Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:18 - ಕನ್ನಡ ಸತ್ಯವೇದವು C.L. Bible (BSI)

18 ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ, ಆ ಅಧರ್ಮದಿಂದಲೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಬ್ಬ ಒಳ್ಳೆಯ ಮನುಷ್ಯನು ತನ್ನ ಶಿಷ್ಟತ್ವವನ್ನು ಬಿಟ್ಟು ಪಾಪದ ಮಾರ್ಗದಲ್ಲಿ ನಡೆದರೆ ಅವನು ಅವನ ಪಾಪಗಳ ನಿಮಿತ್ತ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು, ಅಕ್ರಮವನ್ನು ಮಾಡುವನೋ ಅವನು ಖಂಡಿತವಾಗಿಯೂ ಅದರಲ್ಲಿಯೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:18
9 ತಿಳಿವುಗಳ ಹೋಲಿಕೆ  

ಸಜ್ಜನರಾದ ನನ್ನ ಭಕ್ತರು ವಿಶ್ವಾಸದಿಂದಲೇ ಬಾಳುವರು ಅವರು ಹಿಂಜರಿದರಾದರೆ ಮೆಚ್ಚೆನು ನಾನವರನು,” ಎನ್ನುತ್ತದೆ ಪವಿತ್ರಗ್ರಂಥ.


ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.


ಅದು ನನ್ನ ಮಾತನ್ನು ಕೇಳದೆ ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ್ದೇ ಆದರೆ ನಾನು ಮನಸ್ಸನ್ನು ಬದಲಾಯಿಸುವೆನು. ಅದಕ್ಕೆ ಮಾಡಬೇಕೆಂದಿದ್ದ ಒಳಿತನ್ನು ಮಾಡದಿರುವೆನು.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


“ಆದರೆ ನನ್ನ ಜನರು ಸರ್ವೇಶ್ವರನ ಕ್ರಮ ಸರಿಯಲ್ಲವೆಂದು ಹೇಳುತ್ತಿದ್ದಾರೆ. ಬದಲಿಗೆ ಅವರ ಕ್ರಮವೇ ಸರಿಯಿಲ್ಲ.


ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ, ಅವುಗಳಿಂದ ಉಳಿಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು