Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:10 - ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಹೇಳುವುದೇನೆಂದರೆ, “ನಾನು ಆ ಕುರುಬರಿಗೆ ವಿರುದ್ಧವಾಗಿದ್ದೇನೆ. ಅವರ ಕೈಯಿಂದ ನನ್ನ ಕುರಿಗಳ ಬಗ್ಗೆ ವಿಚಾರಿಸುವೆನು. ನಾನು ಅವರನ್ನು ತೊಲಗಿಸಿ ಬಿಡುವೆನು. ಇನ್ನು ಮುಂದೆ ಅವರು ನನ್ನ ಕುರುಬರಾಗಿರುವುದಿಲ್ಲ. ಇನ್ನು ಅವರಿಗೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ನನ್ನ ಕುರಿಗಳನ್ನು ಅವರ ಬಾಯಿಂದ ತಪ್ಪಿಸುವೆನು. ಆಗ ನನ್ನ ಕುರಿಗಳು ಅವರಿಗೆ ಆಹಾರವಾಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ. ನನ್ನ ಮಂದೆಯನ್ನು ಅವರ ಕೈಯಿಂದ ವಿಚಾರಿಸುವೆನು. ಅವರು ಮಂದೆ ಮೇಯಿಸುವುದನ್ನು ನಿಲ್ಲಿಸಿಬಿಡುತ್ತೇನೆ, ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳರು. ಏಕೆಂದರೆ ನಾನು ನನ್ನ ಮಂದೆಯನ್ನು ಅವರಿಗೆ ಆಹಾರವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:10
26 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆನ್ನುತ್ತಾರೆ: “ಎಂತಲೇ ಕುರಿಗಾಹಿಗಳ ಮೇಲೆ ನನ್ನ ಕೋಪ ಭುಗಿಲೆದ್ದಿದೆ. ಆ ಮುಂದಾಳುಗಳ ಮೇಲೆ ನನ್ನ ದಂಡನೆ ಎರಗಲಿದೆ. ಸೇನಾಧೀಶ್ವರ ಸರ್ವೇಶ್ವರನಾದ ನಾನು ಜುದೇಯ ಕುಲವನ್ನು ನನ್ನ ಮಂದೆಯಂತೆ ಪರಿಪಾಲಿಸುವೆನು. ಅದನ್ನು ವೀರ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವೆನು.


“ನರಪುತ್ರನೇ, ಇಸ್ರಯೇಲೆಂಬ ಮಂದೆಯ ಕುರುಬರಿಗೆ ವಿರುದ್ಧ ಈ ದೈವೋಕ್ತಿಯನ್ನು ಪ್ರವಚನ ರೂಪವಾಗಿ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ ಸ್ವಂತ ಹೊಟ್ಟೆ ಹೊರೆದುಕೊಳ್ಳುವ ಇಸ್ರಯೇಲಿನ ಕುರುಬರಿಗೆ ಧಿಕ್ಕಾರ! ಕುರಿಗಳ ಹೊಟ್ಟೆ ಗಮನಿಸುವುದು ಕುರುಬರ ಧರ್ಮವಲ್ಲವೆ?


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ವ್ಯರ್ಥವಾದುದನ್ನು ನುಡಿದು ಸುಳ್ಳಾದುದನ್ನು ಕಂಡದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ, ಇದು ಸರ್ವೇಶ್ವರನಾದ ದೇವರೆಂಬ ನನ್ನ ನುಡಿ.


ಕಣಿವೆಯಲ್ಲಿನ ನಗರಿಯೇ, ಬಯಲಿನ ಬಂಡೆಯಲ್ಲಿರುವ ಪುರಿಯೇ, ‘ನಮ್ಮ ಮೇಲೆ ಯಾರಿಳಿದು ಬಂದಾರು? ನಮ್ಮ ನಿವಾಸಗಳಿಗೆ ಯಾರು ನುಗ್ಗಿಯಾರು?’ ಎನ್ನುವವರೇ, ಇಗೋ ನಾನೆ ನಿಮಗೆ ವಿರುದ್ಧವಾಗಿದ್ದೇನೆ.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನಗೆ ವಿರುದ್ಧವಾಗಿದ್ದೇನೆ ನಾನು; ಸುಟ್ಟು ಭಸ್ಮಮಾಡುವೆ ನಿನ್ನ ರಥಗಳನು; ಸಂಹರಿಸಿಬಿಡುವೆನು ನಿನ್ನ ಯುವಸಿಂಹಗಳನು; ನಿನಗೆ ಜಗದಲ್ಲೆಲ್ಲ ಬೇಟೆ ಸಿಗದಂತೆ ಮಾಡುವೆನು; ಯಾರೂ ಕೇಳರು ನಿನ್ನ ರಾಯಭಾರಿಗಳ ಮಾತನು.”


ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು; ಕುರುಬರೇ ಇರಲಿಲ್ಲ. ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ; ಅವರು ಸ್ವಂತ ಹೊಟ್ಟೆಪಾಡನ್ನು ನೋಡಿಕೊಂಡರೇ ಹೊರತು, ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.


ನಾನು ದುಷ್ಟನಿಗೆ, “ನೀನು ಖಂಡಿತವಾಗಿ ಸಾಯುವೆ,” ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆ ಹಾಗು ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆ ಇದ್ದರೆ, ಆ ದುಷ್ಟನು ತನ್ನ ಅಪರಾಧಕ್ಕಾಗಿ ಸಾಯಬೇಕಾಗುವುದು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.


ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II


ನೀತಿವಂತರನು ಕಾಯುವನು ಸರ್ವೇಶ್ವರನು ಅವರ ವಿಜ್ಞಾಪನೆಗೆ ಕಿವಿಗೊಡುವನು. ಕೆಡುಕರಿಗಾದರೋ ಆತನು ವಿಮುಖನು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ಎದೋಮೇ ಇಗೋ, ನಿನಗೆ ನಾ ವಿರೋಧಿಯಾಗಿರುವೆ ನಿನ್ನ ನಾಡಿನ ಮೇಲೆ ಕೈಯೆತ್ತಿ ನಾಶಪಡಿಸುವೆ.


ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಸೂರೆಯಾಗದಂತೆ ನಾನು ಅದನ್ನು ರಕ್ಷಿಸಿ ಟಗರುಹೋತಗಳಿಗೂ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.


ಸರ್ವೇಶ್ವರ ಇಂತೆನ್ನುತ್ತಾರೆ - ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಿಬಿಡುವೆನು.


ಆದುದರಿಂದ ಜೆರುಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಸರ್ವೇಶ್ವರನಾದ ನನ್ನ ನುಡಿ.


ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.


ಸೇನಾಧೀಶ್ವರ ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: “ಎಲೈ ಅಹಂಕಾರಿಯೇ, ನಾನು ನಿನಗೆ ವಿರುದ್ಧನು. ನಿನಗೆ ಹೊತ್ತು ಬಂದಿದೆ. ನಿನ್ನನ್ನು ದಂಡಿಸತಕ್ಕ ಕಾಲ ಸಮೀಪಿಸಿದೆ.


ಆ ಬಾಬಿಲೋನಿಯದ ಅರಸನು ಅಲ್ಲೆ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿದನು. ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಜುದೇಯದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.


ಆದಕಾರಣ ನೀವು ಮಿಥ್ಯದರ್ಶನವನ್ನು ಹೊಂದಿ, ಸುಳ್ಳುಭವಿಷ್ಯ ಹೇಳುವ ಕೆಲಸ ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈವಶದಿಂದ ಬಿಡಿಸುವೆನು; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”


ಆದಕಾರಣ ಕುರುಬರೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು