Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:32 - ಕನ್ನಡ ಸತ್ಯವೇದವು C.L. Bible (BSI)

32 “ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ ಖಡ್ಗಹತರ ನಡುವೆ ಸೇರಿಹೋಗುವರು,” ಎಂಬುದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಮತ್ತು ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗದಿಂದ ಹತರಾದವರ ನಡುವೆ ಮಲಗುವರು” ಎಂಬುದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗಹತರ ನಡುವೆ, ಒರಗಿಹೋಗುವರು ಎಂಬದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಫರೋಹನು ತನ್ನ ಕಾಲದಲ್ಲಿ ಜನರನ್ನು ಭಯಗೊಳಿಸಿದ್ದನು. ಈಗಲಾದರೋ, ಫರೋಹನೂ ಅವನ ಸೈನಿಕರೂ ಪರದೇಶದವರೊಂದಿಗೆ ಮತ್ತು ಯುದ್ಧದಲ್ಲಿ ಹತರಾದವರೊಂದಿಗೆ ಬಿದ್ದುಕೊಳ್ಳುವರು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಏಕೆಂದರೆ ನಾನು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದೇ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಖಡ್ಗದಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ನಡುವೆ ಸೇರಿಹೋಗುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:32
13 ತಿಳಿವುಗಳ ಹೋಲಿಕೆ  

ಪೂರ್ವದಲ್ಲಿ ಯಾವ ಸುನ್ನತಿಹೀನ ಶೂರರು, ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು, ಹತರಾಗಿ ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಅಸ್ಥಿಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದರೋ ಅವರ ನಡುವೆ ಮೆಷೆಕಿನವರೂ, ತೂಬಲಿನವರೂ ನೆಲಸದೆಹೋಗುವರೇ?


ಜೀವಸ್ವರೂಪರಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಅದೆಷ್ಟು ಭಯಂಕರ!


ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗಿದೆ ಭಯ ಆತನ ಪ್ರಭಾವದ ನಿಮಿತ್ತ ಇಂಥ ಕೃತ್ಯ ನನಗೆ ದುಸ್ಸಾಧ್ಯ.


ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.


“ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನಹೊಂದುವನು; ಹೌದು, ಫರೋಹನೂ ಖಡ್ಗಹತರಾದ ಅವನ ಸಕಲ ಸೈನಿಕರೂ ಸಮಾಧಾನಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.


ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:


ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:


ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು -


ಹನ್ನೊಂದನೆಯ ವರ್ಷದ ಮೂರನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು