ಯೆಹೆಜ್ಕೇಲನು 31:14 - ಕನ್ನಡ ಸತ್ಯವೇದವು C.L. Bible (BSI)14 ನೀರಾವರಿಯ ಯಾವ ಮರವು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತನ್ನ ತುದಿಯಿಂದ ಮೋಡ ಮುಟ್ಟದಿರಲೆಂದು ಹಾಗೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಿಗುರಿಕೊಳ್ಳದಿರಲೆಂದು ಹೀಗಾಯಿತು; ಆದರೆ ಎಲ್ಲ ಮರಗಳು ಮರಣದ ಪಾಲಾಗುವುವು. ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ, ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವುವು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ನೀರಾವರಿಯ ಯಾವ ಮರಗಳೂ ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು, ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ, ನೀರನ್ನು ಹೀರುತ್ತಲೇ ಇರುವ ದೊಡ್ಡದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು. ಅವೆಲ್ಲಾ ಮರಣದ ಪಾಲಾಗುವುವು, ಅಧೋಲೋಕವೇ ಅವುಗಳಿಗೆ ಗತಿಯಾಗುವುದು; ಪಾತಾಳಕ್ಕೆ ಇಳಿದು ಹೋದ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀರಾವರಿಯ ಯಾವ ಮರಗಳೂ ತಮ್ಮ ನೀಳವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದಿರಲೆಂದೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ನಿಗುರಿಕೊಳ್ಳದಿರಲೆಂದೂ ಹೀಗಾಯಿತು; ಅವೆಲ್ಲಾ ಮರಣದ ಪಾಲಾಗುವವು, ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಈಗ ಆ ನೀರಿನ ಬಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನ್ನು ಮುಟ್ಟಲು ಪ್ರಯತ್ನಿಸುವದಿಲ್ಲ. ಚೆನ್ನಾಗಿ ಬೆಳೆದ ಮರಗಳು ಆ ನೀರನ್ನು ಕುಡಿದು ತಾನು ಉದ್ದವಾಗಿ ಬೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನ್ನು ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನ್ನು ಸೇರುವವು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ ಇರುವುದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವುವು. ಅವುಗಳಿಗೆ ಅಧೋಲೋಕವೇ ಗತಿಯಾಗುವುದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವುವು. ಅಧ್ಯಾಯವನ್ನು ನೋಡಿ |