Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:16 - ಕನ್ನಡ ಸತ್ಯವೇದವು C.L. Bible (BSI)

16 ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಮತ್ತು ಪೂರ್ವಕಾಲದಲ್ಲಿ ಅಧೋಲೋಕದ ಪಾಲಾದ ಏದೆನಿನ ಎಲ್ಲ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ಸಸ್ಯಗಳೂ ಅಲ್ಲಿ ಸಂತೈಸಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲಜನಾಂಗಗಳು ನಡುಗಿದವು; ಮತ್ತು [ಪೂರ್ವಕಾಲದಲ್ಲಿ] ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಅದನ್ನು ಕುಳಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು. ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವುವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:16
20 ತಿಳಿವುಗಳ ಹೋಲಿಕೆ  

ಇಂತೆಂದ ನೀನು ದೂಡಲಾಗಿರುವೆ ಪಾತಾಳಕೆ ಅಧೋಲೋಕದ ಅಗಾಧ ಕೂಪಗಳಿಗೆ.


ಸರ್ವೇಶ್ವರನಾದ ದೇವರು ಟೈರ್ ನಗರಕ್ಕೆ ಹೀಗೆ ಹೇಳುತ್ತಾರೆ - “ನಿನ್ನ ಮಧ್ಯದಲ್ಲಿ ಕಗ್ಗೊಲೆಯುಂಟಾಗಿ, ಗಾಯಗೊಂಡವರು ನರಳುತ್ತಿರಲು, ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ?


ನಲಿಯುತಿಹವು ತುರಾಯಿ, ಲೆಬನೋನಿನ ದೇವದಾರು ವೃಕ್ಷಗಳು ಕೂಡಾ, ‘ಮಡಿದು ಹೋದನಿವನು, ಇನ್ನು, ಕಡಿವವರಾರು ನಮ್ಮನು?’ ಎನ್ನುತಾ.


ಸಕಲ ಜನಾಂಗಗಳನ್ನು ನಡುಗಿಸುವೆನು. ಆಗ ಎಲ್ಲ ರಾಷ್ಟ್ರಗಳ ಸಿರಿಸಂಪತ್ತು ಇಲ್ಲಿಗೆ ಬರುವುದು. ಈ ಆಲಯವನ್ನು ವೈಭವದಿಂದ ತುಂಬಿಸುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.


ನೀನು ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಲೆಬನೋನ್ ಅರಣ್ಯಗಳನ್ನೂ ಕಡಿದುಹಾಕಿರುವೆ. ಈಗ ನಿನ್ನನ್ನೇ ಕಡಿದುಹಾಕಲಾಗುವುದು. ಅದರ ಪ್ರಾಣಿಪಕ್ಷಿಗಳನ್ನು ನಾಶಮಾಡಿರುವೆ. ಈಗ ಅವು ನಿನಗೆ ಭಯಾನಕವಾಗಿರುವುವು.


ನಾನದನು ಅಷ್ಟೊಂದು ಸುಂದರಗೊಳಿಸಿದ್ದೆ ಶಾಖೋಪಶಾಖೆಗಳಿಂದ ಅಸೂಯೆಪಡುತ್ತಿದ್ದವು ಏದೇನಿನ ದೇವೋದ್ಯಾನದ ವೃಕ್ಷಗಳೆಲ್ಲ.


ನಡುಗುವುವು ಸಮೀಪದ ಪ್ರದೇಶಗಳು ಆ ನಾವಿಕರ ಕೂಗಾಟಕೆ.


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ಶತ್ರುವಿನ ಶೂರರ ಗುರಾಣಿ ರಕ್ತಗೆಂಪು, ಪರಾಕ್ರಮಿಗಳ ಉಡುಪು ಕಡುಗೆಂಪು. ರಣರಂಗದೊಳು ಥಳಥಳಿಸುತ್ತವೆ ರಥಗಳು ಝಳಪಿಸುತ್ತವೆ ಈಟಿಗಳು. ಕಾಳಗಕ್ಕೆ ಕಾತರದಿಂದಿವೆ ಕುದುರೆಗಳು.


ಇಂಥಾ ವೈಭವದಿಂದ ಹಾಗೂ ಮಹಿಮೆಯಿಂದ ಕೂಡಿದ ನೀನು, ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ದೂಡಿದವನಾಗಿ ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವೆ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.”


ನೀರಾವರಿಯ ಯಾವ ಮರವು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತನ್ನ ತುದಿಯಿಂದ ಮೋಡ ಮುಟ್ಟದಿರಲೆಂದು ಹಾಗೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಿಗುರಿಕೊಳ್ಳದಿರಲೆಂದು ಹೀಗಾಯಿತು; ಆದರೆ ಎಲ್ಲ ಮರಗಳು ಮರಣದ ಪಾಲಾಗುವುವು. ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ, ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವುವು.”


ಅವನ ಲೆಕ್ಕವಿಲ್ಲದ ಕುದುರೆಗಳಿಂದೆದ್ದ ಧೂಳು ನಿನ್ನನ್ನು ಮುಸುಕುವುದು; ಒಡಕು ಬಿದ್ದ ಕೋಟೆಯೊಳಗೆ ಶತ್ರು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಸರಕುಗಾಡಿ, ರಥ, ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಅದರುವುವು.


ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಅವರು ನಿಮ್ಮ ಬಳಿ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು, ನಾನು ಜೆರುಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ ಅದಕ್ಕೆ ಉಂಟುಮಾಡಿದ ಎಲ್ಲ ಕೇಡುಗಳ ವಿಷಯವಾಗಿ, ಸಮಾಧಾನ ಹೊಂದುವಿರಿ.


ಬಾಬಿಲೋನ್ ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿ ಕಂಪಿಸುವುದು. ಅದರ ಮೊರೆ ರಾಷ್ಟ್ರಗಳಿಗೆ ಕೇಳಿಸುವುದು.


ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಜೆರುಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ಆಗ ತಿಳಿಯುವುದು. ಇದು ಸರ್ವೇಶ್ವರನಾದ ದೇವರ ನುಡಿ.”


ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನನಾರು? ಲೆಬನೋನಿನಲ್ಲಿ ದೇವದಾರು ವೃಕ್ಷವೊಂದಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ ಅದರ ಎತ್ತರ ಬಹಳ, ಅದರ ತುದಿ ಮೇಘಚುಂಬಿತ.


ದೇವೋದ್ಯಾನದ ಇತರ ದೇವದಾರುಗಳಿಂದ ಅದನು ಮುಚ್ಚಲಾಗಲಿಲ್ಲ. ತುರಾಯಿ ಮರಗಳು ಅದರ ರೆಂಬೆಗಳಷ್ಟು ಉದ್ದವಾಗಿರಲಿಲ್ಲ. ಅತ್ತಿಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ. ದೇವರವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು