Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:29 - ಕನ್ನಡ ಸತ್ಯವೇದವು C.L. Bible (BSI)

29 ಅವರು ನಡೆಸಿದ ಬಹುದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಪಾಳು ಮಾಡಿದಾಗ ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವರು ನಡಿಸಿದ ಬಹುದುರಾಚಾರಗಳ ನಿವಿುತ್ತ ನಾನು ದೇಶವನ್ನು ಹಾಳುಪಾಳುಮಾಡಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅವರು ಅನೇಕ ಭಯಂಕರ ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ಅವರ ರಾಜ್ಯವನ್ನು ಬಂಜರು ಭೂಮಿಯನ್ನಾಗಿ ಮಾಡುವೆನು. ಆಗ ಈ ಜನರು ನಾನು ಯೆಹೋವನೆಂದು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:29
26 ತಿಳಿವುಗಳ ಹೋಲಿಕೆ  

ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸದೆ ಬಿಡೆನು. ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ನಿಮ್ಮ ಲಂಪಟತನದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪದ ಫಲವನ್ನು ನೀವು ಅನುಭವಿಸಿ, ನಾನೇ ಸರ್ವೇಶ್ವರನಾದ ದೇವರು ಎಂದು ತಿಳಿದುಕೊಳ್ಳುವಿರಿ.”


ರಾಜನು ದುಃಖಿಸುವನು, ದಿಗಿಲು ಒಡೆಯನನ್ನು ಮುಸುಕುವುದು, ಜನಸಾಮಾನ್ಯರ ಕೈಗಳು ತತ್ತರಿಸುವುವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾದ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಸರ್ವೇಶ್ವರನಾದ ದೇವರು ನುಡಿದದ್ದು : “ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, ‘ಅಕಟಾ, ಇಸ್ರಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ರಾಹುತರನ್ನು ಸೋಲಿಸಿ ಪ್ರಖ್ಯಾತಿ ಹೊಂದಿದ ನಂತರ ನಾನೇ ಸರ್ವೇಶ್ವರ ಎಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು ಮೋಶೆಗೆ.


ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.


ನಾನು ದೇಶವನ್ನು ಹಾಳುಪಾಳು ಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವುದು; ಇಸ್ರಯೇಲಿನ ಮಲೆನಾಡು ಬೀಡುಬೀಳುವುದು; ಯಾರೂ ಇಲ್ಲಿ ಹಾದುಹೋಗರು.


“ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿನ್ನ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಸರ್ವೇಶ್ವರನ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.


ನೀನು ಮುಂತಿಳಿಸಿದ್ದು ಸಂಭವಿಸುವಾಗ ಅದು ಈಗ ಸಂಭವಿಸಲಿದೆ, ತಮ್ಮ ಮಧ್ಯೆ ಇದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವುದು.”


ನೀನು ಬಹಳ ಅಸಹ್ಯಕೃತ್ಯಗಳಲ್ಲಿ ತೊಡಗಿದ್ದರಿಂದ ನಾನು ಈವರೆಗೂ ಇನ್ನು ಮುಂದಕ್ಕೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


ನಾನವರ ಮೇಲಿಡುವೆನು ಕೋಪ ದೃಷ್ಟಿಯನ್ನು; ಬೆಂಕಿಯಿಂದ ತಪ್ಪಿಸಿಕೊಂಡರೂ ನುಂಗಿಬಿಡುವುದು ಅದು ಅವರನ್ನು. ನಾನವರ ಮೇಲೆ ಕೋಪ ದೃಷ್ಟಿಯನ್ನಿಟ್ಟಾಗ ನಾನೇ ಸರ್ವೇಶ್ವರನೆಂದು ನಿಮಗೆ ಮನದಟ್ಟಾಗುವುದು.


ಅವರು ದ್ರೋಹ ಮಾಡಿದ್ದರಿಂದ ನಾಡು ಕಾಡಾಗುವುದು ನನ್ನಿಂದ.” ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು