Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:8 - ಕನ್ನಡ ಸತ್ಯವೇದವು C.L. Bible (BSI)

8 ನಿನ್ನ ಮೇಲೆ ಗಗನದಲಿ ಮಿನುಗುವ ಸಕಲ ಜ್ಯೋತಿಗಳನು ಮುಸುಕು ಮಾಡುವೆನು, ನಿನ್ನ ನಾಡಿನೊಳು ಕತ್ತಲನೊಡ್ಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ಮೇಲೆ ಆಕಾಶದಲ್ಲಿ ಮಿನುಗುವ ಸಕಲ ಜ್ಯೋತಿಗಳನ್ನೂ ನಾನು ಮಸುಕುಮಾಡಿ, ನಿನ್ನ ದೇಶವನ್ನು ಕತ್ತಲು ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ಮೇಲೆ ಆಕಾಶದಲ್ಲಿ ವಿುನುಗುವ ಸಕಲಜ್ಯೋತಿಗಳನ್ನೂ ನಾನು ಮಸಕುಮಾಡಿ ನಿನ್ನ ದೇಶದಲ್ಲಿ ಕತ್ತಲನ್ನೊಡ್ಡುವೆನು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿನ್ನ ಮೇಲೆ ಆಕಾಶದಲ್ಲಿ ಹೊಳೆಯುವ ಜ್ಯೋತಿಗಳನ್ನು ಮಂಕುಗೊಳಿಸುವೆನು; ನಿನ್ನ ದೇಶದಲ್ಲಿ ಕತ್ತಲನ್ನು ಬರಮಾಡುವೆನು” ನನ್ನ ಒಡೆಯನಾದ ಯೆಹೋವನು ಇವುಗಳನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಕಾಶದಲ್ಲಿ ಪ್ರಕಾಶಿಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು. ನಾನು ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:8
9 ತಿಳಿವುಗಳ ಹೋಲಿಕೆ  

ಅದಾದನಂತರ ದೇವರು,“ಹಗಲು ಇರುಳುಗಳನ್ನು ಬೇರೆಬೇರೆ ಮಾಡಲು ಋತುಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸಲು, ಹಾಗು


ಹೆತ್ತವರನ್ನು ಶಪಿಸುವವನ ದೀಪ ಕಾರಿರುಳಲ್ಲೆ ಆರಿಹೋಗುವುದು ಖಚಿತ.


ಆತ ಆಜ್ಞೆ ಮಾಡಿದ್ದೇ ಆದರೆ ಸೂರ್ಯನು ಉದಯಿಸನು ಮುದ್ರೆ ಹಾಕಿದ್ದೇ ಆದರೆ ನಕ್ಷತ್ರವೂ ಮಿನುಗದು.


ಆ ಕಷ್ಟಕರವಾದ ದಿನಗಳಲ್ಲಿ ಸೂರ್ಯಚಂದ್ರನಕ್ಷತ್ರಗಳೂ ನಿನಗೆ ಮೊಬ್ಬಾಗುವುವು. ಮಳೆಯಾದ ಮೇಲೂ ಮೋಡಗಳು ಮತ್ತೆ ಬರುವುವು;


ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.


ಅವುಗಳ ಮುಂದೆ ಭೂಮಂಡಲ ಕಂಪಿಸುತ್ತದೆ, ಆಕಾಶಮಂಡಲ ನಡುಗುತ್ತದೆ. ಸೂರ್ಯಚಂದ್ರಗಳು ಮಂಕಾಗುತ್ತವೆ, ನಕ್ಷತ್ರಗಳು ಕಾಂತಿಗುಂದುತ್ತವೆ.


ಆ ದಿನ ಬಂದಾಗ ಚಳಿಯಾಗಲೀ ಮಂಜಾಗಲೀ ಇರದು. ಕತ್ತಲು ಕವಿಯದು.


ಮೋಶೆ ಆಕಾಶದತ್ತ ಕೈಚಾಚಿದಾಗ ಈಜಿಪ್ಟ್ ದೇಶದಲ್ಲೆಲ್ಲಾ ಮೂರು ದಿವಸ ಕಾರ್ಗತ್ತಲು ಮುಚ್ಚಿಕೊಂಡಿತು.


ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು