Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:8 - ಕನ್ನಡ ಸತ್ಯವೇದವು C.L. Bible (BSI)

8 ನಾನು ದುಷ್ಟನಿಗೆ - ‘ದುಷ್ಟನೇ, ನೀನು ಸತ್ತೇಸಾಯುವೆ’ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ದುಷ್ಟನಿಗೆ ದುಷ್ಟನೇ, ‘ನೀನು ಖಂಡಿತವಾಗಿ ಸಾಯುವೆ’ ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ದುಷ್ಟನಿಗೆ - ದುಷ್ಟನೇ, ಸತ್ತೇಸಾಯುವಿ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆ ಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ‘ಈ ಕೆಟ್ಟ ಮನುಷ್ಯನು ಸಾಯುವನು’ ಎಂದು ನಾನು ಹೇಳಿದರೆ, ನೀನು ಹೋಗಿ ಆ ಮನುಷ್ಯನನ್ನು ಎಚ್ಚರಿಸಬೇಕು. ಆದರೆ ನೀನು ಅವನನ್ನು ಎಚ್ಚರಿಸದೆ ಹೋದರೆ, ಅವನ ಜೀವಿತವನ್ನು ಬದಲಾಯಿಸಿಕೊಳ್ಳಲು ಹೇಳದೆ ಹೋದರೆ, ಪಾಪಮಾಡಬೇಡ ಎಂದು ಹೇಳದೆ ಹೋದರೆ, ಆ ದುಷ್ಟನು ಸಾಯುವನು. ಯಾಕೆಂದರೆ, ಅವನು ಪಾಪಮಾಡಿದನು. ಆದರೆ ಅವನ ಮರಣಕ್ಕೆ ನಿನ್ನನ್ನು ಕಾರಣನನ್ನಾಗಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯಾವಾಗ ನಾನು ದುಷ್ಟನಿಗೆ, ‘ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ಅವನ ದುರ್ಮಾರ್ಗಗಳಿಂದ ತಪ್ಪಿಸಲು ಅವನನ್ನು ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:8
17 ತಿಳಿವುಗಳ ಹೋಲಿಕೆ  

ಆದರೆ ಕಾವಲುಗಾರನೇ ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ, ಸಜ್ಜನರನ್ನು ಎಚ್ಚರಿಸದೆ ಹೋದರೆ ಖಡ್ಗ ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ, ಕಾವಲುಗಾರನೇ ಹೊಣೆ. ಅವನಿಗೆ ನಾನು ಮುಯ್ಯಿ ತೀರಿಸುವೆನು.


ನಾನು ದುಷ್ಟನಿಗೆ, ‘ನೀನು ಸತ್ತೇ ಸಾಯುವೆ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನ್ಯಾಯನೀತಿಗಳನ್ನು ನಡೆಸಲು


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಪಾಪಮಾಡುವವನೇ ಸಾಯುವನು. ಮಗನು ತಂದೆಯ ದೋಷಫಲವನ್ನು ಅನುಭವಿಸನು; ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ಇವನ ತಂದೆಯಾದರೊ ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದ್ದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ದುಷ್ಟನಿಗೆ ದಂಡನೆ ಕಟ್ಟಿಟ್ಟ ಬುತ್ತಿ; ಶಿಷ್ಟ ಸಂತಾನಕ್ಕೆ ಸಿಗುವುದು ಮುಕ್ತಿ.


ಆಗ ಆ ಸರ್ಪ, “ಆ ಮಾತು ನಿಜವಲ್ಲ, ನೀವು ಸಾಯುವುದು ಸುಳ್ಳು.


ದೇವರಿಗೆ ಹೆದರದ ದುರ್ಜನನಿಗೆ ಒಳ್ಳೆಯದಾಗದೆಂಬುದು ನಿಶ್ಚಯ. ನೆರಳಿನಂತಿರುವ ಅವನ ಬಾಳಿನ ದಿನಗಳು ಹೆಚ್ಚುವುದಿಲ್ಲ.


“ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದರು. ಅವರು ಕೋರಹನ ಜತೆ ಸೇರಿ ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದವರಲ್ಲ. ಅವರು ಸತ್ತದ್ದು ತಮ್ಮ ಸ್ವಂತ ಪಾಪದ ನಿಮಿತ್ತ. ಅವರಿಗೆ ಗಂಡುಮಕ್ಕಳಿರಲಿಲ್ಲ.


ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.


ನಾನು ದುಷ್ಟನಿಗೆ, “ನೀನು ಖಂಡಿತವಾಗಿ ಸಾಯುವೆ,” ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆ ಹಾಗು ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆ ಇದ್ದರೆ, ಆ ದುಷ್ಟನು ತನ್ನ ಅಪರಾಧಕ್ಕಾಗಿ ಸಾಯಬೇಕಾಗುವುದು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು