Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:22 - ಕನ್ನಡ ಸತ್ಯವೇದವು C.L. Bible (BSI)

22 ಅವನು ಬರುವುದಕ್ಕೆ ಹಿಂದಿನ ಸಾಯಂಕಾಲ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆ ಪಲಾಯಿತನು ಬೆಳಿಗ್ಗೆ ಬರುವನೆಂದು ಸರ್ವೇಶ್ವರ ನನ್ನ ಬಾಯನ್ನು ಬಿಚ್ಚಿದರು; ಹೌದು ನನ್ನ ಬಾಯಿ ಬಿಚ್ಚಿತ್ತು, ನನ್ನ ಮೂಕತನ ಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನು ಬರುವದಕ್ಕೆ ಹಿಂದಿನ ಸಾಯಂಕಾಲ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಯೆಹೋವನು ಆ ಪಲಾಯಿತನು ಬೆಳಿಗ್ಗೆ ಬರುವನೆಂದು ನನ್ನ ಬಾಯನ್ನು ಬಿಚ್ಚಿದ್ದನು; ಹೌದು, ನನ್ನ ಬಾಯಿ ಬಿಚ್ಚಿತು, ನನ್ನ ಮೂಕತನವು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವನು ಬರುವ ಹಿಂದಿನ ದಿವಸದ ಸಾಯಂಕಾಲ ನನ್ನ ಒಡೆಯನಾದ ಯೆಹೋವನ ಆತ್ಮನಿಂದ ಪರವಶನಾದೆನು. ದೇವರು ನನ್ನನ್ನು ಮಾತನಾಡದಂತೆ ಮಾಡಿದ್ದನು. ಆ ಸಮಯದಲ್ಲಿ ಆ ಮನುಷ್ಯನು ನನ್ನ ಬಳಿಗೆ ಬಂದನು. ಆಗ ದೇವರು ನನ್ನ ಬಾಯನ್ನು ತೆರೆದು ನಾನು ಮಾತನಾಡುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಅವನು ತಪ್ಪಿಸಿಕೊಂಡು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಯೆಹೋವ ದೇವರ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲಾಗಿತ್ತು. ನನ್ನ ಬಾಯಿ ತೆರೆದಿತ್ತು. ನಾನು ಮೌನವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:22
12 ತಿಳಿವುಗಳ ಹೋಲಿಕೆ  

ಬಾಬಿಲೋನಿಯಾ ದೇಶದ ಕೇಬಾರ್ ನದಿಯ ಹತ್ತಿರ, ಬೂಜಿಯ ಮಗ ಹಾಗೂ ಯಾಜಕನಾದ ಯೆಜೆಕಿಯೇಲ ಎಂಬ ನನಗೆ ಸರ್ವೇಶ್ವರ ಸ್ವಾಮಿಯ ವಾಣಿ ನೇರವಾಗಿ ಕೇಳಿಸಿತು; ಅವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆಗ ಅವರು ತಮ್ಮ ಆತ್ಮದ ಮೂಲಕ ನನ್ನನ್ನು ಒಯ್ದು, ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದರು.


ತಕ್ಷಣವೇ ಅವನಿಗೆ ಬಾಯಿ ಬಂದಿತು; ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು.


ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ ಅಂದರೆ, ಪಟ್ಟಣವು ಹಾಳಾದ ಹದಿನಾಲ್ಕನೆಯ ವರ್ಷದ ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಹೌದು, ಆ ದಿನದಲ್ಲೇ ನಾನು ಸರ್ವೇಶ್ವರಸ್ವಾಮಿಯ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನ್ನನ್ನು ಅಲ್ಲಿಗೆ ಒಯ್ದರು.


ಅದೇ ಸ್ಥಳದಲ್ಲಿ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನಗೆ, “ನೀನೆದ್ದು ಬಯಲುಪ್ರದೇಶಕ್ಕೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತಾಡುವೆನು,” ಎಂದು ಹೇಳಿದರು.


ಕೊರಿಂಥದ ನಿವಾಸಿಗಳೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡ಼ನೆ ಮಾತನಾಡಿದ್ದೇವೆ.


ಅದು ಆರನೆಯ ವರ್ಷದ ಆರನೆಯ ತಿಂಗಳಿನ ಐದನೆಯ ದಿನ. ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕುಳಿತಿದ್ದೆವು. ಸರ್ವೇಶ್ವರನಾದ ದೇವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


“ಆ ದಿನದಲ್ಲಿ ನಾನು ಇಸ್ರಯೇಲ್ ವಂಶಕ್ಕೆ ಕೋಡುಮೂಡಿಸಿ ಆ ವಂಶದವರ ಮಧ್ಯೆ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಖಚಿತವಾಗುವುದು.


ಆಗ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


“ನರಪುತ್ರನೇ, ಅವರಿಗೆ ಬಲಾಧಾರವೂ ನೇತ್ರಾನಂದವೂ ಆದ ಅವರ ಇಷ್ಟು ಸುಂದರ ಆಲಯವನ್ನೂ ಹೃದಯೋಲ್ಲಾಸವಾದ ಅವನ ಗಂಡು ಹೆಣ್ಣುಮಕ್ಕಳನ್ನೂ ನಾನು ನಿರ್ಮೂಲಮಾಡುವ ದಿನದಲ್ಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು