Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:13 - ಕನ್ನಡ ಸತ್ಯವೇದವು C.L. Bible (BSI)

13 ನಾನು ಶಿಷ್ಟನಿಗೆ, ನೀನು ಬಾಳೇ ಬಾಳುವೆ ಎಂದು ಹೇಳಲು, ಅವನು ತನ್ನ ಪುಣ್ಯದ ಮೇಲೆ ಭರವಸೆಯಿಟ್ಟು ಪಾಪಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರದು; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ನೀತಿವಂತನಿಗೆ, ‘ನೀನು ಖಂಡಿತವಾಗಿ ಬದುಕುವಿ’ ಎಂದು ಹೇಳುವಾಗ, ಅವನು ತನ್ನ ನೀತಿಯ ಮೇಲೆ ಭರವಸವಿಟ್ಟು ಪಾಪ ಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಶಿಷ್ಟನಿಗೆ - ನೀನು ಬಾಳೇ ಬಾಳುವಿ ಎಂದು ಹೇಳಲು ಅವನು ತನ್ನ ಪುಣ್ಯದ ಮೇಲೆ ಭರವಸವಿಟ್ಟು ಪಾಪ ಮಾಡಿದರೆ ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಒಂದುವೇಳೆ ‘ನೀನು ಜೀವಿಸುವಿ’ ಎಂದು ಒಬ್ಬ ಒಳ್ಳೆಯ ಮನುಷ್ಯನಿಗೆ ನಾನು ಹೇಳಬಹುದು. ಅವನು ತಾನು ಮಾಡಿದ ಒಳ್ಳೆಯ ಕಾರ್ಯಗಳ ನಿಮಿತ್ತ ತಾನು ರಕ್ಷಿಸಲ್ಪಟ್ಟಿದ್ದೇನೆ ಎಂದು ನೆನಸಬಹುದು. ಆ ಬಳಿಕ ಅವನು ದುಷ್ಕೃತ್ಯಗಳನ್ನು ಮಾಡಲು, ನಾನು ಅವನ ಪುಣ್ಯಕಾರ್ಯಗಳನ್ನು ನೋಡದೆ ಅವನ ದುಷ್ಕೃತ್ಯಗಳ ನಿಮಿತ್ತ ಅವನನ್ನು ಸಾಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ನೀತಿವಂತನಿಗೆ, ನೀನು ನಿಶ್ಚಯವಾಗಿ ಬದುಕುವೆ ಎಂದು ಹೇಳುವಾಗ, ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಕ್ರಮಗಳಿಂದಲೇ ಅವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:13
11 ತಿಳಿವುಗಳ ಹೋಲಿಕೆ  

ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಸಜ್ಜನರಾದ ನನ್ನ ಭಕ್ತರು ವಿಶ್ವಾಸದಿಂದಲೇ ಬಾಳುವರು ಅವರು ಹಿಂಜರಿದರಾದರೆ ಮೆಚ್ಚೆನು ನಾನವರನು,” ಎನ್ನುತ್ತದೆ ಪವಿತ್ರಗ್ರಂಥ.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿಂದಲೇ ಸಾಯಬೇಕಾಯಿತು.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ, ಆ ಅಧರ್ಮದಿಂದಲೇ ಸಾಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು