Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:14 - ಕನ್ನಡ ಸತ್ಯವೇದವು C.L. Bible (BSI)

14 ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವುವು; ಇಸ್ರಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಟಿಯುಳ್ಳ ಮೇವನ್ನು ಮೇಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವವು; ಇಸ್ರಾಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹುಲ್ಲುಗಾವಲಿಗೆ ನಾನು ಅವುಗಳನ್ನು ನಡೆಸುವೆನು. ಇಸ್ರೇಲಿನ ಎತ್ತರವಾದ ಬೆಟ್ಟಗಳಲ್ಲಿ ಅವು ಮೇಯುವವು. ಅಲ್ಲಿ ಒಳ್ಳೆಯ ಸ್ಥಳದಲ್ಲಿ ಅವುಗಳು ಮಲಗಿ ಹುಲ್ಲನ್ನು ಮೇಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಒಳ್ಳೆಯ ಮೇವಿನಲ್ಲಿ ಅವುಗಳನ್ನು ಮೇಯಿಸುವೆನು. ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಮಂದೆಯು ಇರುವುದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:14
21 ತಿಳಿವುಗಳ ಹೋಲಿಕೆ  

ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ.


ಬಳಲಿ ಬೆಂಡಾದವರೆಲ್ಲರನ್ನು ತಣಿಸುವೆನು ಹಾಗೂ ತೃಪ್ತಿಪಡಿಸುವೆನು.”


ಇನ್ನಿರದು ಅವರಿಗೆ ಹಸಿವು ಬಾಯಾರಿಕೆ ತಟ್ಟದವರನು ಬಿಸಿಲಿನ ತಾಪ, ಸೂರ್ಯನ ಕೋಪ.


ತೋಟದ ಮರಗಳು ಹಣ್ಣುಬಿಡುವುವು; ಹೊಲಗಳು ಒಳ್ಳೆಯ ಬೆಳೆಕೊಡುವುವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗಗಳನ್ನು ನಾನು ಮುರಿದುಹಾಕಿ, ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ, ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಜನಾಂಗಗಳಲ್ಲಿ ಚದುರಿಹೋಗಿರುವ ಇಸ್ರಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.


ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”


“ನರಪುತ್ರನೇ, ಇಸ್ರಯೇಲೆಂಬ ಮಂದೆಯ ಕುರುಬರಿಗೆ ವಿರುದ್ಧ ಈ ದೈವೋಕ್ತಿಯನ್ನು ಪ್ರವಚನ ರೂಪವಾಗಿ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ ಸ್ವಂತ ಹೊಟ್ಟೆ ಹೊರೆದುಕೊಳ್ಳುವ ಇಸ್ರಯೇಲಿನ ಕುರುಬರಿಗೆ ಧಿಕ್ಕಾರ! ಕುರಿಗಳ ಹೊಟ್ಟೆ ಗಮನಿಸುವುದು ಕುರುಬರ ಧರ್ಮವಲ್ಲವೆ?


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿ ಆಗುವುದು.


ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುವೆನು.


ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಯೇಲರೇ, ನಿನ್ನಲ್ಲಿ ಸಂಚರಿಸುತ್ತಾ, ನಿನ್ನನ್ನು ಸೊತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರಶೋಕವನ್ನು ಕೊಡದಿರುವೆ.”


ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ದಾಳಿಮಾಡುವನು. ತಂದೆತಾತಂದಿರು ಮಾಡದಂಥ ಕಾರ್ಯಗಳನ್ನು ಮಾಡುವನು. ಸೂರೆ-ಸುಲಿಗೆ-ಕೊಳ್ಳೆಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.


ಆ ನಾಡು ಹೇಗಿದೆ, ಅಲ್ಲಿನ ನಿವಾಸಿಗಳು ಬಲಿಷ್ಠರೋ ಬಲಹೀನರೋ, ಅವರ ಸಂಖ್ಯೆ ದೊಡ್ಡದೋ ಚಿಕ್ಕದೋ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು