Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:25 - ಕನ್ನಡ ಸತ್ಯವೇದವು C.L. Bible (BSI)

25 ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನಾನು ನನ್ನ ಕುರಿಗಳೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡುವೆನು. ಕೆಟ್ಟ ಕುರಿಗಳನ್ನು ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನ್ನ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ ‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:25
31 ತಿಳಿವುಗಳ ಹೋಲಿಕೆ  

ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ನಿಮ್ಮ ನಾಡಿಗೆ ಸುಕ್ಷೇಮವನ್ನು ಅನುಗ್ರಹಿಸುವೆನು. ಯಾರ ಭಯವೂ ಇಲ್ಲದೆ ನೀವು ನಿದ್ರಿಸುವಿರಿ; ದುಷ್ಟಮೃಗಗಳ ಕಾಟ ನಿಮ್ಮ ನಾಡಿಗಿರದು; ನಿಮ್ಮ ನಾಡು ಶತ್ರುಗಳ ಕತ್ತಿಗೆ ತುತ್ತಾಗದು.


ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡರು, ಕಾಡುಮೃಗಗಳು ನುಂಗವು; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ. ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ.


ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಹೌದು, ಅವನೇ ಸರ್ವೇಶ್ವರನ ಆಲಯವನ್ನು ಕಟ್ಟಿಸಿದ ಮೇಲೆ, ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಯಾಜಕನೊಬ್ಬನು ಅವನ ಆಸ್ಥಾನದಲ್ಲಿರುವನು. ಅವರಿಬ್ಬರೂ ಶಾಂತಿಸಮಾಧಾನದಿಂದಿರುವರು.


ಕ್ಷಾಮಡಾಮರದಲ್ಲೂ ನೀನು ನಗುತ್ತಿರುವೆ ಕಾಡುಮೃಗಗಳಿಗೂ ನೀನು ಅಂಜದಿರುವೆ.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಕಣತುಳಿಸುವ ಕೆಲಸ ದ್ರಾಕ್ಷಿ ಬೆಳೆಯ ಪರ್ಯಂತರವೂ ದ್ರಾಕ್ಷೀ ಬೆಳೆಯನ್ನು ಕೂಡಿಸುವ ಕೆಲಸ ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವುವು. ಸಮೃದ್ಧಿಯಾಗಿ ಊಟಮಾಡುವಿರಿ, ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.


ಆದಕಾರಣ ನಾನು ಅವನ ಸಂಗಡ ಸಮಾಧಾನದ ಒಪ್ಪಂದವನ್ನು ಮಾಡಿಕೊಳ್ಳುತ್ತೇನೆಂದು ತಿಳಿಸು.


ಹೊಲದ ಕಲ್ಲುಬಂಡೆಗಳೊಡನೆ ಒಪ್ಪಂದಮಾಡಿಕೊಳ್ಳುವೆ ಆ ಕಾಡುಪ್ರಾಣಿಗಳೊಂದಿಗೆ ನೆಮ್ಮದಿಯಿಂದ ಬಾಳುವೆ.


‘ಇಗೋ, ನಾನು ಕಡುಕೋಪದಿಂದಲೂ ರೋಷಾವೇಶದಿಂದಲೂ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಎಲ್ಲ ದೇಶಗಳಿಂದ ಈ ಸ್ಥಳಕ್ಕೆ ಮರಳಿ ಕರೆತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನಿನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.


ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳುವಾಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.


“ನಾನು ನಿಮ್ಮನ್ನು ಲೆಕ್ಕಿಸುವಂತೆ, ಕೋಲಿನ ಕೆಳಗೆ ಹೋಗುವಂತೆಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು,


ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”


ತೋಟದ ಮರಗಳು ಹಣ್ಣುಬಿಡುವುವು; ಹೊಲಗಳು ಒಳ್ಳೆಯ ಬೆಳೆಕೊಡುವುವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗಗಳನ್ನು ನಾನು ಮುರಿದುಹಾಕಿ, ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ, ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.


ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹುಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪಕ್ಕೆ ತುತ್ತಾಗದೆ ಜನರು ನೆಮ್ಮದಿಯಾಗಿ ನೆಲೆಗೊಂಡಿರುವರು.


ನಿಮ್ಮ ಭೂಮಿ ಫಲವತ್ತಾಗುವುದು; ನಿಮಗೆ ಸಮೃದ್ಧಿಯಾದ ಊಟ ದೊರಕುವುದು ಮತ್ತು ಆ ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.


ಮಲಗುವಾಗ ನಿನಗೆ ಹೆದರಿಕೆಯಿರದು, ಮಲಗಿದ ಮೇಲೆ ಸುಖನಿದ್ರೆ ಬರುವುದು.


ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”


“ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.


ನಾನು ಅವುಗಳ ಮೇಲೆ ಕುರಿಗಾಹಿಗಳನ್ನು ನೇಮಿಸುವೆನು. ಅವರು ಅವುಗಳನ್ನು ಪರಿಪಾಲಿಸುವರು. ಅವು ಇನ್ನು ಹೆದರಬೇಕಾಗಿಲ್ಲ, ಬೆದರಬೇಕಾಗಿಲ್ಲ. ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು