Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:24 - ಕನ್ನಡ ಸತ್ಯವೇದವು C.L. Bible (BSI)

24 ಸರ್ವೇಶ್ವರನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ದಾಸ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಅರಸನಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನಾದ ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರೊಂದಿಗೆ ವಾಸಿಸುತ್ತಾ ಅವರನ್ನು ಆಳುವನು. ಇದು ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೆಹೋವ ದೇವರಾದ ನಾನೇ ಅವುಗಳಿಗೆ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವೆನೆಂದು ಯೆಹೋವ ದೇವರಾದ ನಾನೇ ಅದನ್ನು ಮಾತಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:24
41 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ನಾಡಿನಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಹೌದು, ನನ್ನ ವಾಸಸ್ಥಾನವು ಅವರ ಮಧ್ಯೆಯಿರುವುದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯ ವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ, ತಮ್ಮನ್ನು ಇನ್ನು ಮುಂದೆ ಹೊಲೆಗೆ ಹೊಯ್ದುಕೊಳ್ಳರು. ಅವರು ಪಾಪ ಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಇಸ್ರಯೇಲ್ ವಂಶದವರು, ನಾನೇ ತಮ್ಮ ದೇವರಾದ ಸರ್ವೇಶ್ವರನೆಂದು ಅಂದಿನಿಂದ ಯಾವಾಗಲು ತಿಳಿದುಕೊಳ್ಳುವರು.


ಅವರು ನನಗೆ ಪ್ರಜೆಯಾಗಿರುವರು. ನಾನು ಅವರಿಗೆ ದೇವರಾಗಿರುವೆನು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ.


ಧ್ವಂಸ, ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.


ಅಲ್ಲಿ ಇಸ್ರಯೇಲಿನ ಪರ್ವತಗಳ ಮೇಲೆ, ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿರರು; ಭಿನ್ನರಾಜ್ಯದವರಾಗಿ ಇರರು.


ನನ್ನ ದಾಸ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗು ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ರಾಜರು ಸರ್ವೇಶ್ವರನ ಸನ್ನಿಧಿಯಲ್ಲಿ ಹವಿರ್ಭೋಜನ ಮಾಡುವುದಕ್ಕೆ ಇಲ್ಲಿ ಕುಳಿತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಬೇಕು,” ಎಂದು ಹೇಳಿದರು.


ರಾಜನ ಸೊತ್ತು ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂಮಿಗೂ ಉಭಯ ಪಾರ್ಶ್ವಗಳಲ್ಲಿರುವುದು; ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂಮಿಯ ಪಶ್ಚಿಮದಲ್ಲಿ ಅದು ಪಶ್ಚಿಮ ಕಡೆಗೆ ಹರಡುವುದು. ಪೂರ್ವದಲ್ಲಿ ಪೂರ್ವದ ಕಡೆಗೆ ಹರಡುವುದು. ಅದರ ಉದ್ದ ಪಶ್ಚಿಮದಿಂದ ಪೂರ್ವಕ್ಕೆ ಒಂದು ಕುಲದ ಸೊತ್ತಿನ ಉದ್ದಕ್ಕೆ ಸರಿಸಮಾನವಾಗಿರುವುದು.


ಮೀಸಲಾದ ಪವಿತ್ರಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂಮಿಯ ಎರಡು ಕಡೆಗಳಲ್ಲಿ ಮಿಕ್ಕ ಭೂಮಿ ರಾಜನ ಪಾಲಾಗಿರಲಿ; ಆ ಪಾಲು ಮೀಸಲಾದ ಕ್ಷೇತ್ರದ ಪೂರ್ವದ ಕಡೆ ಹನ್ನೆರಡುವರೆ ಕಿಲೋಮೀಟರ್ ಉದ್ದದ ಎಲ್ಲೆಯ ಪಕ್ಕದಲ್ಲೂ ಪೂರ್ವದ ಕಡೆ ಹನ್ನೆರಡುವರೆ ಕಿಲೋಮೀಟರ್ ಉದ್ದದ ಎಲ್ಲೆಯ ಪಕ್ಕದಲ್ಲೂ ಕುಲಗಳ ಪಾಲಿನಷ್ಟು ಉದ್ದವಾಗಿ ಹಬ್ಬುವುದು; ಅದು ರಾಜನದು; ಮೀಸಲಾದ ಪವಿತ್ರಕ್ಷೇತ್ರ ಹಾಗು ಪವಿತ್ರಾಲಯ ಅದರ ಎರಡು ಭಾಗಗಳ ಮಧ್ಯೆ ಇರುವುವು;


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಾನು ಇಸ್ರಯೇಲರನ್ನು ಆರಿಸಿಕೊಂಡ ದಿನದಂದು ಯಕೋಬ ಸಂತಾನದವರಿಗೆ ಮಾತುಕೊಟ್ಟು, ‘ನಾನೇ ನಿಮ್ಮ ದೇವರಾದ ಸರ್ವೇಶ್ವರ’ ಎಂದು ಈಜಿಪ್ಟ್ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆ.


‘ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಡಿಬಿಡಿ; ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿ; ನಾನು ನಿಮ್ಮ ದೇವರಾದ ಸರ್ವೇಶ್ವರ’ ಎಂದು ಅವರನ್ನು ಎಚ್ಚರಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು