Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:15 - ಕನ್ನಡ ಸತ್ಯವೇದವು C.L. Bible (BSI)

15 ನಾನೇ ನನ್ನ ಕುರಿಗಳನ್ನು ಮೇಯಿಸಿ ಹಾಯಾಗಿ ಮಲಗುವಂತೆ ಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನೇ ನನ್ನ ಕುರಿಗಳನ್ನು ಮೇಯಿಸಿ, ಹಾಯಾಗಿ ಮಲಗುವಂತೆ ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನೇ ನನ್ನ ಕುರಿಗಳನ್ನು ಮೇಯಿಸಿ ಹಾಯಾಗಿ ಮಲಗುವಂತೆ ಮಾಡುವೆನು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೌದು, ನಾನು ನನ್ನ ಮಂದೆಯನ್ನು ಮೇಯಿಸಿ ಅವುಗಳನ್ನು ವಿಶ್ರಾಂತಿಯ ಸ್ಥಳಕ್ಕೆ ನಡೆಸುವೆನು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:15
14 ತಿಳಿವುಗಳ ಹೋಲಿಕೆ  

ಅವರೆಲ್ಲರ ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. ಅದಕ್ಕೆ ಪೇತ್ರನು, “ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದನು. ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದರು.


“ನನ್ನ ಹಿಂಡನ್ನು ಕಾಯಲು ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ದಾಸ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ಕೊಡುವೆನು. ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು.


ಇಸ್ರಯೇಲಿನಲ್ಲಿ ಅಳಿದುಳಿದವರು ಅನ್ಯಾಯಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು. ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.”


ಆ ದಿನಗಳಲ್ಲಿ ನನ್ನ ಜನರಿಗೆ ಹಾನಿಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು.


ಕೋಟೆಕೊತ್ತಲಗಳಿಂದ ಕೂಡಿದ ಪಟ್ಟಣ ಪಾಳುಬಿದ್ದಿದೆ; ಕಾಡಿನಂತೆ ನಿರ್ಜನಪ್ರದೇಶವಾಗಿದೆ. ದನಕರುಗಳು ಮೇದು ಮಲಗುವ ಗೋಮಾಳವಾಗಿದೆ.


“ನನ್ನ ಜನರು ದಾರಿತಪ್ಪಿದ ಕುರಿಗಳು. ಕುರಿಗಾಹಿಗಳು ಅವರನ್ನು ದಾರಿ ತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ. ನನ್ನ ಜನರು ತಮ್ಮ ಬೀಡುಗಳನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಿದ್ದಾರೆ.


“ನರಪುತ್ರನೇ, ಇಸ್ರಯೇಲೆಂಬ ಮಂದೆಯ ಕುರುಬರಿಗೆ ವಿರುದ್ಧ ಈ ದೈವೋಕ್ತಿಯನ್ನು ಪ್ರವಚನ ರೂಪವಾಗಿ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ ಸ್ವಂತ ಹೊಟ್ಟೆ ಹೊರೆದುಕೊಳ್ಳುವ ಇಸ್ರಯೇಲಿನ ಕುರುಬರಿಗೆ ಧಿಕ್ಕಾರ! ಕುರಿಗಳ ಹೊಟ್ಟೆ ಗಮನಿಸುವುದು ಕುರುಬರ ಧರ್ಮವಲ್ಲವೆ?


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು