Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:27 - ಕನ್ನಡ ಸತ್ಯವೇದವು C.L. Bible (BSI)

27 ಪೂರ್ವದಲ್ಲಿ ಯಾವ ಸುನ್ನತಿಹೀನ ಶೂರರು, ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು, ಹತರಾಗಿ ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಅಸ್ಥಿಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದರೋ ಅವರ ನಡುವೆ ಮೆಷೆಕಿನವರೂ, ತೂಬಲಿನವರೂ ನೆಲಸದೆಹೋಗುವರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಸುನ್ನತಿಯಿಲ್ಲದವರಲ್ಲಿ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ, ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಎಲಬುಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 [ಪೂರ್ವದಲ್ಲಿ] ಯಾವ ಸುನ್ನತಿಹೀನ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ ಆಯುಧಸಹಿತ ಪಾತಾಳಕ್ಕೆ ಇಳಿದು ಕತ್ತಿಗಳನ್ನು ತಲೆಗಿಂಬುಮಾಡಿಕೊಂಡು ತಮ್ಮ ಅಸ್ಥಿಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈಗ ಅವರು ಬಹಳ ಕಾಲದ ಹಿಂದೆ ಸತ್ತ ವೀರರೊಂದಿಗೆ ಬಿದ್ದುಕೊಂಡಿದ್ದಾರೆ. ಅವರು ತಮ್ಮ ಆಯುಧಗಳೊಂದಿಗೆ ಹೂಣಿಡಲ್ಪಟ್ಟರು. ಅವರ ತಲೆಯ ಕೆಳಗೆ ಅವರ ಕತ್ತಿಯು ಇಡಲ್ಪಟ್ಟಿತ್ತು. ಆದರೆ ಅವರ ಪಾಪವು ಅವರ ಎಲುಬುಗಳಲ್ಲಿವೆ. ಯಾಕೆಂದರೆ ಅವರು ಜೀವಿಸಿದ್ದಾಗ ಜನರನ್ನು ಭಯಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತಹ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಖಡ್ಗಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ. ಅವರ ಗುರಾಣಿಗಳು ಅವರ ಮೂಳೆಗಳ ಮೇಲೆ ಇಡಲಾದವು. ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರರಾಗಿದ್ದರೂ ಅವರ ಅಕ್ರಮಗಳು ಅವರ ಎಲುಬುಗಳ ಮೇಲೆ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:27
16 ತಿಳಿವುಗಳ ಹೋಲಿಕೆ  

ಪಾತಾಳದಲ್ಲಿನ ಬಲಿಷ್ಠಶೂರರು ಅದನ್ನೂ ಅದರ ಸಹಾಯಕರನ್ನೂ ನೋಡಿ, “ಓಹೋ, ಇವರು ಸುನ್ನತಿಹೀನರು, ಖಡ್ಗಹತರು, ಇಳಿದುಬಂದು ಒರಗಿಬಿದ್ದರು’ ಎಂದುಕೊಳ್ಳುವರು.


ಶಪಿಸುವುದೆಂದರೆ ಅವನಿಗೆ ಉಡಿಗೆತೊಡಿಗೆಯಂತೆ I ಇಳಿಯಲಿ ಅದೀಗ ಅವನ ದೇಹಕೆ ನೀರಿನಂತೆ I ಸೇರಲಿ ಅದೀಗ ಅವನ ಕೀಲಿಗೆ ಎಣ್ಣೆಯಂತೆ II


ಯೌವನ ಅವನ ದೇಹದಲ್ಲಿ ತುಂಬಿತ್ತು ಅದು ಕೂಡ ಅವನ ಸಮೇತ ಧೂಳಿನಲಿ ಮಲಗುವುದು.


ನಾವು ಬಳಸುವ ಆಯುಧಗಳು ಮಾನವ ನಿರ್ಮಿತವಾದುವಲ್ಲ, ದೇವರ ಶಕ್ತಿಯಿಂದ ಕೂಡಿದುವು; ಕೋಟೆಕೊತ್ತಲಗಳನ್ನು ಕೆಡವಬಲ್ಲವು. ಅವುಗಳಿಂದ ನಾವು ಎಲ್ಲ ಕುತರ್ಕಗಳನ್ನು ನಿರ್ಮೂಲಮಾಡಬಲ್ಲೆವು.


ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು.


ಪಾಪಮಾಡುವವನೇ ಸಾಯುವನು. ಮಗನು ತಂದೆಯ ದೋಷಫಲವನ್ನು ಅನುಭವಿಸನು; ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ಕಾಡುಕೋಣದ ಕೊಂಬಿನ ಬಲವನು ನನಗಿತ್ತಿರುವೆ I ಚೈತನ್ಯದ ತೈಲದಿಂದ ನನ್ನನು ಅಭ್ಯಂಜಿಸಿರುವೆ II


ದುರುಳರು ಚಿಗುರಬಹುದು ಹುಲ್ಲಿನಂತೆ I ಕೆಡುಕರು ಅರಳಬಹುದು ಹೂವಿನಂತೆ I ಅವರ ಅಳಿವಂತೂ ಕಟ್ಟಿಟ್ಟ ಬುತ್ತಿಯಂತೆ II


ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II


“ಹೀಗೆ ಈಜಿಪ್ಟರು ಸುನ್ನತಿಹೀನರ ಮಧ್ಯೆ ನಾಶವಾಗಿ ಖಡ್ಗಹತರ ನಡುವೆ ಸೇರಿಹೋಗುವರು.


ಸತ್ತವರು ದಿಟ್ಟಿಸಿ ನಿನ್ನನು: ‘ಭುವಿಯನು ನಡುಗಿಸಿದವನು, ರಾಜ್ಯಗಳನು ಕದಲಿಸಿದವನು,


“ಇವರು ನಿನ್ನ ಕುರಿತು, ‘ನಾವಿಕರ ನಿವಾಸವೇ, ಹೆಸರುವಾಸಿಯ ನಗರಿಯೇ, ಸಮುದ್ರದಿಂದ ಬಲಗೊಂಡ ಪಟ್ಟಣವೇ, ನೀನು ತೀರಾ ಹಾಳಾಗಿರುವೆ. ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ತೀರಾ ಹಾಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು