Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:9 - ಕನ್ನಡ ಸತ್ಯವೇದವು C.L. Bible (BSI)

9 ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಇವನು ಅದನ್ನು ಬಿಡದೆಹೋದರೆ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ನೀನು ದುಷ್ಟನನ್ನು ದುರ್ಮಾಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನೀನು ಅವನನ್ನು ಎಚ್ಚರಿಸಿ, ಅವನ ಜೀವಿತವನ್ನು ಬದಲಾಯಿಸಲು ಹೇಳಿ, ಪಾಪವನ್ನು ಮಾಡಬೇಡ ಎಂದು ಹೇಳಿದರೂ ಅವನು ಕೇಳದೆ ಹೋದರೆ ಪಾಪ ಮಾಡುವದನ್ನು ಬಿಡದೆ ಹೋದರೆ ಅವನು ಪಾಪ ಮಾಡಿದುದರಿಂದ ಸಾಯುವನು. ಆದರೆ ನೀನು ಅವನ ಮರಣಕ್ಕೆ ಕಾರಣನಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ನೀನು ದುಷ್ಟನನ್ನು ಅವನ ದುರ್ಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತಿರುಗಿಕೊಳ್ಳದೆ ಹೋದರೆ ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:9
24 ತಿಳಿವುಗಳ ಹೋಲಿಕೆ  

ನೀನು ಆ ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧಕ್ಕಾಗಿ ಸಾಯುವನು; ನೀನಾದರೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.


ಇಂತಿರಲು ನಾನು ನಿಮಗೆ ಸಾರಿ ಹೇಳುವುದೇನೆಂದರೆ - “ನಿಮ್ಮಲ್ಲಿ ಯಾರಾದರು ನಾಶವಾದರೆ, ಅದಕ್ಕೆ ನಾನು ಹೊಣೆಯಲ್ಲ.


ನೀನು ಆ ಸಜ್ಜನನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”


ಸನ್ಮಾರ್ಗವನ್ನು ತೊರೆದವನಿಗೆ ಬರುವ ಶಿಕ್ಷೆ ಕಠಿಣ ಬುದ್ಧಿವಾದವನ್ನು ಕೇಳಲೊಲ್ಲದವನಿಗೆ ಬರುವುದು ಮರಣ.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಆದುದರಿಂದ ಪ್ರವಾದಿಗಳ ಈ ಮಾತುಗಳು ನಿಮ್ಮಲ್ಲಿ ನಿಜವಾಗದಂತೆ ಎಚ್ಚರಿಕೆಯಾಗಿರಿ:


ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು.


“ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ.


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ.


‘ಅವಹೇಳನ ಮಾಡುವವರೇ, ಗಮನಿಸಿರಿ; ದಿಗ್ಭ್ರಮೆಗೊಂಡು ದಿಕ್ಕುಪಾಲಾಗಿರಿ; ನಿಮ್ಮ ಕಾಲದಲ್ಲೇ ನಾನೊಂದು ಮಹತ್ಕಾರ್ಯವನ್ನು ಮಾಡುತ್ತೇನೆ; ಅದನ್ನು ನೀವು ನಂಬಲಾರಿರಿ, ಇನ್ನೊಬ್ಬರು ವಿವರಿಸಿ ಹೇಳಿದರೂ ನಂಬಲಾರಿರಿ’, “ ಎಂದು ಹೇಳಿದನು.


ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ ಕೊಂಬನ್ನೂದಿ ಸಜ್ಜನರನ್ನು ಎಚ್ಚರಿಸಲಿ; ಕೊಂಬಿನ ಕೂಗನ್ನು


ಕೇಳಿಯೂ ಯಾವನಾದರು ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಕಾರಣನಾಗುತ್ತಾನೆ.


ಆದರೆ ಕಾವಲುಗಾರನೇ ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ, ಸಜ್ಜನರನ್ನು ಎಚ್ಚರಿಸದೆ ಹೋದರೆ ಖಡ್ಗ ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ, ಕಾವಲುಗಾರನೇ ಹೊಣೆ. ಅವನಿಗೆ ನಾನು ಮುಯ್ಯಿ ತೀರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು