Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:11 - ಕನ್ನಡ ಸತ್ಯವೇದವು C.L. Bible (BSI)

11 ಅದುದರಿಂದ ನಾನು ಅದನ್ನು ರಾಷ್ಟ್ರಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ತೀರುವನು; ನಾನು ಅದನ್ನು ತಳ್ಳಿಹಾಕಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದುದರಿಂದ ನಾನು ಅದನ್ನು ಜನಾಂಗಗಳಲ್ಲಿ ಮಹಾ ಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸುತ್ತಾನೆ. ನಾನು ಅದರ ದುಷ್ಟತ್ವದ ನಿಮಿತ್ತ ತಳ್ಳಿಹಾಕಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಅದನ್ನು ಜನಾಂಗಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ದಂಡಿಸುವನು; ನಾನು ಅದನ್ನು ತಳ್ಳಿಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ನಾನು ಒಬ್ಬ ಬಲಾಢ್ಯನಾದ ರಾಜನು ಬಂದು ಆ ಮರವನ್ನು ತೆಗೆದುಕೊಳ್ಳುವಂತೆ ಮಾಡಿದೆನು. ಆ ರಾಜನು ಮರವು ಮಾಡಿದ ದುಷ್ಕೃತ್ಯಗಳಿಗಾಗಿ ಅದನ್ನು ಶಿಕ್ಷಿಸಿದನು. ಆ ಮರವನ್ನು ನಾನು ನನ್ನ ತೋಟದಿಂದ ತೆಗೆದು ಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ನಾನು ಅವನನ್ನು ಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಕೊಟ್ಟಿದ್ದೇನೆ. ಇವನು ನಿಶ್ಚಯವಾಗಿ ಅದನ್ನು ದಂಡಿಸುತ್ತಾನೆ ಅದರ ದುಷ್ಟತ್ವದ ನಿಮಿತ್ತ ನಾನು ಅದನ್ನು ತಳ್ಳಿಹಾಕಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:11
21 ತಿಳಿವುಗಳ ಹೋಲಿಕೆ  

“ಅಸ್ಸೀರಿಯಾದ ಅರಸನೇ, ನಿನ್ನ ರಾಜ್ಯಪಾಲರು ದೀರ್ಘನಿದ್ರೆಯಲ್ಲಿದ್ದಾರೆ. ನಿನ್ನ ಪ್ರಮುಖರು ಜಡವಾಗಿ ಬಿದ್ದಿದ್ದಾರೆ. ನಿನ್ನ ಪ್ರಜೆಗಳು ಬೆಟ್ಟಗುಡ್ಡಗಳಲ್ಲಿ ಚದರಿಹೋಗಿದ್ದಾರೆ. ಅವರನ್ನು ಒಟ್ಟುಗೂಡಿಸತಕ್ಕವರು ಯಾರೂ ಇಲ್ಲದಿದ್ದಾರೆ.


ಇಂಥ ಕೆಲಸಗಳನ್ನು ನಡೆಸುವವರು ಸರ್ವೇಶ್ವರನಿಗೆ ಅಸಹ್ಯರಾಗಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ದೂರ ಹೊರದೂಡಿಸಿಬಿಡುತ್ತಾರೆ.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಹುಮೆನಾಯನೂ ಅಲೆಗ್ಸಾಂಡರನೂ ಇದಕ್ಕೆ ನಿದರ್ಶನವಾಗಿದ್ದಾರೆ. ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನ ವಶಕ್ಕೆ ಒಪ್ಪಿಸಿಬಿಟ್ಟಿದ್ದೇನೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ ಯಾರ ಬಗ್ಗೆ ಅಸಹ್ಯಪಡುತ್ತಿಯೋ


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.


ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು.


ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಬಲಿಯನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯರ ಮುಖಂಡರು ಕೂಡಿಬಂದರು.


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


ಅದಲ್ಲದೆ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕಾಗಿ ಆ ವನದ ಪೂರ್ವದಿಕ್ಕಿನಲ್ಲೆ ‘ಕೆರೂಬಿ’ಯರನ್ನೂ ಪ್ರಜ್ವಲಿಸುತ್ತಾ ಎಲ್ಲ ಕಡೆ ಸುತ್ತುವ ಕತ್ತಿಯನ್ನೂ ಇರಿಸಿದರು.


ಉಲ್ಲಂಘನೆಯಾಗಿದೆ ಪ್ರಭು, ನಿನ್ನ ಧರ್ಮಶಾಸ್ತ್ರ I ಸಮಯ ಬಂದೊದಗಿದೆ, ಆಗು ನೀನು ಕಾರ್ಯತತ್ಪರ II


ಹೀಗಿರಲು, ಇಸ್ರಯೇಲಿನ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ಅಸ್ಸೀರಿಯಾದ ಅರಸನನ್ನು ನಾನು ದಂಡಿಸಿದಂತೆ ಬಾಬಿಲೋನಿನ ಅರಸನನ್ನೂ ಅವನ ದೇಶವನ್ನೂ ದಂಡಿಸುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.


ಆ ದೇಶವನ್ನು ನಾಶಪಡಿಸಲು ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಈಜಿಪ್ಟಿನ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು