Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:31 - ಕನ್ನಡ ಸತ್ಯವೇದವು C.L. Bible (BSI)

31 ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 [ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:31
34 ತಿಳಿವುಗಳ ಹೋಲಿಕೆ  

ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


ಅದು ಆರನೆಯ ವರ್ಷದ ಆರನೆಯ ತಿಂಗಳಿನ ಐದನೆಯ ದಿನ. ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕುಳಿತಿದ್ದೆವು. ಸರ್ವೇಶ್ವರನಾದ ದೇವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


“ಸರ್ವೇಶ್ವರನ ಹೆಸರಿನಲ್ಲಿ ನೀನು ನಮಗೆ ನುಡಿದ ಮಾತನ್ನು ನಾವು ಕೇಳಲೊಲ್ಲೆವು.


ಆದುದರಿಂದಲೇ ಸರ್ವೇಶ್ವರ ನಿಮಗೆ ;ಆಜ್ಞೆಯ ಮೇಲೆ ಅಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ’ ಎಂದು ಹೇಳಿ ಪಾಠಕಲಿಸುವರು. ಆಗ ನೀವು ನಡೆ ನಡೆದೂ ಎಡವಿ ಬೀಳುವಿರಿ, ಗಾಯಗೊಳ್ಳುವಿರಿ. ಉರುಲಿಗೆ ಸಿಕ್ಕಿಬೀಳುವಿರಿ, ಬಂಧನಕ್ಕೊಳಗಾಗುವಿರಿ.


ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು.


ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿ ಮತ್ತು ಅಣ್ಣತಮ್ಮಂದಿರು,” ಎಂದರು.


ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.


ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


ಇದನ್ನು ಕೇಳಿದ್ದೇ ಆ ಯುವಕ ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟೇಹೋದ. ಏಕೆಂದರೆ ಅವನಿಗೆ ಅಪಾರ ಆಸ್ತಿಪಾಸ್ತಿಯಿತ್ತು.


“ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”


ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಬಂದು,


ತಿರುಗಿಸೆನ್ನ ಮನವ ನಿನ್ನ ಕಟ್ಟಳೆಯ ಕಡೆ I ಲಾಭಲೋಭದತ್ತ ಅದು ಸರಿಯದಂತೆ ತಡೆ II


ಅವರನ್ನು ನಾಟಿಮಾಡಿದವರು ನೀವು ಬೇರೂರಿ ಬೆಳೆದು ಹಣ್ಣುಬಿಡುತ್ತಿದ್ದಾರೆ ಅವರು. ನೀವು ಅವರ ಅಧರಕ್ಕೆ ಹತ್ತಿರ, ಹೃದಯಕ್ಕೆ ದೂರ.


“ಇಗೋ, ನೀನು ದೋಚಿಕೊಂಡ ಲಾಭವನ್ನೂ ನೀನು ಸುರಿದ ರಕ್ತವನ್ನೂ ನೋಡಿ ಕೈ ಎತ್ತಿದ್ದೇನೆ.


ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು; ಅರಸರಿಗೆ ಅಪಮಾನವಾಗುವುದನ್ನು ನೋಡಿ ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ.


ನೀವು ಗಮನಿಸುವುದಿಲ್ಲ ಹಲವಿಷಯಗಳನ್ನು ಕಂಡಿದ್ದರೂ ನೀವು ಕೇಳುವುದಿಲ್ಲ ನಿಮ್ಮ ಕಿವಿಗಳು ತೆರೆದಿದ್ದರೂ.


ನಾನು ಸರ್ವೇಶ್ವರನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರ ನನ್ನ ಮುಖಾಂತರ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನು ಕೇಳುತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು