Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:16 - ಕನ್ನಡ ಸತ್ಯವೇದವು C.L. Bible (BSI)

16 “ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಕಳೆದುಹೋದ ಕುರಿಗಳನ್ನು ನಾನು ಹುಡುಕುವೆನು. ಚದರಿಹೋಗಿದ್ದ ಕುರಿಗಳನ್ನು ಹಿಂದಕ್ಕೆ ತರುವೆನು. ಗಾಯಗೊಂಡ ಕುರಿಗಳನ್ನು ಬಟ್ಟೆಯಿಂದ ಸುತ್ತುವೆನು. ಬಲಹೀನ ಕುರಿಗಳನ್ನು ಬಲಶಾಲಿಯಾಗಿ ಮಾಡುವೆನು. ಆದರೆ ನಾನು ಕೊಬ್ಬಿದ, ಶಕ್ತಿಶಾಲಿಯಾದ ಕುರುಬರನ್ನು ನಾಶಮಾಡುವೆನು. ಯೋಗ್ಯವಾದ ಶಿಕ್ಷೆಯನ್ನು ಅವರಿಗೆ ಉಣಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:16
33 ತಿಳಿವುಗಳ ಹೋಲಿಕೆ  

ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.


ಹೌದು, ದುರ್ಬಲವಾದವುಗಳನ್ನು ನೀವು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ದಾರಿತಪ್ಪಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ, ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.


ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ, ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.


ಟಗರು, ಕುರಿ, ಹೋತ, ಹೋರಿ, ಅಂತು ಬಾಷಾನಿನ ಕೊಬ್ಬಿದ ಪಶುಗಳು, ಅಂದರೆ ಬಲಿಷ್ಠರು, ಭೂಪತಿಗಳು ಇವರ ಮಾಂಸ ಹಾಗೂ ರಕ್ತ ನಿಮಗೆ ಸಿಕ್ಕುವುವು.


ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.


ಪಟ್ಟಣ ಪ್ರದೇಶಗಳು ಹಾಳಾಗಿ ಮೇಕೆಮರಿಗಳಿಗೆ ಹುಲ್ಲುಗಾವಲುಗಳಾಗುವುವು. ಕುರಿಮರಿಗಳು ಅಲ್ಲಿ ಮೇಯುವುವು.


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ಹೇ ಸರ್ವೇಶ್ವರಾ, ನಮ್ಮನ್ನು ದಂಡಿಸಿ ಸುಧಾರಿಸಿ ಆದರೆ ಮಿತಿಮೀರಬೇಡ, ಕೋಪದಿಂದ ದಂಡಿಸಬೇಡಿ. ಇಲ್ಲವಾದರೆ ನಾವು ನಶಿಸಿ ನಾಶವಾದೇವು !


ಆದುದರಿಂದ ಈ ಜನರು ಕಹಿಯಾದ ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು; ವಿಷ ಬೆರೆತ ನೀರನ್ನು ಕುಡಿಯುವಂತೆ ಮಾಡುವೆನು.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಆಗ ಯೇಸು, “ನನ್ನನ್ನು ಕಳಿಸಿರುವುದು ತಪ್ಪಿಹೋದ ಕುರಿಗಳಂತಿರುವ ಇಸ್ರಯೇಲ್ ಜನಾಂಗದವರ ಬಳಿಗೆ ಮಾತ್ರ,” ಎಂದರು.


“ನನ್ನ ಸೊತ್ತಾದವರನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುತ್ತಿದ್ದೀರಿ! ಕಣ ತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿದ್ದೀರಿ. ಕೊಬ್ಬಿದ ಕುದುರೆಗಳಂತೆ ಕೆನೆಯುತ್ತಿದ್ದೀರಿ.


ಆದಕಾರಣ ಸರ್ವಶಕ್ತ ಸರ್ವೇಶ್ವರ ಪ್ರವಾದಿಗಳ ವಿಷಯದಲ್ಲಿ ಹೇಳುವುದನ್ನು ಕೇಳಿ: “ಇವರು ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು. ವಿಷಬೆರೆತ ನೀರನ್ನು ಕುಡಿಯುವಂತೆ ಮಾಡುವೆನು ಜೆರುಸಲೇಮಿನ ಈ ಪ್ರವಾದಿಗಳಿಂದ ಭ್ರಷ್ಟತನ ನಾಡಿನಲ್ಲೆಲ್ಲೂ ಹರಡಿರುವುದು.”


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ವಾಸಿಮಾಡುವನು ಮುರಿದ ಮನಸ್ಸುಳ್ಳವರನು I ಕಟ್ಟಿ ಗುಣಪಡಿಸುವನು ಅವರ ಗಾಯಗಳನು II


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ಇಗೋ ನೋಡು, ಅವರನ್ನು ಬರಮಾಡುವೆನು ಉತ್ತರದೇಶದಿಂದ ಅವರನ್ನು ಒಂದುಗೂಡಿಸುವೆನು ದಿಗಂತಗಳಿಂದ. ಅವರೊಡನೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.


“ನನ್ನ ಜನರು ದಾರಿತಪ್ಪಿದ ಕುರಿಗಳು. ಕುರಿಗಾಹಿಗಳು ಅವರನ್ನು ದಾರಿ ತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ. ನನ್ನ ಜನರು ತಮ್ಮ ಬೀಡುಗಳನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಿದ್ದಾರೆ.


ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಹರಿಸುತ್ತಾ, ನಿಮ್ಮನ್ನು ಜನಾಂಗಗಳಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಒಂದುಗೂಡಿಸಿ,


ಆ ದಿನದಲಿ ಇಂತೆನ್ನುವನು: “ದಂಡಿಸುವೆನು ನಿನ್ನನು ಬಾಧಿಸಿದವರನು ಉದ್ಧರಿಸುವೆನು ನಿನ್ನಲ್ಲಿ ಕುಂಟುವವರನು ಒಂದುಗೂಡಿಸುವೆನು ಚದರಿಹೋದವರನು ಬರಮಾಡುವೆನು ಅವಮಾನಿತರಿಗೆ ಸನ್ಮಾನವನು ಗಿಟ್ಟಿಸುವೆನು ನಿಮಗೆ ಜಗದಲ್ಲೆಲ್ಲ ಕೀರ್ತಿಯನು.


ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ I ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ II


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಹಿಂಡಿನಲ್ಲಿ ಶ್ರೇಷ್ಠವಾದುದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳನ್ನು ಅದರಲ್ಲಿ ಬೇಯಿಸು.”


ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಂತಲೇ ಕುರಿಗಾಹಿಗಳ ಮೇಲೆ ನನ್ನ ಕೋಪ ಭುಗಿಲೆದ್ದಿದೆ. ಆ ಮುಂದಾಳುಗಳ ಮೇಲೆ ನನ್ನ ದಂಡನೆ ಎರಗಲಿದೆ. ಸೇನಾಧೀಶ್ವರ ಸರ್ವೇಶ್ವರನಾದ ನಾನು ಜುದೇಯ ಕುಲವನ್ನು ನನ್ನ ಮಂದೆಯಂತೆ ಪರಿಪಾಲಿಸುವೆನು. ಅದನ್ನು ವೀರ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು