Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:4 - ಕನ್ನಡ ಸತ್ಯವೇದವು C.L. Bible (BSI)

4 ಕೇಳಿಯೂ ಯಾವನಾದರು ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಕಾರಣನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕೊಂಬಿನ ಕೂಗನ್ನು ಕೇಳಿದ ಯಾವನೇ ಆಗಲಿ ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ ತನ್ನ ಮರಣಕ್ಕೆ ತಾನೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜನರು ಅದನ್ನು ಕೇಳಿದರೂ ಅಲಕ್ಷ್ಯ ಮಾಡಿದಾಗ ಶತ್ರುವು ಬಂದು ಅವರನ್ನು ಸೆರೆಹಿಡಿದು ಕೈದಿಗಳನ್ನಾಗಿ ಮಾಡಿ ಕೊಂಡೊಯ್ಯುವನು. ಆಗ ಅವರ ಮರಣಕ್ಕೆ ಅವರೇ ಕಾರಣರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾವನು ಕೊಂಬಿನ ಧ್ವನಿಯನ್ನು ಕೇಳಿ ಎಚ್ಚರವಾಗುವುದಿಲ್ಲವೋ ಅವನನ್ನು ಖಡ್ಗವು ನಾಶಮಾಡಿದರೆ ಅವನ ಸಾವಿಗೆ ಅವನೇ ಹೊಣೆಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:4
16 ತಿಳಿವುಗಳ ಹೋಲಿಕೆ  

ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿ ತೆಗೆದು, ಲಾಭಕ್ಕೆ ಹಣಕೊಟ್ಟು, ಹಿಂಸಾಚಾರಿಯೂ, ರಕ್ತಸುರಿಸುವವನೂ ಆಗಿದ್ದರೆ, ಜೀವಿಸುವನೇ? ಖಂಡಿತ ಜೀವಿಸನು; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.


ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಇವನು ಅದನ್ನು ಬಿಡದೆಹೋದರೆ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.


ಸರ್ವೇಶ್ವರ ಸ್ವಾಮಿ ಕಾವಲುಗಾರರನ್ನು ನೇಮಿಸಿ, “ಕಹಳೆಯ ಕೂಗನ್ನು ಕೇಳಿ” ಎಂದರು. ಅವರು “ಇಲ್ಲ, ಕೇಳುವುದಿಲ್ಲ” ಎಂದು ಉತ್ತರಿಸಿದರು.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಏಕೆಂದರೆ ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದ.


ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ.


ಇಂತಿರಲು ನಾನು ನಿಮಗೆ ಸಾರಿ ಹೇಳುವುದೇನೆಂದರೆ - “ನಿಮ್ಮಲ್ಲಿ ಯಾರಾದರು ನಾಶವಾದರೆ, ಅದಕ್ಕೆ ನಾನು ಹೊಣೆಯಲ್ಲ.


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ, ಅದೇ ದಿವಸ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು,” ಎಂದು ಹೇಳಿದನು.


ದಾವೀದನು, “ಈ ರಕ್ತಾಪರಾಧ ನಿನ್ನ ತಲೆಯ ಮೇಲೆಯೇ ಇರಲಿ; ‘ಸರ್ವೇಶ್ವರನ ಅಭಿಷಿಕ್ತನನ್ನು ಕೊಂದುಹಾಕಿದೆ’ ಎಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿಹೇಳಿತು,” ಎಂದನು.


“ತಂದೆಗಾಗಲಿ ತಾಯಿಗಾಗಲಿ ಶಾಪಹಾಕುವವರಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳಿಗೆ ಶಾಪ ಹಾಕುವುದರಿಂದ ಅವರಿಗೆ ಸಂಭವಿಸುವ ಮರಣಶಿಕ್ಷೆಗೆ ಅವರೇ ಕಾರಣ.


“ಆಮೋನನ ಮಗನೂ ಜುದೇಯದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೇ ವರ್ಷದಿಂದ ಈ ದಿನದವರೆಗೆ, ಅಂದರೆ ಕಳೆದ ಇಪ್ಪತ್ತು ಮೂರು ವರ್ಷಗಳಿಂದ ಸರ್ವೇಶ್ವರ ಸ್ವಾಮಿ ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು