Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:8 - ಕನ್ನಡ ಸತ್ಯವೇದವು C.L. Bible (BSI)

8 ದೇವೋದ್ಯಾನದ ಇತರ ದೇವದಾರುಗಳಿಂದ ಅದನು ಮುಚ್ಚಲಾಗಲಿಲ್ಲ. ತುರಾಯಿ ಮರಗಳು ಅದರ ರೆಂಬೆಗಳಷ್ಟು ಉದ್ದವಾಗಿರಲಿಲ್ಲ. ಅತ್ತಿಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ. ದೇವರವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ; ಆಲದ ಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮುಚ್ಚಲಾರದೆ ಹೋದವು; ತುರಾಯಿಮರಗಳು ಅದರ ರೆಂಬೆಗಳಷ್ಟು ಉದ್ದವಾಗಿರಲಿಲ್ಲ; ಅತ್ತಿಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರ ತೋಟದಲ್ಲಿರುವ ದೇವದಾರು ಮರಗಳೂ ಈ ಮರದಷ್ಟು ಎತ್ತರವಾಗಿರಲಿಲ್ಲ. ಈ ಮಹಾ ಮರಕ್ಕಿರುವಷ್ಟು ಕೊಂಬೆಗಳು ಸೈಪ್ರಸ್ ಮರಗಳಿಗೂ ಇಲ್ಲ. ದೇವರ ತೋಟದಲ್ಲಿದ್ದ ಯಾವ ಮರವಾದರೂ ಇದರಷ್ಟು ಅಂದವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರ ತೋಟದ ದೇವದಾರುಗಳು ಅದನ್ನು ಮರೆಮಾಡಲಿಲ್ಲ. ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ. ಆಲದ ಮರಗಳು ಅದರ ರೆಂಬೆಗಳಷ್ಟೂ ಇಲ್ಲ. ಆ ದೇವರ ತೋಟದ ಯಾವುದೇ ಮರವು ಇದರ ಸೌಂದರ್ಯಕ್ಕೆ ಸಮವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:8
15 ತಿಳಿವುಗಳ ಹೋಲಿಕೆ  

ನೀನಿದ್ದೆ ದೇವರ ಉದ್ಯಾನವನದ ಏದೆನಿನೊಳು ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ಬೆರುಲ್ಲ, ವೈಡೂರ್ಯ, ನೀಲ, ಕೆಂಪರಲು, ಸ್ಫಟಿಕವೆಂಬ ನವರತ್ನಗಳಿಂದ ಭೂಷಿತನಾಗಿದ್ದೆ ನೀನು. ನಿನ್ನ ಕಿವಿಯೋಲೆ ಆಭರಣಗಳು ಸುವರ್ಣಖಚಿತವಾಗಿದ್ದವು. ನಿನ್ನ ಸೃಷ್ಟಿಯ ದಿನದಂದೇ ಸಿದ್ಧವಾಗಿದ್ದವವು.


ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.


ಬೆಟ್ಟಗುಡ್ಡಗಳನಿದೋ ಕವಿದಿದೆ ಅದರ ಕುಡಿಗಳು I ದೇವದಾರು ಮರಗಳ ಮೇಲೆ ಹಬ್ಬಿವೆ ಬಳ್ಳಿಗಳು II


ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.


ಇಂಥಾ ವೈಭವದಿಂದ ಹಾಗೂ ಮಹಿಮೆಯಿಂದ ಕೂಡಿದ ನೀನು, ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ದೂಡಿದವನಾಗಿ ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವೆ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.”


ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಮತ್ತು ಪೂರ್ವಕಾಲದಲ್ಲಿ ಅಧೋಲೋಕದ ಪಾಲಾದ ಏದೆನಿನ ಎಲ್ಲ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ಸಸ್ಯಗಳೂ ಅಲ್ಲಿ ಸಂತೈಸಿಕೊಂಡವು.


ದುರುಳನೋರ್ವ ಮಹಾಗರ್ವದಿಂದ ಬಾಳುತ್ತಿದ್ದ I ಹುಲುಸಾಗಿ ಬೆಳೆದ ದೇವದಾರು ಮರದಂತಿದ್ದ II


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ಗಾಂಭೀರ್ಯ ಲೆಬನೋನಿಗೆ ಸಮಾನ ದೇವದಾರು ಮರಗಳಂತೆ ರಮಣೀಯ.


ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನನಾರು? ಲೆಬನೋನಿನಲ್ಲಿ ದೇವದಾರು ವೃಕ್ಷವೊಂದಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ ಅದರ ಎತ್ತರ ಬಹಳ, ಅದರ ತುದಿ ಮೇಘಚುಂಬಿತ.


ಬೇರಿಗೆ ಬೇಕಾದ ಜಲಾಸರೆ ಪಡೆದಿದ್ದ ಆ ಮರವು ಎತ್ತರದಿಂದ, ನೀಳವಾದ ರೆಂಬೆಗಳಿಂದ ಕಂಗೊಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು