Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:14 - ಕನ್ನಡ ಸತ್ಯವೇದವು C.L. Bible (BSI)

14 ನಾನು ದುಷ್ಟನಿಗೆ, ‘ನೀನು ಸತ್ತೇ ಸಾಯುವೆ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನ್ಯಾಯನೀತಿಗಳನ್ನು ನಡೆಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವಿ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ದುಷ್ಟನಿಗೆ - ನೀನು ಸತ್ತೇ ಸಾಯುವಿ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡಿಸುವ ಪಕ್ಷದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಒಂದುವೇಳೆ ನಾನು ಒಬ್ಬ ದುಷ್ಟನಿಗೆ ನೀನು ಸಾಯುವಿ ಎಂದು ಹೇಳಿದರೆ ಅವನು ತನ್ನ ಜೀವಿತವನ್ನು ಬದಲಾಯಿಸಿ, ದುಷ್ಟತ್ವವನ್ನು ನಿಲ್ಲಿಸಿ, ಅವನು ನೀತಿವಂತನಾಗಿ ಬಾಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ’ ಎಂದು ಹೇಳುವಾಗ ಅವನು ಪಾಪದಿಂದ ಬಿಟ್ಟು ತಿರುಗಿಕೊಂಡು ಮತ್ತು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:14
17 ತಿಳಿವುಗಳ ಹೋಲಿಕೆ  

ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.


ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.


ನಾನು ದುಷ್ಟನಿಗೆ - ‘ದುಷ್ಟನೇ, ನೀನು ಸತ್ತೇಸಾಯುವೆ’ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ಮುಯ್ಯಿತೀರಿಸುವೆನು.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.


“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲವಿಧಿಗಳನ್ನು ಕೈಗೊಂಡು, ನ್ಯಾಯನೀತಿಗಳನ್ನು ನಡೆಸಿದರೆ ಸಾಯನು; ಖಂಡಿತ ಜೀವಿಸುವನು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಸ್ರಯೇಲಿನ ಜನರೇ, ನೀವು ಹಿಂದಿರುಗುವಿರಾದರೆ ನನ್ನ ಬಳಿಗೆ ಬನ್ನಿ. ಅಸಹ್ಯವಾದ ನಿಮ್ಮ ಮೂರ್ತಿ ಪೂಜಾವಸ್ತುಗಳನ್ನು ನನ್ನ ಕಣ್ಣೆದುರಿನಿಂದ ತೆಗೆದುಬಿಡಿ. ಆಗ ನೀವು ಅತ್ತಿತ್ತ ತೂರಾಡಲಾರಿರಿ.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ, ಅವುಗಳಿಂದ ಉಳಿಯುವನು.


ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು