Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:12 - ಕನ್ನಡ ಸತ್ಯವೇದವು C.L. Bible (BSI)

12 “ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯ ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪ ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯ ಅವನನ್ನು ಉಳಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, “ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನರಪುತ್ರನೇ, ಜನರಿಗೆ ಹೀಗೆ ಹೇಳು - ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯವು ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪವು ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯವು ಅವನನ್ನು ಉಳಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ‘ಒಬ್ಬನು ಒಳ್ಳೆಯವನಾಗಿದ್ದುಕೊಂಡು ನಂತರ ದುಷ್ಟತನವನ್ನು ನಡಿಸಿದರೆ ಅವನ ಸತ್ಕಾರ್ಯಗಳು ಅವನನ್ನು ರಕ್ಷಿಸಲಾರವು. ಒಬ್ಬನು ದುಷ್ಕೃತ್ಯಗಳನ್ನು ಮಾಡಿ ತನ್ನ ದುಷ್ಟತ್ವದಿಂದ ತಿರುಗಿದರೆ ಅವನು ನಾಶವಾಗುವದಿಲ್ಲ. ಆದ್ದರಿಂದ ಹಿಂದೆ ಮಾಡಿದ್ದ ಪುಣ್ಯಕಾರ್ಯಗಳು ಒಬ್ಬ ಪಾಪಿಯನ್ನು ರಕ್ಷಿಸಲಾರದೆಂಬುದನ್ನು ಜ್ಞಾಪಕದಲ್ಲಿಟ್ಟುಕೊ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಆದ್ದರಿಂದ, ನರಪುತ್ರನೇ, ನೀನು ನಿನ್ನ ಜನರ ಮಕ್ಕಳಿಗೆ ಹೇಳು: ‘ಒಬ್ಬ ನೀತಿವಂತನು ಅವಿಧೇಯನಾದರೆ, ಆ ವ್ಯಕ್ತಿಯ ಹಿಂದಿನ ನೀತಿಯು ಯಾವುದಕ್ಕೂ ಲೆಕ್ಕವಿಲ್ಲ. ಹಾಗೆಯೇ ದುಷ್ಟನು ಪಶ್ಚಾತ್ತಾಪಪಟ್ಟರೆ, ಆ ವ್ಯಕ್ತಿಯ ಹಿಂದಿನ ದುಷ್ಟತನವು ಖಂಡನೆಯನ್ನು ತರುವುದಿಲ್ಲ. ಪಾಪಮಾಡುವ ನೀತಿವಂತನು ಹಿಂದೆ ನೀತಿವಂತರಾಗಿದ್ದರೂ ಬದುಕಲು ಬಿಡುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:12
14 ತಿಳಿವುಗಳ ಹೋಲಿಕೆ  

ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನೇ ತಗ್ಗಿಸಿಕೊಂಡು, ನನ್ನ‍ನ್ನು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ನಾಡಿಗೆ ಆರೋಗ್ಯಭಾಗ್ಯವನ್ನು ದಯಪಾಲಿಸುವೆನು.


ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


“ನರಪುತ್ರನೇ, ಜನರನ್ನು ಸಂಭೋದಿಸಿ ಅವರಿಗೆ ಹೀಗೆ ನುಡಿ - “ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಆರಿಸಿ ನೇಮಿಸಿಕೊಂಡ ಕಾವಲುಗಾರನು


“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲವಿಧಿಗಳನ್ನು ಕೈಗೊಂಡು, ನ್ಯಾಯನೀತಿಗಳನ್ನು ನಡೆಸಿದರೆ ಸಾಯನು; ಖಂಡಿತ ಜೀವಿಸುವನು.


ನಾನು ದುಷ್ಟನಿಗೆ, “ನೀನು ಖಂಡಿತವಾಗಿ ಸಾಯುವೆ,” ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆ ಹಾಗು ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆ ಇದ್ದರೆ, ಆ ದುಷ್ಟನು ತನ್ನ ಅಪರಾಧಕ್ಕಾಗಿ ಸಾಯಬೇಕಾಗುವುದು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.


ಆದರೆ ನೀವು ಸರ್ವೇಶ್ವರನ ಕ್ರಮವು ಸರಿಯಿಲ್ಲವೆಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುನೀಡುವೆನು.”


ದಂಡನೆಗೆ ನಿರ್ಣಯಿಸಲಾದ ಆ ಜನಾಂಗದವರು ತಮ್ಮ ಕೆಟ್ಟತನವನ್ನು ಬಿಟ್ಟು ಹಿಂತಿರುಗಿದ್ದೇ ಆದರೆ ನಾನು ಬರಮಾಡಬೇಕೆಂದಿದ್ದ ಆ ವಿಪತ್ತನ್ನು ನಾನು ಮನಮರುಗಿ ಬರಮಾಡದಿರುವೆನು.


ಅದು ನನ್ನ ಮಾತನ್ನು ಕೇಳದೆ ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ್ದೇ ಆದರೆ ನಾನು ಮನಸ್ಸನ್ನು ಬದಲಾಯಿಸುವೆನು. ಅದಕ್ಕೆ ಮಾಡಬೇಕೆಂದಿದ್ದ ಒಳಿತನ್ನು ಮಾಡದಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು