್ಟಿನವರು ಸಹ ಕಳವಳಪಡುವರು.


“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!


ಸುಡಾನಿನ ಜನರೇ, ನೀವೂ ಸಹ ಕತ್ತಿಗೆ ತುತ್ತಾಗುವಿರಿ.


“ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು; ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು.” ಒಡೆಯರಾದ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.


ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಿತವಾಗುವುದು.


ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ, ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ, ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು,’ ಎಂದುಕೊಂಡು ಸೂರೆಗೈಯಲು ಆಶಿಸುವೆ;


ನೀನು ಮುಂತಿಳಿಸಿದ್ದು ಸಂಭವಿಸುವಾಗ ಅದು ಈಗ ಸಂಭವಿಸಲಿದೆ, ತಮ್ಮ ಮಧ್ಯೆ ಇದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವುದು.”


ನಿನ್ನೀ ಗತಿಗೆ ಬೆರಗಾಗಿಹರು ಕರಾವಳಿಯ ಸರ್ವನಿವಾಸಿಗಳು, ರೋಮಾಂಚಿತರಾಗಿಹರು ಮೊಗಗೆಟ್ಟು ರಾಜರಾಜರುಗಳು;


ಆಗ ಸಮುದ್ರದ ಸುತ್ತುಮುತ್ತಲಿನ ಎಲ್ಲ ಒಡೆಯರು ತಮ್ಮ ಸಿಂಹಾಸನಗಳಿಂದಿಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ಕಸೂತಿ ವಸ್ತ್ರಗಳನ್ನು ಕಿತ್ತೆಸೆದು, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಕ್ಕರಿಸಿ, ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿಬೆರಗಾಗುವರು.


ಅದಕ್ಕೆ ಬಾಗಿಲೂ ಇಲ್ಲ, ಬೀಗವೂ ಇಲ್ಲ’ ಎನ್ನುತ್ತಿದ್ದಾನೆ.


ಎದೋಮ್ಯರು ತಟ್ಟನೆ ಬೀಳುವರು, ಭೂಮಿ ಕಂಪಿಸುವುದು. ಆಗ ಉಂಟಾಗುವ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು.


ಭೋಗಾಸಕ್ತಳೆ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ‘ಏಕೈಕಳು ನಾನೇ, ನನ್ನ ಹೊರತು ಇನ್ನಾರು ಇಲ್ಲ,’ ಎನ್ನುವವಳೇ, ‘ವಿಧವೆಯಾಗೆನು, ಪುತ್ರಶೋಕ ಎನಗಿರದು’ ಎನ್ನುವವಳೇ, ಇದನು ಕೇಳು :


ಸುಡಾನನ್ನು ನೆಚ್ಚಿಕೊಂಡಿದ್ದವರು ಮತ್ತು ಈಜಿಪ್ಟನ್ನು ಕುರಿತು ಕೊಚ್ಚಿಕೊಳ್ಳುತ್ತಿದ್ದವರು ನಾಚಿಕೆಪಟ್ಟು ನಿರಾಶೆಗೊಳ್ಳುವರು.


ಆಗ ಸರ್ವೇಶ್ವರ : “ನನ್ನ ದಾಸ ಯೆಶಾಯನು ಈಜಿಪ್ಟಿನ ಮತ್ತು ಸುಡಾನಿನ ವಿನಾಶಕ್ಕೆ ಸೋಜಿಗದ ಗುರುತಾಗಿ ಮೂರು ವರ್ಷ ಬಟ್ಟೆಯಿಲ್ಲದೆ ಬರಿಗಾಲಿನಲ್ಲಿ ತಿರುಗಾಡಿದನು.


ಜುದೇಯ ನಾಡು ಈಜಿಪ್ಟಿನವರಿಗೆ ಭಯಂಕರವಾಗಿರುವುದು. ಆ ನಾಡಿನ ಹೆಸರನ್ನು ಕೇಳಿದ್ದೇ ತಡ, ಪ್ರತಿಯೊಬ್ಬನೂ ಬೆಚ್ಚಿಬೀಳುವನು. ಪ್ರತಿಯೊಬ್ಬನೂ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಈಜಿಪ್ಟಿನ ವಿರುದ್ಧ ಮಾಡಿರುವ ಸಂಕಲ್ಪವನ್ನು ತಿಳಿದು ನಿಬ್ಬೆರಗಾಗುವನು.


ಆ ಐದು ಮಂದಿ ಹೊರಟು ಲಯಿಷಿಗೆ ಬಂದರು. ಇಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖಸಮಾಧಾನಗಳಿಂದ ಜೀವಿಸುತ್ತಾರೆ; ಇವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ. ಇವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬುದನ್ನು ತಿಳಿದುಕೊಂಡು ಹಿಂದಿರುಗಿ,


ರಾತ್ರಿಯಲ್ಲಿ ಕಳ್ಳನು ಬರುವ ಹಾಗೆ ಪ್ರಭುವಿನ ದಿನವು ಬರುವುದೆಂದು ನೀವು ಚೆನ್ನಾಗಿ ಬಲ್ಲಿರಿ.


ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು