Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:12 - ಕನ್ನಡ ಸತ್ಯವೇದವು C.L. Bible (BSI)

12 ಮಂದೆಯ ಕುರುಬನು ಸುತ್ತಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮಂದೆಯ ಕುರುಬನು ಸುತ್ತುಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಎಲ್ಲಾ ಸ್ಥಳಗಳಿಂದ ಅವುಗಳನ್ನು ಬಿಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತಪ್ಪಿಹೋದ ಕುರಿಗಳಿಗಾಗಿ ಹುಡುಕುವ ಕುರುಬನಂತೆ ನನ್ನ ಕುರಿಗಳನ್ನು ಹುಡುಕಿ ರಕ್ಷಿಸುವೆನು. ಮೋಡ ಕವಿದ ಕಾರ್ಗತ್ತಲೆಯ ದಿನದಲ್ಲಿ ತಪ್ಪಿಸಿಕೊಂಡ ಅವುಗಳನ್ನು ಹುಡುಕಿ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ, ಕಾರ್ಮುಗಿಲಿನ ಕಾರ್ಗತ್ತಲಿನ ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:12
23 ತಿಳಿವುಗಳ ಹೋಲಿಕೆ  

ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.


ಹೌದು, ಸಮೀಪಿಸಿತು ಸರ್ವೇಶ್ವರನ ದಿನ, ಕಾರ್ಮುಗಿಲ ದಿನ ಅದು ರಾಷ್ಟ್ರಗಳಿಗೆ ನ್ಯಾಯತೀರಿಸತಕ್ಕ ಕಾಲ.


ರಾಷ್ಟ್ರಗಳೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ: ದೂರದ ದ್ವೀಪಗಳಲ್ಲೂ ಅದನ್ನು ಸಾರಿರಿ: ಇಸ್ರಯೇಲರನ್ನು ಚದುರಿಸಿದಾತ ಕುರಿಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನೆಂದು ಪ್ರಕಟಿಸಿರಿ.


ಅದು ರೌದ್ರದ ದಿನ, ಕಷ್ಟ - ಸಂಕಟದ ದಿನ, ನಾಶವಿನಾಶದ ದಿನ, ಕತ್ತಲು ಕಾರ್ಗತ್ತಲ ದಿನ, ಕಾರ್ಮುಗಿಲು ಕವಿದ ಕರಾಳ ದಿನ;


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


ನಿನ್ನ ಹಿಂಡುಗಳ ಪರಿಸ್ಥಿತಿಯನ್ನು ತಿಳಿದುಕೊ; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೊ.


ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.


ನನ್ನ ಮಂದೆಯನ್ನು ಯಾವ ಯಾವ ದೇಶಗಳಿಗೆ ಅಟ್ಟಲಾಗಿದೆಯೋ ಆ ಎಲ್ಲ ದೇಶಗಳಿಂದ ಅಳಿದುಳಿದ ಕುರಿಗಳನ್ನು ಒಟ್ಟುಗೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ಮರಳಿ ಬರಮಾಡುವೆನು. ಅವು ದೊಡ್ಡ ಪೀಳಿಗೆಯಾಗಿ ಬೆಳೆಯುವುವು.


ಇಗೋ ನೋಡು, ಅವರನ್ನು ಬರಮಾಡುವೆನು ಉತ್ತರದೇಶದಿಂದ ಅವರನ್ನು ಒಂದುಗೂಡಿಸುವೆನು ದಿಗಂತಗಳಿಂದ. ಅವರೊಡನೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.


ಸರ್ವಶಕ್ತ ಸರ್ವೇಶ್ವರನ ಮಾತುಗಳಿವು: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಹಾಳುಬಿದ್ದಿರುವ ಈ ಪ್ರಾಂತ್ಯ ಹಾಗು ಇಲ್ಲಿನ ಊರುಕೇರಿಗಳು ಮತ್ತೆ ಕುರುಬರು ತಮ್ಮ ಹಿಂಡುಗಳನ್ನು ಇಲ್ಲಿ ತಂಗಿಸಲು ಆಸರೆಯಾಗುವುವು.


ನಿನ್ನ ಬೆಳಕನು ನಾ ನಂದಿಸಿ ಕತ್ತಲಾಗಿಸುವಾಗ, ಮುಚ್ಚುವೆನು ಸೂರ್ಯಚಂದ್ರ ನಕ್ಷತ್ರಗಳನು ಮೋಡಮುಸುಕಿನಿಂದ.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಂತಲೇ ಕುರಿಗಾಹಿಗಳ ಮೇಲೆ ನನ್ನ ಕೋಪ ಭುಗಿಲೆದ್ದಿದೆ. ಆ ಮುಂದಾಳುಗಳ ಮೇಲೆ ನನ್ನ ದಂಡನೆ ಎರಗಲಿದೆ. ಸೇನಾಧೀಶ್ವರ ಸರ್ವೇಶ್ವರನಾದ ನಾನು ಜುದೇಯ ಕುಲವನ್ನು ನನ್ನ ಮಂದೆಯಂತೆ ಪರಿಪಾಲಿಸುವೆನು. ಅದನ್ನು ವೀರ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವೆನು.


ಸ್ವಜನರನು ದೇವ ಸರ್ವೇಶ್ವರ ಕಾಪಾಡುವನು ಮೇಷಪಾಲನಂತೆ ನಾಡಿನೊಳು ಥಳಥಳಿಸುವರವರು ಕಿರೀಟದ ರತ್ನಗಳಂತೆ.


“ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿ ಒಂದನ್ನು ಕಳೆದುಕೊಂಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದುಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು