Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:23 - ಕನ್ನಡ ಸತ್ಯವೇದವು C.L. Bible (BSI)

23 ಅವರ ಗೋರಿಗಳು ಅಧೋಲೋಕದ ಅಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಅವರು ಅಸ್ಸೀರಿಯದ ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಭೀಕರವಾಗಿದ್ದ ಇವರೆಲ್ಲರೂ ಸಂಹೃತರು, ಖಡ್ಗಹತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರ ಗೋರಿಗಳು ಅಧೋಲೋಕದ ಅಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಸಂಹೃತರಾದವರು, ಖಡ್ಗದಿಂದ ಹತರಾದವರು ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಹತರಾದವರು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರ ಗೋರಿಗಳು ಅಧೋಲೋಕದ ಅಗಾಧಸ್ಥಳಗಳಲ್ಲಿ ಹರಡಿಕೊಂಡಿವೆ; ಅಶ್ಶೂರದವರು ಅಶ್ಶೂರದ ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಭೀಕರರಾಗಿದ್ದ ಇವರೆಲ್ಲರೂ ಸಂಹೃತರು, ಖಡ್ಗಹತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರ ಸಮಾಧಿಗಳು ಕುಳಿಯ ಕಡೆಗಳಲ್ಲಿ ಇಡಲಾಗಿವೆ. ಅವಳ ಸೇನೆಯು ಸಮಾಧಿಯ ಸುತ್ತಲೂ ಇವೆ. ಜೀವಿತರ ದೇಶದಲ್ಲಿ ಭಯವನ್ನು ಹರಡಿದವರೆಲ್ಲರೂ ಖಡ್ಗದಿಂದ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:23
14 ತಿಳಿವುಗಳ ಹೋಲಿಕೆ  

ಆಗ ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ, ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ನಿವಾಸಿಯಾಗುವಂತೆ, ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲೇ ಸೇರಿಸುವೆನು.


“ಇವರು ನಿನ್ನ ಕುರಿತು, ‘ನಾವಿಕರ ನಿವಾಸವೇ, ಹೆಸರುವಾಸಿಯ ನಗರಿಯೇ, ಸಮುದ್ರದಿಂದ ಬಲಗೊಂಡ ಪಟ್ಟಣವೇ, ನೀನು ತೀರಾ ಹಾಳಾಗಿರುವೆ. ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ತೀರಾ ಹಾಳಾದರು.


ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II


“ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ ಖಡ್ಗಹತರ ನಡುವೆ ಸೇರಿಹೋಗುವರು,” ಎಂಬುದು ಸರ್ವೇಶ್ವರನಾದ ದೇವರ ನುಡಿ.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.


ಜೀವಲೋಕದಲ್ಲಿ ಇನ್ನು ದೇವನನ್ನು ಕಾಣೆನೆಂದುಕೊಂಡೆ ಭೂಲೋಕನಿವಾಸಿಗಳಲ್ಲಿ ಒಬ್ಬನನ್ನೂ ನೋಡಲಾರೆನೆಂದುಕೊಂಡೆ.


ಪ್ರಭುವೇ, ನನಗಾಶ್ರಯ ನೀನೇ I ನನ್ನ ಬಾಳಿನ ಸೊತ್ತು ನೀನೇ I ಕೂಗಿ ನಿನಗೆ ಮೊರೆಯಿಡುತ್ತೇನೆ II


ಎಂದೇ ನಡೆವೆನು ನಾನು ಪ್ರಭುವಿನ ಕಣ್ಮುಂದೆ I ಅಂತೆಯೇ ಬಾಳುವೆ ಜೀವಲೋಕದೊಳಿದ್ದೇ II


ಸುಜ್ಞಾನದ ಕ್ರಯ ಯಾರಿಗೂ ಗೊತ್ತಿಲ್ಲ ಜೀವಿತರಲ್ಲಿ ಅದನ್ನು ಕಂಡವರಿಲ್ಲ.


ಅಸ್ಸೀರಿಯವೇ, ಸರ್ವೇಶ್ವರನಾದ ನಾನು ನಿನ್ನ ಬಗ್ಗೆ ಹೊರಡಿಸಿದ ಆಜ್ಞೆ ಏನೆಂದರೆ: ಹೆಸರೆತ್ತಲು ನಿನಗೆ ಸಂತಾನವೇ ಇಲ್ಲದಂತಾಗುವುದು. ನಿನ್ನ ದೇವರುಗಳ ಗುಡಿಗಳಲ್ಲಿರುವ ಕೆತ್ತನೆಯ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಒಡೆದುಹಾಕುವೆನು. ನಿನಗೆ ಸಮಾಧಿಯೊಂದನ್ನು ಸಿದ್ಧಗೊಳಿಸುವೆನು; ಏಕೆಂದರೆ ನೀನು ಕೆಡುಕ.”


ನಗರಗಳನು ಕೆಡವಿಸಿದವನು, ನಾಡನು ಕಾಡಾಗಿಸಿದವನು, ಖೈದಿಗಳನು ಬಂಧನದಿಂದ ಬಿಡಿಸಿದವನು ಈತನೇ ಅಲ್ಲವೆ?’ ಎಂದಾಡಿಕೊಳ್ವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು