Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:20 - ಕನ್ನಡ ಸತ್ಯವೇದವು C.L. Bible (BSI)

20 ಆದರೆ ನೀವು ಸರ್ವೇಶ್ವರನ ಕ್ರಮವು ಸರಿಯಿಲ್ಲವೆಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುನೀಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ನೀವು, ‘ಯೆಹೋವನ ಮಾರ್ಗವು ಸಮವಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ನೀವು ಯೆಹೋವನ ಕ್ರಮವು ಸಮವಲ್ಲವೆಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ನಾನು ನ್ಯಾಯವಂತನಲ್ಲ, ಎಂದು ನೀವು ಹೇಳುತ್ತೀರಿ. ಆದರೆ ನಾನು ಖಂಡಿತವಾಗಿ ಹೇಳುತ್ತೇನೆ, ಇಸ್ರೇಲ್ ಮನೆತನದವರೇ, ಪ್ರತಿಯೊಬ್ಬನೂ ತಾನು ಮಾಡಿದ ಕಾರ್ಯಗಳಿಗಾಗಿ ನ್ಯಾಯ ಹೊಂದುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೂ, ‘ನೀವು ಯೆಹೋವ ದೇವರ ಮಾರ್ಗ ನೀತಿಯುಕ್ತವಲ್ಲ,’ ಅನ್ನುತ್ತೀರಿ. ಇಸ್ರಾಯೇಲಿನ ಮನೆತನದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯತೀರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:20
15 ತಿಳಿವುಗಳ ಹೋಲಿಕೆ  

ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


“ಆದರೆ ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.


“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದುಬರುವರು; ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು, ದುರ್ಜನರು ದಂಡನಾ ತೀರ್ಪಿಗಾಗಿ ಪುನರುತ್ಥಾನ ಆಗುವರು.


“ಆದರೆ ನನ್ನ ಜನರು ಸರ್ವೇಶ್ವರನ ಕ್ರಮ ಸರಿಯಲ್ಲವೆಂದು ಹೇಳುತ್ತಿದ್ದಾರೆ. ಬದಲಿಗೆ ಅವರ ಕ್ರಮವೇ ಸರಿಯಿಲ್ಲ.


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ಮನುಷ್ಯನ ಬಾಳಿನ ಅಳಿವು ತನ್ನ ಮೂರ್ಖತನದಿಂದ; ಆದರೂ ಅವನು ಸಿಡಿದೇಳುವುದು ಸರ್ವೇಶ್ವರನ ವಿರುದ್ಧ.


ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II


ದೇವರು ನರನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನೀಯುತ್ತಾನೆ ಪ್ರತಿಯೊಬ್ಬನು ಅವನವನ ಕರ್ಮಕ್ಕೆ ತಕ್ಕಂತೆ ಅನುಭವಿಸಮಾಡುತ್ತಾನೆ.


“ಇನ್ನು ಸ್ವಲ್ಪಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು, ನನ್ನ ಕೋಪವನ್ನು ತೀರಿಸಿಕೊಳ್ಳುವೆನು; ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.


“ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯ ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪ ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯ ಅವನನ್ನು ಉಳಿಸಲಾರದು.


ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ, ಅವುಗಳಿಂದ ಉಳಿಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು