ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.
ನನಗೆ ವಿಮುಖರಾದ ದ್ರೋಹಿಗಳನ್ನು ನಿಮ್ಮಿಂದ ದೂರಕ್ಕೆ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಬಿಡುಗಡೆ ಮಾಡಿದರೂ ಅವರು ಇಸ್ರಯೇಲ್ ನಾಡಿಗೆ ಸೇರುವುದೇ ಇಲ್ಲ; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.