Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:2 - ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನನ್ನು ಕುರಿತು ಶೋಕಗೀತೆಯೊಂದನ್ನು ನುಡಿ : “ನೀನು ಮೃಗರಾಜನೆನಿಸಿಕೊಂಡಿರುವೆ ಜನಾಂಗಗಳಲ್ಲಿ, ಇಗೋ ದೊಡ್ಡ ಮೊಸಳೆಯಾಗಿಬಿಟ್ಟಿರುವೆ ಮಹಾನದಿಯಲ್ಲಿ. ನೀನಿದ್ದ ನದಿಗಳ ಭೇದಿಸಿಕೊಂಡು ಬಂದು, ಕಾಲಿಂದ ನೀ ಕಲಕಿರುವೆ ಅದರ ನೀರನ್ನು, ತುಳಿದು ಬದಿಮಾಡಿರುವೆ ಜನಾಂಗವೆಂಬ ಹೊಳೆಯನ್ನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕಗೀತವನ್ನೆತ್ತಿ ಅವನಿಗೆ ಹೀಗೆ ನುಡಿ - ನೀನು ಜನಾಂಗಗಳಲ್ಲಿ ಮೃಗರಾಜನೆನಿಸಿಕೊಂಡಿದ್ದಿ; ಇಗೋ ಮಹಾನದಿಯಲ್ಲಿನ ಪೇರ್ಮೊಸಳೆಯಾಗಿಬಿಟ್ಟಿ; ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: “ ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:2
27 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


“ನರಪುತ್ರನೇ, ಟೈರ್‍ನಗರ ಕುರಿತ ಶೋಕಗೀತೆಯೊಂದನ್ನು ಹಾಡಿ, ಹೀಗೆಂದು ಹೇಳು:


ಶೆಬದವರು, ದೆದಾನಿನವರು, ತಾರ್ಷೀಷಿನ ವರ್ತಕರು ಹಾಗು ಅದರ ಸಿಂಹಪ್ರಾಯರೆಲ್ಲರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ದನ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯೋ?’ ಎಂದು ಕೇಳುವರು.


(ಟಗರು ಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಮಿಕ್ಕ ಮೇವನ್ನು ತುಳಿದು, ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು ಮಿಕ್ಕದ್ದನ್ನು ಕಾಲಿನಿಂದ ಕಲಕಿ ಬದಿಮಾಡಿದ್ದು ಸಣ್ಣ ಕೆಲಸವೋ?


ಪ್ರಲಾಪಿಸುವವರು ಈ ಶೋಕಗೀತವನ್ನು ಹಾಡಲಿ; ಜನಾಂಗಗಳ ಯುವತಿಯರು ಹೀಗೆ ಗೋಳಿಡಲಿ; ಈಜಿಪ್ಟಿಗಾಗಿಯೂ ಅಲ್ಲಿನ ಬಹುಪ್ರಜೆಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ; ಇದು ಸರ್ವೇಶ್ವರನಾದ ದೇವರ ನುಡಿ.”


“ನರಪುತ್ರನೇ, ನೀನು ಟೈರಿನ ಅರಸನನ್ನು ಕುರಿತು ಶೋಕಗೀತೆಯೊಂದನ್ನು ಹಾಡಿ ಅವನಿಗೆ ಹೀಗೆ ನುಡಿ: ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: - “ನೀನು ಸರ್ವಸುಲಕ್ಷಣ ಶಿರೋಮಣಿ ಪರಿಪೂರ್ಣ ಸುಂದರ, ಪೂರ್ಣಜ್ಞಾನಿ!


ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.


“ನರಪುತ್ರನೇ, ನೀನು ಈಜಿಪ್ಟಿನ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ ಅವರನ್ನೂ ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.


ರೋಧಿಸುವರು, ಪ್ರಲಾಪಿಸುವರು, ಹಾಡುವರು ಶೋಕಗೀತೆಯನ್ನು; ಕಡಲ ನಡುವೆ ಬಿಕೋ ಎನ್ನುವ ಟೈರನ್ನು ಏತಕೆ ಹೋಲಿಸೋಣ? ಎಂದು.


ಈಜಿಪ್ಟ್ ನದಿ ಉಬ್ಬಿದೆ, ನೈಲ್ ನದಿಯಂತೆ ಈಜಿಪ್ಟೆಂಬ ಪ್ರವಾಹವೇ ತುಂಬಿ ತುಳುಕುತ್ತಿದೆ ನೈಲಿನ ಶಾಖೆಗಳಂತೆ, ‘ನಾನು ಉಬ್ಬಿಕೊಂಡು ಲೋಕದೊಳಗೆಲ್ಲಾ ಹಬ್ಬುವೆನು ನಗರಗಳನ್ನೂ ಅವುಗಳ ನಿವಾಸಿಗಳನ್ನೂ ನಾಶಮಾಡುವೆನು’ ಎಂದುಕೊಳ್ಳುತ್ತಿರುವುದು.


ಜನರು : “ಅವರು ತ್ವರೆಯಾಗಿ ಬಂದು ನಮಗೋಸ್ಕರ ಗೋಳೆತ್ತಲಿ ನಮ್ಮ ಕಣ್ಣುಗಳಿಂದ ನೀರು ಧಾರಾಕಾರವಾಗಿ ಸುರಿವಂತೆ ಮಾಡಲಿ ಕಣ್ಣಿನ ರೆಪ್ಪೆಗಳಿಂದ ನೀರು ಉಕ್ಕಿ ಹರಿವಂತೆ ಮಾಡಲಿ.”


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ದಲಿತರನ್ನಾಳುವ ದುರುಳರಾಜ ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!


ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ ಕಾಲು ಮಡಿಚಿ ಹೊಂಚು ಕೂತ ಕೇಸರಿಯಂತೆ ಈ ಸಿಂಹಿಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ?


“ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ.


ನಾನೇನು ಕಡಲೋ? ಕಡಲಿನ ಘಟಸರ್ಪವೋ? ನೀವು ನನ್ನ ಮೇಲೆ ಕಾವಲಿಡುವುದು ಸರಿಯೋ?


ದುಷ್ಟರಿಗೆ ಬಿಟ್ಟುಕೊಡುವ ನೀತಿವಂತ ಕೆಸರಿನ ಬುಗ್ಗೆಗೆ, ಕೊಳಕು ಚಿಲುಮೆಗೆ ಸಮಾನ.


ಈ ಪ್ರವಾಹ ಯಾವುದು? ನೈಲ್ ನದಿಯಂತೆ ಉಬ್ಬಿರುವುದಲ್ಲಾ? ನೈಲಿನ ಶಾಖೆಗಳ ಹಾಗೆ ತುಂಬಿ ತುಳುಕುತ್ತಿದೆಯಲ್ಲಾ?


“ಇವರು ನಿನ್ನ ಕುರಿತು, ‘ನಾವಿಕರ ನಿವಾಸವೇ, ಹೆಸರುವಾಸಿಯ ನಗರಿಯೇ, ಸಮುದ್ರದಿಂದ ಬಲಗೊಂಡ ಪಟ್ಟಣವೇ, ನೀನು ತೀರಾ ಹಾಳಾಗಿರುವೆ. ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ತೀರಾ ಹಾಳಾದರು.


ಆ ರಾಜ್ಯ ಸಮಸ್ತ ರಾಜ್ಯಗಳಲ್ಲಿ ಕನಿಷ್ಟವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಆ ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣಗತಿಗೆ ತರುವೆನು.


ಅಂಟಿಕೊಂಡಿದೆ ಅದರ ಮಾಂಸದ ಮಡಿಕೆಗಳು ಗಟ್ಟಿಯಾಗಿ ಅದರ ಮಾಂಸಖಂಡ ನಿಬಿಡವಾಗಿ.


ಯಾವುದಕ್ಕೂ ಹೆದರಿ ಓರೆಯಾಗದ ಮೃಗರಾಜನಾದ ಸಿಂಹ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು