ಯೆಹೆಜ್ಕೇಲನು 33:24 - ಕನ್ನಡ ಸತ್ಯವೇದವು C.L. Bible (BSI)24 “ನರಪುತ್ರನೇ, ಇಸ್ರಯೇಲ್ ನಾಡಿನ ಹಾಳುಪ್ರದೇಶಗಳಲ್ಲಿ ವಾಸಿಸುವರು, ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ನಾಡು ಅವನಿಗೆ ಸೊತ್ತಾಗಿ ಸಿಕ್ಕಿತು; ಅದು ಬಹುಜನರಾದ ನಮಗೆ ಸೊತ್ತಾಗಿ ಸಿಕ್ಕಿದ್ದು ಏನು ದೊಡ್ಡದು! ಎಂದುಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು - ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವಾಸ್ತ್ಯವಾಗಿ ಸಿಕ್ಕಿತಲ್ಲಾ; ಅದು ಬಹುಜನರಾದ ನಮಗೆ ಸ್ವಾಸ್ತ್ಯವಾಗಿ ಸಿಕ್ಕಿದ್ದು ಏನು ದೊಡ್ಡದು ಅಂದುಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ನರಪುತ್ರನೇ, ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳಲ್ಲಿ ಇಸ್ರೇಲ್ ಜನರು ವಾಸಿಸುತ್ತಿದ್ದಾರೆ. ಅವರು ಹೇಳುವುದೇನೆಂದರೆ, ‘ಅಬ್ರಹಾಮನು ಒಬ್ಬನೇ. ಈ ದೇಶವನ್ನೆಲ್ಲಾ ದೇವರು ಅವನಿಗೆ ಕೊಟ್ಟನು. ನಾವು ಈಗ ಬಹಳ ಮಂದಿ ಇದ್ದೇವೆ. ಆದ್ದರಿಂದ ಖಂಡಿತವಾಗಿ ಈ ದೇಶ ನಮಗೇ ಸೇರಿದ್ದಾಗಿದೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು ಹೀಗೆ ಹೇಳುತ್ತಾರೆ, ‘ಅಬ್ರಹಾಮನು ಒಬ್ಬೊಂಟಿಗನಾಗಿದ್ದರೂ ಈ ದೇಶ ಅವನಿಗೆ ಸೊತ್ತಾಗಿ ಸಿಕ್ಕಿತು. ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸೊತ್ತಾಗಿ ಕೊಡಲಾಗಿದೆ,’ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಬಾಬಿಲೋನಿಯದ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿ ಹಾಗು ಬಾಬಿಲೋನಿಗೆ ಸೆರೆಹೋಗದ ನಾಡಿಗರಲ್ಲಿ ಬಡವರಾದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿ ಹರಡಿತು. ಕಾಡುಮೇಡುಗಳಲ್ಲಿದ್ದ ಎಲ್ಲ ಯಹೂದ್ಯ ಸೈನಿಕರೂ ಸೇನಾಪತಿಗಳೂ ಇದನ್ನು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.