Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:10 - ಕನ್ನಡ ಸತ್ಯವೇದವು C.L. Bible (BSI)

10 “ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿ ಮೋಡಕ್ಕೆ ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು, ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾದ ವಿಷಯವಾಗಿ ಉಬ್ಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿಯನ್ನು ಮೋಡಕ್ಕೆ ತಗಲಿಸಿ ತನ್ನ ನೀಳದ ವಿಷಯವಾಗಿ ಉಬ್ಬಿಕೊಂಡದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಆ ಮರವು ಎತ್ತರವಾಗಿ ಬೆಳೆಯಿತು. ಅದರ ತುದಿ ಮುಗಿಲನ್ನು ಮುಟ್ಟಿತು. ಇದು ಅದಕ್ಕೆ ಹೆಮ್ಮೆಯನ್ನು ತಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಅವನು ಎತ್ತರವಾಗಿ ಬೆಳೆದು ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:10
16 ತಿಳಿವುಗಳ ಹೋಲಿಕೆ  

ಹಾಗೆ ಅವರ ಎದೆ ಗರ್ವದಿಂದ ಉಬ್ಬಿಹೋಯಿತು. ಮನಸ್ಸಿಗೆ ಸೊಕ್ಕೇರಿಹೋಯಿತು. ಅವರನ್ನೂ ರಾಜಾಸ್ಥಾನದಿಂದ ತಳ್ಳಲಾಯಿತು. ಮಾನ ಕಳೆದುಹೋಯಿತು.


ಸೊಬಗಿನ ನಿಮಿತ್ತ ನೀ ಗರ್ವಿಯಾದೆ ಮೆರೆತದಿಂದ ಬುದ್ಧಿಯನ್ನು ಕಳೆದುಕೊಂಡೆ. ಎಂದೇ, ನಾ ನಿನ್ನನ್ನು ದೊಬ್ಬಿಬಿಟ್ಟೆ, ನೆಲಕೆ ಅರಸರ ಕಣ್ಮುಂದೆ ಎಸೆದೆ ಅವರಿಗೆ ಅವರಿಗೆ ನೋಟವಾಗಲೆಂದೆ.


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದ್ದರಿಂದ ಜುದೇಯದ ಮೇಲೂ ಜೆರುಸಲೇಮಿನವರ ಮೇಲೂ ದೇವರ ಕೋಪವೆರಗಿತು.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು.


ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ.


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


ನೀರಾವರಿಯ ಯಾವ ಮರವು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತನ್ನ ತುದಿಯಿಂದ ಮೋಡ ಮುಟ್ಟದಿರಲೆಂದು ಹಾಗೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಿಗುರಿಕೊಳ್ಳದಿರಲೆಂದು ಹೀಗಾಯಿತು; ಆದರೆ ಎಲ್ಲ ಮರಗಳು ಮರಣದ ಪಾಲಾಗುವುವು. ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ, ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವುವು.”


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ಅಹಹ! ಎದೋಮ್ಯರನ್ನು ಸೋಲಿಸಿ ಬಹುಕೀರ್ತಿ ಪಡೆದುಕೊಂಡೆ ಎಂದು ನೀನು ಹೆಮ್ಮೆಗೊಂಡಿರುವೆ! ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೆ? ನನ್ನನ್ನು ಕೆಣಕಿ ನಿನಗೂ ನಿನ್ನ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ,” ಎಂದು ಉತ್ತರಕೊಟ್ಟನು.


ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನನಾರು? ಲೆಬನೋನಿನಲ್ಲಿ ದೇವದಾರು ವೃಕ್ಷವೊಂದಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ ಅದರ ಎತ್ತರ ಬಹಳ, ಅದರ ತುದಿ ಮೇಘಚುಂಬಿತ.


ಆ ಮರವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿ, ಎಲೆಗಳನ್ನು ಉದುರಿಸಿ, ಹಣ್ಣುಗಳನ್ನು ಕಿತ್ತುಬಿಸಾಡಿ. ಮೃಗಗಳು ಅದರ ನೆರಳನ್ನು ಬಿಟ್ಟು ತೆರಳಲಿ, ಪಕ್ಷಿಗಳು ರೆಂಬೆಗಳನ್ನು ತೊರೆದುಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು