ಯೆಹೆಜ್ಕೇಲನು 31:5 - ಕನ್ನಡ ಸತ್ಯವೇದವು C.L. Bible (BSI)5 ಇಂತಿರಲು ವನವೃಕ್ಷಗಳಲೆಲ್ಲ ಆ ವೃಕ್ಷ ಅತ್ಯುನ್ನತವಾಗಿತ್ತು ಅದರ ರೆಂಬೆಗಳು ನಿಬಿಡವಾಗಿದ್ದವು, ಉದ್ದುದ್ದ ಚಾಚಿಕೊಂಡಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದುದರಿಂದ ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಎತ್ತರವಾಗಿತ್ತು; ಅದರ ಕೊಂಬೆಗಳು ಹಬ್ಬಿದ್ದುದರಿಂದ ಮತ್ತು ಹೆಚ್ಚಿನ ನೀರಾವರಿಯಿದ್ದ ಕಾರಣ ಅದರ ಕೊಂಬೆಗಳು ಅಧಿಕವಾದವು. ಕೊಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೀಗಿರಲು ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಅತ್ಯುನ್ನತವಾಗಿತ್ತು; ಅದರ ಕೊಂಬೆಗಳು ನಿಬಿಡವಾಗಿದ್ದವು; ಅಲ್ಲಿ ನೀರಾವರಿಯಿದ್ದ ಕಾರಣ ಅದರ ರೆಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾಕೆಂದರೆ ಈ ಮರವು ಬೇರೆ ಮರಗಳಿಗಿಂತ ಉನ್ನತವಾಗಿ ಕಾಣಿಸಿಕೊಳ್ಳಲು, ಅದು ಅನೇಕ ಕೊಂಬೆಗಳನ್ನು ಬಿಟ್ಟಿತು. ಅಲ್ಲಿ ಬೇಕಾದಷ್ಟು ನೀರು ಇದ್ದುದರಿಂದ ಕೊಂಬೆಗಳು ಉದ್ದವಾಗಿಯೂ ವಿಶಾಲವಾಗಿಯೂ ಬೆಳೆದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರಗಳಿಗಿಂತ ಎತ್ತರವಾಗಿತ್ತು. ಅದು ಹಬ್ಬಿದ್ದುದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು. ಅಧ್ಯಾಯವನ್ನು ನೋಡಿ |